ಪಕ್ಕಾ ಮಾಹಿತಿ ಇದ್ದೇ ಕೋಟ ವಿರುದ್ದ ಸಿಎಂ ಆರೋಪ: ಹೆಬ್ಬಾಳ್ಕರ್
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರೂ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮರ್ಥಿಸಿಕೊಂಡಿದ್ದಾರೆ.
ಉಡುಪಿ (ಜು.22): ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರೂ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮರ್ಥಿಸಿಕೊಂಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದನದಲ್ಲಿ ಸಿಎಂ(CM Siddaramaia) ಅವರು ಕೋಟ(MP Kota shrinivas poojary) ಅವರ ಹೆಸರು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಸುಮ್ಮನೆ ರಾಜಕೀಯಕ್ಕಾಗಿ ಆರೋಪ ಮಾಡುವ ಜಾಯಮಾನದವರಲ್ಲ. ಅವರು ಜವಾಬ್ದಾರಿ ಸ್ಥಾನದಲ್ಲಿದ್ದಾರೆ, 15 ಬಾರಿ ಬಜೆಟ್ ಮಂಡಿಸಿದ್ದಾರೆ, ಪಕ್ಕಾ ಮಾಹಿತಿ ಇದ್ದರೆ ಮಾತ್ರ ಆರೋಪ ಮಾಡುತ್ತಾರೆ ಎಂದರು. ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಉತ್ತರ ಕೊಡುವಂತೆ ಕೋಟ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ, ಸಿದ್ದರಾಮಯ್ಯ ತಕ್ಕ ಉತ್ತರ ಕೊಡುತ್ತಾರೆ ಎಂದರು.
ನನ್ನ ವಿರುದ್ಧ ಮಾಡಿರುವ ಆರೋಪ ವಾಪಸ್ ಪಡೆಯಿರಿ: ಸಿಎಂಗೆ ವಾರ ಗಡುವು ಕೊಟ್ಟ ಸಂಸದ ಕೋಟ
ರಾಜ್ಯದಲ್ಲಿ ಮಳೆಯಿಂದ ಮನೆ ಕಳೆದುಕೊಂಡವರಿಗೆ ನೀಡುವ ಪರಿಹಾರ ಮೊತ್ತದ ಬಗ್ಗೆ ಸ್ಪಷ್ಟತೆ ಇಲ್ಲ. ಹಿಂದಿನ ಸರ್ಕಾರ 5 ಲಕ್ಷ ರು.ನೀಡುತ್ತಿತ್ತು, ಈಗ 1.20 ರು.ಪರಿಹಾರ ನೀಡಲಾಗುತ್ತಿದೆ ಎಂಬ ಬಗ್ಗೆ ತಮಗೆ ಸ್ಪಷ್ಟತೆ ಇಲ್ಲ. ಕಳೆದ ವರ್ಷ ಮಳೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರು. ಕೊಟ್ಟಿದ್ದೇವೆ. ಈ ಬಾರಿ ಎಷ್ಟು ಕೊಡಲಾಗುತ್ತಿದೆ ಎಂದು ತಿಳಿದಿಲ್ಲ, ಈ ಬಗ್ಗೆ ನಾನು ಗೊಂದಲ ಸೃಷ್ಟಿಸುವುದಿಲ್ಲ. ಆದಷ್ಟು ಬೇಗ ಈ ಬಗ್ಗೆ ತಿಳಿದುಕೊಂಡು ಉತ್ತರಿಸುತ್ತೇನೆ ಎಂದರು.