ಬೆಳಗಾವಿ, (ನ.29): ಬೆಳಗಾವಿ ಬೈ ಎಲೆಕ್ಷನ್‌ಗೆ ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆಯೂ ಅವರ ಬೆಂಬಲ ಬಿಜೆಪಿ ಸೇರುತ್ತಿರುವುದು ಅವರಿಗೆ ಆರಂಭಿಕ ಹಿನ್ನಡೆಯಾದಂತಾಗಿದೆ.

ಹೌದು..ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲಿಗ ಕೃಷ್ಣ ಅನಿಗೋಳಕರ ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ತೇಲಿ ಬಂತು ಅಚ್ಚರಿ ಹೆಸರು

ಇಂದು (ಭಾನುವಾರ) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಸಿ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ ಆಗುತ್ತೇನೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಗ್ರಾಮೀಣ ಕ್ಷೇತ್ರದ ಹಲವರು ನಾಯಕರು ಸೇರಿ ಕಾಂಗ್ರೆಸ್ ಪಕ್ಷವನ್ನು ಬಿಟ್ಟು, ಬಿಜೆಪಿ ಪಕ್ಷ ಸೇರ್ಪಡೆಯಾಗುವ ತೀರ್ಮಾನ ಕೈಗೊಂಡಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದವೂ ನಮ್ಮ ಮೇಲಿದೆ ಎಂದು ತಿಳಿಸಿದರು.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಣಕ್ಕಿಳಿಯುಲು ರೆಡಿ ಎಂದ ಕೈ ಕಲಿ..!

ರಾಜೀನಾಮೆ ಪತ್ರವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದು, ತಕ್ಷಣ ಅಂಗೀಕರಿಸುವಂತೆ ಕೋರಿದ್ದೇನೆ.  ಆದಷ್ಟು ಬೇಗನೆ ಬಿಜೆಪಿ ಸೇರುತ್ತೇವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವು ಕಾಂಗ್ರೆಸ್ ಕಾರ್ಯಕರ್ತರು ನನ್ನ ಜೊತೆ ಬಿಜೆಪಿ ಸೇರಲಿದ್ದಾರೆ ಎಂದರು.

ಈಚೆಗೆ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನೇಕಾರರ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಚುನಾಯಿತರಾಗಿದ್ದು,  ಈಗ ಬಿಜೆಪಿಯತ್ತ ಮುಖ ಮಾಡಿರುವುದರಿಂದ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಮತ್ತಷ್ಟು ಬಲಬಂದಂತಾಗಿದೆ.