ಕಾಂಗ್ರೆಸ್‌ ಈಗ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ: ಲಕ್ಷ್ಮೀ ಹೆಬ್ಬಾಳಕರ

*   ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಪ್ರಯತ್ನ
*   ರಾಜ್ಯ, ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ
*   ಸವದತ್ತಿ ಕ್ಷೇತ್ರದಿಂದ ಸತೀಶ ಜಾರಕಿಹೊಳಿ ಸ್ಪರ್ಧೆ: ಲಕ್ಷ್ಮೀ ಹೆಬ್ಬಾಳಕರ ಪ್ರತಿಕ್ರಿಯೆ
 

Lakshmi Hebbalkar Talks Over Congress grg

ಬೆಳಗಾವಿ(ಜೂ.30):  ಸವದತ್ತಿ ಕ್ಷೇತ್ರದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಸ ಜಾರಕಿಹೊಳಿ ಸ್ಪರ್ಧೆ ಮಾಡುವ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದತ್ತಿ ಕ್ಷೇತ್ರದ ಮೂಲತಃ ಕಾಂಗ್ರೆಸ್‌ ಕ್ಷೇತ್ರವಾಗಿದೆ. ಅಲ್ಲಿ ಗೆಲ್ಲುವುದೇ ನಮ್ಮ ಗುರಿಯಾಗಿದೆ. ಈ ಭಾಗದಲ್ಲಿ ಸತೀಶ ಜಾರಕಿಹೊಳಿ ಅವರು ಬೇರುಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡುತ್ತಿದ್ದಾರೆ ಎಂದರು.

Karnataka Politics: 40 ಪರ್ಸೆಂಟೇಜ್ ಪಡೆಯುವುದೇ ಅಚ್ಛೇ ದಿನವಾ?: ಹೆಬ್ಬಾಳಕರ್‌

ಕಾಂಗ್ರೆಸ್‌ ಈಗ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಇಂದಿರಾಗಾಂಧಿ ಅವರು ಕಷ್ಟದಲ್ಲಿದ್ದಾಗ ಇದೇ ಕರ್ನಾಟಕದ ಜನರು ಕಾಂಗ್ರೆಸ್‌ಗೆ ಕೈ ಹಿಡಿದಿದ್ದರು. ಆಗ ಮತ್ತೆ ಇಂದಿರಾ ಗಾಂಧಿ ಅವರಿಗೆ ಶಕ್ತಿ ಬಂದಿತ್ತು. ಅದೇ ಮಾದರಿಯಲ್ಲೇ ಈ ಬಾರಿಯೂ ಆಗುತ್ತದೆ. ಮತ್ತೇ ಕಾಂಗ್ರೆಸ್‌ ಪಕ್ಷ ಪುಟಿದೇಳಲಿದೆ. ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳು ಸಿದ್ದತೆ ನಡೆಸಿವೆ. ಈ ಬಾರಿ ಕಾಂಗ್ರೆಸ್‌ ಜನರ ವಿಶ್ವಾಸ ಗಳಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯ, ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ:

ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಅಭದ್ರ ಮಾಡಿದರೆ, ಮುಂಬರುವ ದಿನಗಳಲ್ಲಿ ಪ್ರಜಾಪ್ರಭುತ್ವಕ್ಕೆ ಭದ್ರತೆ ಇಲ್ಲ ಎನ್ನುವ ಭಾಸವಾಗುತ್ತಿದೆ. ರಾಜ್ಯ, ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ರಾಜ್ಯದಲ್ಲಿ ಒಂದು ಅಸಹಾಯಕತೆ ಸೃಷ್ಠಿಯಾಗುತ್ತಿದೆ. ಮತದಾರರಿಗೆ, ಸಂವಿಧಾನಕ್ಕೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ. ಜನರಿಂದ ಆಯ್ಕೆಯಾದ ಸರಕಾರಗಳನ್ನು ಅಭದ್ರ ಮಾಡಿದರೆ ಚುನಾವಣೆ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಶಾಸಕರನ್ನು ಕುದುರೆ ವ್ಯಾಪಾರ ಮಾಡುವುದರ ಮೂಲಕ ರಾಜಕೀಯಕ್ಕೆ ವ್ಯತಿರಿಕ್ತ ಪರಿಣಾಮವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಇದು ಪ್ರಜಾ ಪ್ರಭುತ್ವಕ್ಕೆ ಶೋಭೆ ತರುವುದಿಲ್ಲ ಎಂದರು.

ಸರ್ಕಾರಗಳನ್ನು ಉಳಿಸುವ ಸಂದರ್ಭದಲ್ಲಿ ಬಿಜೆಪಿಯವರು ಇಡಿ ನೋಟಿಸ್‌ ನೀಡಿ ಬೇದರಿಕೆ ಹಾಕುವ ತಂತ್ರ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆಯ ಮುಖಂಡ ಸಂಜಯ ರಾವತ ಅವರಿಗೆ ಇಡಿ ಬುಲಾವ್‌ ಮಾಡುತ್ತಾರೆ ಎಂದರೆ ಬೆಕ್ಕು ಕಣ್ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗುವುದಿಲ್ಲ ಎಂದು ಕೊಂಡಿದ್ದಾರೆ. ಮೊದಲು ಬೆಕ್ಕಿನ ಪಾತ್ರ ಮಾಡುವವರು ಯಾರು ಎನ್ನುವುದನ್ನು ಕಂಡು ಹಿಡಿಯಬೇಕು ಎಂದು ಹೇಳಿದರು. ಎಲ್ಲಿಯವರೆಗೆ ಯುವಕರು, ಪ್ರಜ್ಞಾವಂತರು, ಮತದಾರರು ಬಿಜೆಪಿಯ ಹಿಡನ್‌ ಅಜೆಂಡ್‌, ಆರ್‌ಎಸ್‌ಎಸ್‌ ನೀತಿ ತಿಳಿದುಕೊಳ್ಳುವುದಿಲ್ಲವೋ ಅಲ್ಲಿಯವರೇಗೆ ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾಗುವುದಿಲ್ಲ ಎಂದು ಹೇಳಿದರು.
 

Latest Videos
Follow Us:
Download App:
  • android
  • ios