ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು, (ಏ.06): ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಪ್ರಚಾರದಲ್ಲಿ ತೊಡಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ.

ಸಣ್ಣ ಪ್ರಮಾಣದ ರೋಗ ಲಕ್ಷಣಗಳು ಕಂಡು ಬಂದಿರುವ ಕಾರಣ ಅವರು ಕೋವಿಡ್‌ ಪರೀಕ್ಷೆ ಮಾಡಿಕೊಂಡಿದ್ದು, ವದರಿಯಲ್ಲಿ ಪಾಸಿಟಿವ್‌ ಬಂದಿದೆ. 

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸುರುವ ಅವರು, ಯಾರೂ ಆತಂಕಪಡುವ ಅಗತ್ಯವಿಲ್ಲ. ಕೋವಿಡ್‌ ನಿಯಮಗಳ ಪ್ರಕಾರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.

ಶಾಕಿಂಗ್ ನ್ಯೂಸ್: ಕರ್ನಾಟಕದಲ್ಲಿ ಏ.6ರಂದು ಹೊಸ ದಾಖಲೆ ಬರೆದ ಕೊರೋನಾ 2ನೇ ಅಲೆ!

ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಕೊಂಡು ಸುರಕ್ಷಿತವಾಗಿರಿ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಶುಭ ಹಾರೈಕೆಗಳಿಂದ ಆದಷ್ಟು ಬೇಗ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

ಬಸವಕಲ್ಯಾಣ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಪರ ಈಶ್ವರ್ ಖಂಡ್ರೆ ಅವರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರು. ಆದ್ರೆ, ಇದೀಗ ಸೋಂಕು ತಗುಲಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಕೊಂಚ ಆತಂಕ ಮೂಡಿಸಿದೆ.