ಸಚಿವರ ಕುಟುಂಬಕ್ಕೆ ಕೊರೋನಾ ಶಾಕ್: ಮನೆಯ 6 ಮಂದಿಗೆ ಸೋಂಕು ದೃಢ
ಕೊರೋನಾ ವೈರಸ್ ಮಹಾಮಾರಿ ಸಚಿವರೊಬ್ಬರ ಕುಟುಂಬಕ್ಕೆ ವಕ್ಕರಿಸಿಕೊಂಡಿದ್ದು, ಮನೆ ಆರು ಜನ ಸದಸ್ಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ತೀವ್ರ ಆತಂಕ ಮೂಡಿಸಿದೆ.
ನವದೆಹಲಿ, (ಅ.31): ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರ ಕುಟುಂಬಕ್ಕೆ ಕೊರೋನಾ ಶಾಕ್ ಕೊಟ್ಟಿದೆ. ಸಚಿವರ ಪತ್ನಿ ಸೇರಿದಂತೆ ಅವರ ಕುಟುಂಬದ ಒಟ್ಟು 6 ಮಂದಿಗೆ ಕೋವಿಡ್ -19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ಉತ್ತರ ಪ್ರದೇಶದ ಬರೇಲಿ ಕ್ಷೇತ್ರದ ಸಂಸತ್ ಸದಸ್ಯ ಸಂತೋಷ ಗಂಗ್ವಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು ನೆಗೆಟಿವ್ ವರದಿ ಬಂದಿದೆ. ಆದರೆ ನಮ್ಮ ಕುಟುಂಬದ ಇತರ 6 ಸದಸ್ಯರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರೋ ಸಚಿವರ ಆರೋಗ್ಯ ಸ್ಥಿತಿ ಚಿಂತಾಜನಕ
ನಮ್ಮ ಕುಟುಂಬ ಸದಸ್ಯರು ಇತ್ತೀಚೆಗೆ ದೆಹಲಿಗೆ ತೆರಳಿದ್ದು, ಅಲ್ಲಿ ಅವರಿಗೆ ವೈರಸ್ ಸೋಂಕಿರಬಹುದೆಂದು ಭಾವಿಸಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದು, ಸದ್ಯ ಅವರೆಲ್ಲರೂ ಫರಿದಾಬಾದ್‌ನ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಅವರ ಕುಟುಂಬ ಬಾಣಸಿಗನ ಅನಾರೋಗ್ಯಕ್ಕೆ ಒಳಗಾಗಿರುವುದರಿಂದ ಆತನನ್ನು ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು
ಹೇಳಿದರು. ಅಷ್ಟೇ ಅಲ್ಲದೇ ತಮ್ಮ ಸಚಿವಾಲಯದ ಕೆಲವು ಅಧಿಕಾರಿಗಳು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ, ಅವರೆಲ್ಲರನ್ನು ಕ್ವಾರಂಟೈನ್ ನಲ್ಲಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದರು.