Asianet Suvarna News Asianet Suvarna News

ಲೋಕಸಭಾ ಚುನಾವಣೆ 2024: ನಾಮಪತ್ರ ಹಿಂಪಡೆಯದೆ ಕಣದಲ್ಲೇ ಉಳಿದ ಈಶ್ವರಪ್ಪ

ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಎದ್ದು ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದ್ದ ಈಶ್ವರಪ್ಪ ಕೊನೆ ಗಳಿಗೆಯಲ್ಲಾದರೂ ನಾಮಪತ್ರ ಹಿಂತೆಗೆದುಕೊಳ್ಳಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಇದರಿಂದಾಗಿ ಶಿವಮೊಗ್ಗದಲ್ಲಿ ಕೆ.ಎಸ್‌.ಈಶ್ವರಪ್ಪ, ಬಿ.ವೈ.ರಾಘವೇಂದ್ರ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 

KS Eshwarappa who did not Withdraw Nomination in Shivamogga in Lok Sabha Elections 2024 grg
Author
First Published Apr 23, 2024, 11:53 PM IST

ಶಿವಮೊಗ್ಗ(ಏ.23):  ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ವಾಪಸ್‌ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದಾರೆ.

ಇದರಿಂದಾಗಿ, ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಎದ್ದು ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದ್ದ ಈಶ್ವರಪ್ಪ ಕೊನೆ ಗಳಿಗೆಯಲ್ಲಾದರೂ ನಾಮಪತ್ರ ಹಿಂತೆಗೆದುಕೊಳ್ಳಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಇದರಿಂದಾಗಿ ಶಿವಮೊಗ್ಗದಲ್ಲಿ ಕೆ.ಎಸ್‌.ಈಶ್ವರಪ್ಪ, ಬಿ.ವೈ.ರಾಘವೇಂದ್ರ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಮಧ್ಯೆ, ಈಶ್ವರಪ್ಪನವರಿಗೆ ಚುನಾವಣಾ ಆಯೋಗವು ಕಬ್ಬಿನ ಜಲ್ಲೆ ಜೊತೆ ರೈತ ಚಿಹ್ನೆಯನ್ನು ನೀಡಿದೆ.

ಪ್ರಧಾನಿ ಮೋದಿಯವರ ಆಶೀರ್ವಾದದಿಂದ ರಾಜ್ಯದ 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಯಡಿಯೂರಪ್ಪ

ಈ ಮಧ್ಯೆ, ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ, ಬಿಜೆಪಿಯಿಂದ ಉಚ್ಛಾಟನೆಯನ್ನು ನಿರೀಕ್ಷಿಸಿದ್ದೇನೆ. ಆದರೆ, ಉಚ್ಛಾಟನೆಯ ಆದೇಶ ನನಗಿನ್ನೂ ಬಂದಿಲ್ಲ. ನನ್ನ ಗೆಲುವು ಖಚಿತ. ನಾನು ಗೆದ್ದು, ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವೆ ಎಂದರು.

Follow Us:
Download App:
  • android
  • ios