ಹುಬ್ಬಳ್ಳಿ, (ಮಾ.07): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ.  ಪ್ರಕರಣ ರಾಜ್ಯದಲ್ಲಿ ಸಂಚನ ಮೂಡಿಸಿದೆ. ಇದನ್ನು ಕೆಲವರು ಫೇಕ್ ಅಂತಿದ್ರೆ, ಇನ್ನೂ ಕೆಲವರು ಇದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ.

ಅದರಲ್ಲೂ  ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ ಬೆಂಬಲಿಗರು ಈ ವಿಡಿಯೋ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದಾರೆ ಎನ್ನುವ  ಗಂಭೀರ ಆರೋಪ ಮಾಡುತ್ತಿದ್ದಾರೆ. 

ರಾಸಲೀಲೆ ಸಿ.ಡಿ: ರಮೇಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕಿ ಗರಂ

ಇನ್ನು ಈ ಬಗ್ಗೆ ಸ್ವತಃ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು (ಶನಿವಾರ) ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದು, ಸಿಡಿ ಬಹಿರಂಗ ವಿಚಾರದಲ್ಲಿ ನಾನು ಏನೂ ಮಾತನಾಡುವುದಿಲ್ಲ ಎಂದರು.

ಸಿಡಿ ವಿಚಾರದಲ್ಲಿ ನನ್ನ ಹೆಸರನ್ನು ಏಕೆ ಎಳೆದು ತರುತ್ತಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ರಾಜಕಾರಣಿಗಳು ಮತ್ತೊಬ್ಬರಿಗೆ ಮಾದರಿಯಾಗುವಂತೆ ಇರಬೇಕು. ತನಿಖೆಯ ನಂತರ ಸತ್ಯಾಂಶ ಗೊತ್ತಾಗುತ್ತದೆ. ನಾನು ಆ ವಿಚಾರದಲ್ಲಿ ಏನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗೋಕಾಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿರುವುದಕ್ಕೆ ಅದು ಏಕೆ ಪ್ರಸ್ತಾಪಿಸಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅದರ ಬಗ್ಗೆ ಏನೂ ಮಾತಾಡಲ್ಲ. ಬೇರೆ ಏನಾದರೂ ಕೇಳಿ ಎಂದು ಹೇಳಿದರು.

ಮೊದಲಿನಿಂದಲೂ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಅವರು ರಾಜಕೀಯ ಬದ್ಧ ವೈರಿಗಳು. ಮಾಧ್ಯಮಗಳ ಮುಂದೆ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ಬಂದವರು.

ಇನ್ನು ಇದೇ ವಿಚಾರವಾಗಿ ಸಚಿವ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯಿಸಿ, ರಾಸಲೀಲೆ ಹಿಂದೆ ಕನಕಪುರ, ಬೆಳಗಾವಿಯ ಕೈವಾಡವಿದೆ ಎಂದು ಶಂಕೆ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.