ಬಿಜೆಪಿ ಸರ್ಕಾರ ಸುಳ್ಳು ಹೇಳುವುದರಲ್ಲಿ ನಂಬರ್‌ ಒನ್‌ ಆಗಿದೆ. 20 ಲಕ್ಷ ಕೋಟಿ ಕೋವಿಡ್‌ಗೆ ನೀಡುವುದಾಗಿ ಬಿಜೆಪಿ ಹೇಳಿತ್ತು. ಅದು ಕೂಡಾ ನೀಡಲಿಲ್ಲ. ಬಿಜೆಪಿ ಸರ್ಕಾರ ಮೊನ್ನೆಯಷ್ಟೇ ಘೋಷಿಸಿದ ಮೀಸಲಾತಿ ಯಾರಿಗೂ ಅರ್ಥವಾಗುತ್ತಿಲ್ಲ. ಸುಳ್ಳಿನ ಯುನಿವರ್ಸಿಟಿಯಿಂದ ಬಿಜೆಪಿ ಸುಳ್ಳು ಹೇಳುವುದನ್ನು ಕಲಿತಿದೆ ಎಂದ ಸತೀಶ ಜಾರಕಿಹೊಳಿ 

ವಿಜಯಪುರ(ಡಿ.31): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರ್ಕಾರ ಐಸಿಯುನಲ್ಲಿ ಇದೆ. ದಿನಗಣನೆ ಶುರುವಾಗಿದೆ. ಇನ್ನು ಮೂರ್ನಾಲ್ಕು ತಿಂಗಳು ಮಾತ್ರ ಬಿಜೆಪಿ ಸರ್ಕಾರದ ಆಯುಷ್ಯ ಉಳಿದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವ್ಯಂಗ್ಯವಾಡಿದರು.

ಶುಕ್ರವಾರ ನಗರದ ದರಬಾರ ಹೈಸ್ಕೂಲ್‌ ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷದ ಜಲಾಂದೋಲನ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿ, ಬಿಜೆಪಿ ಸರ್ಕಾರ ಸುಳ್ಳು ಹೇಳುವುದರಲ್ಲಿ ನಂಬರ್‌ ಒನ್‌ ಆಗಿದೆ. 20 ಲಕ್ಷ ಕೋಟಿ ಕೋವಿಡ್‌ಗೆ ನೀಡುವುದಾಗಿ ಬಿಜೆಪಿ ಹೇಳಿತ್ತು. ಅದು ಕೂಡಾ ನೀಡಲಿಲ್ಲ. ಬಿಜೆಪಿ ಸರ್ಕಾರ ಮೊನ್ನೆಯಷ್ಟೇ ಘೋಷಿಸಿದ ಮೀಸಲಾತಿ ಯಾರಿಗೂ ಅರ್ಥವಾಗುತ್ತಿಲ್ಲ. ಸುಳ್ಳಿನ ಯುನಿವರ್ಸಿಟಿಯಿಂದ ಬಿಜೆಪಿ ಸುಳ್ಳು ಹೇಳುವುದನ್ನು ಕಲಿತಿದೆ ಎಂದರು.

ಕಟೀಲ್ ಒಬ್ಬ ವಿದೂಷಕ, ಅವರ ಮಾತಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

ವಿಧಾನ ಪರಿಷತ್‌ ಪ್ರತಿ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ ಅವರು ಮಾತನಾಡಿ, ಕರ್ನಾಟಕದಲ್ಲಿ 26 ಅಣೆಕಟ್ಟೆಗಳಿವೆ. ಅವುಗಳಲ್ಲಿ 20 ಅಣೆಕಟ್ಟೆಗಳನ್ನು ಕಾಂಗ್ರೆಸ್‌ ನಿರ್ಮಿಸಿದೆ. ನೀರಾವರಿ ಯೋಜನೆಗಳಿಗೆ ಬಿಜೆಪಿ ಸ್ಪಂದಿಸುತ್ತಿಲ್ಲ. ಬೆಲೆ ಏರಿಕೆ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಹೇಳಿದರು.

ಮಾಜಿ ಸಚಿವ ಎಸ್‌.ಆರ್‌. ಪಾಟೀಲ ಮಾತನಾಡಿ, ಭೂಸ್ವಾದೀನಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾರುಕಟ್ಟೆದರ ನಿಗದಿಪಡಿಸಿದೆ. ಇದರಿಂದ ರೈತರಿಗೆ ಹೆಚ್ಚಿನ ಪರಿಹಾರ ಕೋರಿ ಕೋರ್ಚ್‌ಗೆ ಹೋಗಲು ಬರುವುದಿಲ್ಲ. ಅದನ್ನು ಮಾರ್ಗಸೂಚಿ ದರವಾಗಿ ಮಾರ್ಪಾಡು ಮಾಡಲು ಒತ್ತಾಯಿಸಿದರು.

Karnataka Assembly Election 2023: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ

ಮಾಜಿ ಸಚಿವ ಶಿವಾನಂದ ಪಾಟೀಲ ಅವರು ಮಾತನಾಡಿ, ರಾಜ್ಯದ ಜನತೆ ಬಿಜೆಪಿ ಭ್ರಷ್ಟಆಡಳಿತಕ್ಕೆ ಬೇಸತ್ತಿದ್ದಾರೆ. ಕಾಂಗ್ರೆಸ್‌ನತ್ತ ಜನರ ಚಿತ್ತ ನೆಟ್ಟಿದೆ. ಹೀಗಾಗಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೃಷ್ಣಾ ಯೋಜನೆಯ 3ನೇ ಹಂತದ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿ ಇದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಯ ಎಲ್ಲ ನೀರಾವರಿ ಯೋಜನೆಗಳನ್ನು ಅಭಿವೃದ್ಧಿ ಪಡಿಸಿದೆ. ಮೂರನೇ ಹಂತದ ಯೋಜನೆಯನ್ನು ಕೈಗೊಳ್ಳದೇ ಸುಳ್ಳು ಹೇಳುತ್ತಿದೆ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.