Karnataka Assembly Election: ಕೈ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ!

ಶಿವಮೊಗ್ಗದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕೈ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದರ ವಿರುದ್ಧ ಈಶ್ವರಪ್ಪ ಕಿಡಿಕಾರಿದ್ದಾರೆ.

KS Eshwarappa lashes out against Siddaramaiah about candidate announcement in koppala gow

ತೀರ್ಥಹಳ್ಳಿ (ನ.22): ಶಿವಮೊಗ್ಗದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕೈ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದರ ವಿರುದ್ಧ ಈಶ್ವರಪ್ಪ ಕಿಡಿಕಾರಿದ್ದಾರೆ. ದೇಶದ ರಾಜಕೀಯ ವ್ಯವಸ್ಥೆಯಲ್ಲಿ ವಿವಿಧ ಸ್ಥರಗಳ ಅಧಿಕಾರ ಹೊಂದಿರುವವರು ಅವರವರ ಇತಿಮಿತಿಗಳಲ್ಲಿ ನಡೆದುಕೊಳ್ಳಬೇಕು. ಕೊಪ್ಪಳದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ತಪ್ಪು. ಪಕ್ಷದ ಚುನಾವಣಾ ಸಮಿತಿ ಆಯ್ಕೆ ಮಾಡಿ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ. ಸಿದ್ದರಾಮಯ್ಯ 224 ಕ್ಷೇತ್ರಗಳಲ್ಲೂ ಕೂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿ. ನಿಮ್ಮ ಬೆಂಬಲಿಗರು ಮಾತ್ರ ಅಭ್ಯರ್ಥಿಗಳಾಗಿ ಘೋಷಣೆ ಆಗಬೇಕಾ? ಡಿಕೆ ಶಿವಕುಮಾರ್ ಅವರಿಗೆ ಕಿಂಚಿತ್ತು ಮಾನ ಮರ್ಯಾದೆ ಇದ್ದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ವಿಪಕ್ಷ ನಾಯಕನಿಗೆ ವಿಶೇಷ ಸ್ಥಾನಮಾನ ಏನಾದರೂ ಕೊಟ್ಟಿದ್ದೀರಾ? ಸತೀಶ್ ಜಾರಕಿಹೊಳಿ ಸೇರಿದಂತೆ ಕಾರ್ಯಧ್ಯಕ್ಷ ಹುದ್ದೆ ಹೊಂದಿರುವ ಎಲ್ಲರೂ ಐದು ಹತ್ತು ಸೀಟು ಅನೌನ್ಸ್ ಮಾಡಲಿ. ಅರ್ಜಿ ಹಾಕುವ ಸಂದರ್ಭ ಇನ್ನು ಮುಗಿಯುವ ಮೊದಲೇ ಟಿಕೆಟ್ ಘೋಷಣೆ ಮಾಡಿದ್ದಾರೆ. ಇದು ಒಂದು ರೀತಿಯ ರಾಜಕೀಯ ವ್ಯಭಿಚಾರ. ಬಿಜೆಪಿ ಪಕ್ಷ ಕಾಂಗ್ರೆಸ್ ವ್ಯವಸ್ಥೆಯಿಂದ ಬೆಳೆದಿಲ್ಲ. ರಾಷ್ಟ್ರೀಯ ವಿಚಾರಧಾರೆಗಳನ್ನು ಇಟ್ಟುಕೊಂಡು ಬೆಳೆದಿದೆ. ಸಿದ್ದರಾಮಯ್ಯ ಶುರು ಮಾಡುತ್ತಿದ್ದಂತೆ ಅವರ ಬಾಲಂಗೋಚಿಗಳು ಎಲ್ಲಾ ಶುರು ಮಾಡಿದ್ದಾರೆ ಎಂದಿದ್ದಾರೆ.

ವೋಟರ್ ಐಡಿ ಹಗರಣ ವಿಚಾರಕ್ಕೆ ಸಂಬಂಧಿಸಿ, ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ವೋಟರ್ ಐಡಿ ಹಗರಣ ಪ್ರಜಾಪ್ರಭುತ್ವಕ್ಕೆ ಅಪಮಾನ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ. ಮತದಾನದ ಹಕ್ಕನ್ನು ತರಲು ಹಲವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆಧುನಿಕ ವ್ಯವಸ್ಥೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕು ಮಾರಕವಾಗಿರಬಾರದು. ಇದನ್ನು ಯಾರೇ ಮಾಡಿದರೂ ಇದು ನಾಗರಿಕ ಸಮಾಜ ತಲೆತಗ್ಗಿಸುವ ವ್ಯವಸ್ಥೆ. ಕಳೆದ ಸರ್ಕಾರದ ಅವಧಿಯಲ್ಲೂ ಇದು ನಡೆದಿದೆ ಎನ್ನಲಾಗಿದೆ.

ದೆಹಲಿ ಅಂಗಳ ತಲುಪಿದ ವೋಟರ್‌ ಐಡಿ ಹಗರಣ: ನಾಳೆ ಚುನಾವಣಾ ಆಯೋಗಕ್ಕೆ 'ಕೈ' ದೂರು

ಈ ಬಗ್ಗೆ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರ ಗಮನ ಕೊಡಬೇಕು. ಬಿಜೆಪಿ,  ಕಾಂಗ್ರೆಸ್ ಎಂದು ನಾನು ಹೇಳುವುದಿಲ್ಲ ಯಾರದೇ ಅವಧಿಯಲ್ಲಿ ನಡೆದರೂ ತಪ್ಪು. ಈ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಮತದಾನಕ್ಕೆ ಬಾರದೆ ಸೋಂಬೇರಿಗಳಾಗಿ ಇರುವವರಿಗೆ ಇದು ಬೆಂಬಲ ನೀಡಿದಂತೆ ಆಗುತ್ತದೆ. ಪ್ರಜಾಪ್ರಭುತ್ವದ ಮತದಾನದ ಹಕ್ಕು ಸಂಪೂರ್ಣ ಸದುಪಯೋಗ ಆಗಬೇಕು. ವೋಟರ್ ಐಡಿ ಅಕ್ರಮಕ್ಕೆ ಸಂಬಂಧಪಟ್ಟಂತೆ ಊಹೆಗಳು ಸತ್ಯವೋ? ಸುಳ್ಳೋ? ಗೊತ್ತಿಲ್ಲ ಸಮಗ್ರ ತನಿಖೆ ನಡೆದಾಗ ಮಾತ್ರ ಸತ್ಯಾಂಶ ಹೊರಬರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

Latest Videos
Follow Us:
Download App:
  • android
  • ios