ಬೆಳಗಾವಿಯ ಪೀರನವಾಡಿಯಲ್ಲಿ ಶಿವಾಜಿ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದುಕೊಮಡಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.
ಧಾರವಾಡ, (ಆ.28): ಬೆಳಗಾವಿಯ ಪೀರನವಾಡಿಯಲ್ಲಿ ಪುತ್ಥಳಿ ಗಲಾಟೆ ಸಂಬಂಧ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಇಂದು (ಶುಕ್ರವಾರ) ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮಹಾರಾಜ ಇಬ್ಬರೂ ನಮ್ಮ ದೇಶದ ವೀರ ಪುತ್ರರು. ಪುತ್ಥಳಿ ಗಲಾಟೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು ಆಗ್ರಹಿಸಿದರು.
"
ಬೆಳಗಾವಿ: ರಾಯಣ್ಣ ಮೂರ್ತಿ ತೆರವುಗೊಳಿಸುವಂತೆ MES ಪಟ್ಟು
ಸಂಬಂಧಿಸಿದವರು ಶಾಂತ ರೀತಿಯಿಂದ ಕುಳಿತು ಸಮಸ್ಯೆಯನ್ನು ಬಗೆಹರಿಸಬೇಕು ಎಂದ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಎಂಇಎಸ್ ಬಗ್ಗೆ ಯಾವಾಗಲೂ ವಿರೋಧಿಸುತ್ತ ಬಂದಿದ್ದೇನೆ. ಎಂಇಎಸ್‌ನ ಈ ಕೃತ್ಯಗಳನ್ನು ಖಂಡಿಸುತ್ತೇವೆ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿದರು.
ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮಹಾರಾಜ ಇಬ್ಬರೂ ವೀರ ಯೋಧರು. ಸಂಗೊಳ್ಳಿ ರಾಯಣ್ಣನ ತ್ಯಾಗ, ಬಲಿದಾನ ದೊಡ್ಡದು. ಅಂತಹ ವೀರ ಒಂದು ಕಡೆ. ಈ ದೇಶವನ್ನು ಒಗ್ಗಟ್ಟಾಗಿ ಕಟ್ಟಿದ ಶಿವಾಜಿ ಮಹಾರಾಜರು ಇನ್ನೊಂದು ಕಡೆ. ಇವರಿಬ್ಬರೂ ದೇಶದ ಹೆಮ್ಮೆ ಮತ್ತು ವಿಶ್ವಮಾನವರು. ಇಂಥವರ ವಿಷಯದಲ್ಲಿ ಪುತ್ಥಳಿ ರಾಜಕಾರಣ ಆಗಬಾರದು ಎಂದರು.
ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋ ರಾತ್ರಿ ತೆರವುಗೊಳಿಸಲಾಗಿದ್ದ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನ ಮತ್ತೆ ಪುನಃ ಅದೇ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದೆ. ಆದ್ರೆ, ಇದಕ್ಕೆ ಪರಾಠಿಗರು ಕಿರಿಕ್ ಶುರು ಮಾಡಿದ್ದಾರೆ.
"
