ಸ್ಪೀಕರ್ ವಿಶ್ವೆಶ್ವರ ಹೆಗಡೆ ಕಾಗೇರಿ ಅವರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಗೋಪಾಲಕೃಷ್ಣ

ವಿಜಯನಗರ(ಮಾ.31): ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅಧಿಕೃತವಾಗಿ ಇಂದು(ಶುಕ್ರವಾರ) ರಾಜೀನಾಮೆ ಸಲ್ಲಿಸಿದ್ದಾರೆ. ಹೌದು, ಗೋಪಾಲಕೃಷ್ಣ ಅವರು ಸ್ಪೀಕರ್ ವಿಶ್ವೆಶ್ವರ ಹೆಗಡೆ ಕಾಗೇರಿ ಅವರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್ ತೆಕ್ಕೆಗೆ ಬಿದ್ದಂತಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೋಪಾಲಕೃಷ್ಣ ಅವರು ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದಾರೆ. 70 ವರ್ಷ ದಾಟಿದವರಿಗೆ ಟಿಕೆಟ್ ಇಲ್ಲ ಎಂದಿರೋ‌ ಪರಿಣಾಮ ಬಿಜೆಪಿ ವಿಕೆಟ್ ಪತನವಾಗಿದೆ. 

ಮತ್ತೊಬ್ಬ ಬಿಜೆಪಿ ಹಿರಿಯ ನಾಯಕ ಕಾಂಗ್ರೆಸ್‌ಗೆ?

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.