Breaking: ಬಿಜೆಪಿಯಿಂದ ಕೆಎಸ್ ಈಶ್ವರಪ್ಪ ಉಚ್ಛಾಟನೆ
ರಾಜ್ಯ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಬೆಂಗಳೂರು (ಏ.22): ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಮುಂದಿನ ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಬಿಜೆಪಿಯ ಬಿವೈ ರಾಘವೇಂದ್ರ ಹಾಗೂ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ಗೆ ಎದುರಾಳಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡಲಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಅಂತಿಮವಾಗಿ ಕಣದಲ್ಲಿದ್ದಾರೆ.
ಶಿವಮೊಗ್ಗ ಲೋಕಸಭೆಯಲ್ಲಿ 23 ಅಭ್ಯರ್ಥಿಗಳ ಜಟಾಪಟಿ; ಸಂಸದ ರಾಘವೇಂದ್ರನಿಗೆ ಈಶ್ವರಪ್ಪ ಕೊಡ್ತಾರಾ ಪೈಪೋಟಿ!
18ನೇ ಲೋಕಸಭೆಗೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಏಪ್ರಿಲ್ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು ಬೀದರ್) ರಂದು ನಡೆಯಲಿದೆ. ಫಲಿತಾಂಶ ಜೂನ್ 4ಕ್ಕೆ ಪ್ರಕಟವಾಗಲಿದೆ.
ನಾನ್ ಹುಟ್ಟಿದ ನಂತ್ರನೇ ಅಪ್ಪನಿಗೆ ಅದೃಷ್ಟ ಸಿಕ್ತು, 4 ತಿಂಗಳ ಮಗು ಇದ್ದಾಗ ಅಪ್ಪ ಕಾರ್ಪೋರೇಟರ್ ಆದ್ರು!