'ಎಲ್ಲ CDಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ'

ಮಂಗಳೂರು ಗಲಭೆ ಪ್ರಕರಣ ವಿಚಾರವಾಗಿ ಸಿಡಿಗಳನ್ನ ಬಿಡುಗಡೆ ಮಾಡಿರುವ ಮಾಜಿ ಸಿಎಂ ಎಚ್. ಡಿ/ ಕುಮಾರಸ್ವಾಮಿ ಮೇಲೆ ರಾಜ್ಯ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಅದರಲ್ಲೂ ಈಶ್ವರಪ್ಪ, ಶೋಭಾ ಕರಂದ್ಲಾಜೆ ಹಾಗೂ ಸದಾನಂದಗೌಡ ಕುಮಾರಸ್ವಾಮಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ

Kumaraswamy Hits  Back at BJP Leaders In twitter over Mangaluru Violence Videos

ಬೆಂಗಳೂರು, [ಜ11]: ಮಂಗಳೂರು ಗಲಭೆ ಪ್ರಕರಣ ವಿಚಾರವಾಗಿ ಸಿಡಿಗಳನ್ನ ಬಿಡುಗಡೆ ಮಾಡಿದಕ್ಕೆ  ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. 

'ಎಚ್‌ಡಿಕೆ ಬಿಡುಗಡೆ ಮಾಡಿದ ವಿಡಿಯೋ ಕಟ್ ಆ್ಯಂಡ್‌ ಪೇಸ್ಟ್‌..'!

ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ.ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ. ಸಿ.ಡಿ ಬಗ್ಗೆ ಮಾತಾಡುವಾಗ ಬಿಜೆಪಿ ನಾಯಕರು ಎಚ್ಚರದಿಂದ ಇರಲಿ ಎಂದು ಗುಡುಗಿದರು.

ಮಂಗಳುರು ಗಲಭೆ ಬಗ್ಗೆ ಸತ್ಯಾಸತ್ಯತೆ ಕುರಿತು ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ರಾಜ್ಯ ಸರ್ಕಾರಕ್ಕೆ ಇದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ ಸಿ.ಡಿ ನೀವು ಸೃಷ್ಟಿಸಿಕೊಂಡಂತ ‘ಕಟ್ ಆ್ಯಂಡ್ ಪೇಸ್ಟ್’ ಬಿಜೆಪಿ ಸರ್ಕಾರ ಎಂದುಕೊಂಡಿದ್ದೀರಾ ಎಂದು ವಾಗ್ದಾಳಿ ನಡೆಸಿದರು.

ಸೀಕ್ವೆನ್ಸ್‌ ಬದಲಿಸಿ ವಿಡಿಯೋ ಬಿಡುಗಡೆ ಮಾಡಿದ್ರಾ ಕುಮಾರಸ್ವಾಮಿ..?

ಬೊಮ್ಮಾಯಿಗೆ ತಿರುಗೇಟು ಕೊಟ್ಟ HDK
ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ನಾನು ಬಿಡುಗಡೆ ಮಾಡಿದ ಮಂಗಳೂರು ಹಿಂಸಾಚಾರದ ವಿಡಿಯೋಗಳಿಗೆ ಇದು ಕಟ್ ಆಂಡ್ ಪೇಸ್ಟ್ ವೀಡಿಯೋ ಎಂದಿದ್ದಾರೆ. ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಗೃಹ ಸಚಿವ ಎಸ್‌ಆರ್‌ ಬೊಮ್ಮಾಯಿ ಅವರು ‘ಪೊಲೀಸರು ಗಲಭೆ ಮಾಡುವುದಿಲ್ಲ ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು’ ಎಂದಿದ್ದಾರೆ.  

ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ. ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್‌ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುತ್ತೀರಾ ಎಂದು ಪ್ರೆಶ್ನಿಸಿದ್ದಾರೆ.

"

HDK ವಿಡಿಯೋ ಬಗ್ಗೆ ಮಂಗಳೂರು ಆಯುಕ್ತರ ಪ್ರತಿಕ್ರಿಯೆ 
ಮಂಗಳೂರು ಗಲಭೆ ಕುರಿತು ಕುಮಾರಸ್ವಾಮಿ ಸಿಡಿ ಬಿಡುಗಡೆ ವಿಚಾರ ಕುರಿತು ಸಿಎಂ ಯಡಿಯೂರಪ್ಪ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷಾ ಪ್ರತಿಕ್ರಿಯಿಸಿದ್ದಾರೆ. ಸೀಕ್ವೆನ್ಸ್ ಬದಲಿಸಿ ಕುಮಾರಸ್ವಾಮಿಯವರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಸ್ಪಷ್ಟ ಉಲ್ಲಂಘನೆ ಮಾಡಿದ್ದಾರೆ ಎಂದು ಅದೇ ವಿಡಿಯೋಗಳಲ್ಲಿ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಆರೋಪವನ್ನ ತಳ್ಳಿಹಾಕಿದ್ದಾರೆ. 

Latest Videos
Follow Us:
Download App:
  • android
  • ios