ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಆರ್.ಅಶೋಕ್
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಜುಲೈ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 43 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ವಿಧಾನಸಭೆ (ಡಿ.14): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಜುಲೈ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 43 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನಿಲುವಳಿ ಸೂಚನೆಗೆ ಮಂಡಿಸಲು ಮುಂದಾದಾಗ ಸಭಾಧ್ಯಕ್ಷ ಯು.ಟಿ.ಖಾದರ್ ಆಕ್ಷೇಪ ವ್ಯಕ್ತಪಡಿಸಿದರು. ಕಾನೂನು ಸುವಸ್ಥೆ ನಿಲುವಳಿ ಸೂಚನೆಗೆ ಬರುವುದಿಲ್ಲ ಎಂದು ಹೇಳಿದರು. ಇದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಹ ನಿಲುವಳಿ ಸೂಚನೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
ನಂತರ ಅಶೋಕ್, ವಿಷಯವನ್ನು ಪ್ರಸ್ತಾಪಿಸಲು ಅವ ಕಾಶ ನೀಡುವಂತೆ ಕೋರಿದರು. ನಂತರ ಸಭಾಧ್ಯಕ್ಷರು ಪ್ರಸ್ತಾಪಿಸಲು ಅವಕಾಶ ನೀಡಿದರು. ಈ ವೇಳೆ ಮಾತನಾಡಿದ ಅಶೋಕ್, ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 1,349 ಗಲಭೆ, 1211 ಫೋಕ್ಸೋ ಪ್ರಕರಣ, 60 ಡಕಾಯಿತಿ, ೮೦೦ಕ್ಕೂ ಹೆಚ್ಚು ಸೈಬರ್ ಅಪರಾಧ ಸೇರಿದಂತೆ ಒಟ್ಟು 43 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಉತ್ತರ ಕರ್ನಾಟದಲ್ಲಿ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲಿಯೇ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅಮಾನವೀಯ ನಡೆದುಕೊಂಡಿರುವುದು ಸೇರಿದಂತೆ ಹಲವು ಘಟನೆ ನಡೆದಿವೆ.
ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿದರು. ವಕೀಲರು ಮತ್ತು ಪೊಲೀಸರ ನಡುವೆ ಗಲಾಟೆಯಾಗಿ ಪ್ರತಿಭಟನೆಗಳುನಡೆಯುತ್ತಿವೆ. ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೂ ಧರಣಿ ನಡೆಸಿರುವುದು ಸರ್ಕಾರ ವೈಫಲ್ಯತೆ ಕೈಗನ್ನಡಿಯಾಗಿದೆ. ವಕೀಲರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರ್ಕಾರ ಸುಮ್ಮನೆ ಇದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನಾದರೂ ಸರ್ಕಾರ ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು.
ಜಮೀರ್, ಜಿನ್ನಾ, ಒವೈಸಿ ಚಿತ್ರ ಹಾಕಿ: ರಾಜ್ಯದಲ್ಲಿ ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಸಭಾಧ್ಯಕ್ಷರ ಪೀಠದ ಹಿಂಭಾಗ ಸಚಿವ ಜಮೀರ್ ಅಹಮದ್‌ಖಾನ್, ಪಾಕಿಸ್ತಾನ ರಚನೆಗೆ ಕಾರಣರಾದ ಮೊಹಮ್ಮದ್ ಅಲಿ ಜಿನ್ನಾ, ಎಐಎಂಐಎಂ ಪಕ್ಷದ ಅಸಾದುದ್ದೀನ್ ಓವೈಸಿ ಫೋಟೋಗಳನ್ನು ಹಾಕಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಸಚಿವ ಜಮೀರ್ ಅಹಮದ್ ಹೇಳಿಕೆ ಖಂಡಿಸಿ ಹಾಗೂ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ವೇಳೆ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಉದ್ದೇಶಿಸಿ ಅಶೋಕ್ ಮಾತನಾಡಿದರು.
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 83,000 ಕೋಟಿ ರು. ಅನ್ಯಾಯ: ಸಿಎಂ ಸಿದ್ದರಾಮಯ್ಯ
ಸದನದ ಬಾವಿಯಲ್ಲೇ ನಿಂತು ಮಾತನಾಡಿದ ಅಶೋಕ್, ಜಮೀರ್ ಅಹಮದ್ ಖಾನ್ ಅವರ ಹೇಳಿಕೆಯನ್ನು ಸ್ಪೀಕರ್ ಆದ ನೀವು ಕನಿಷ್ಠ ತಪ್ಪು ಎಂದೂ ಕೂಡ ಹೇಳಿಲ್ಲ. ಅವರ ಫೋಟೋ ಅನ್ನು ನಿಮ್ಮ ಪೀಠದ ಹಿಂಭಾಗದಲ್ಲಿ ಬಸವಣ್ಣನವರ ಪಕ್ಕದಲ್ಲಿ ಹಾಕಿಕೊಳ್ಳಿ. ಸಾವರ್ಕರ್ ಫೋಟೋ ಪಕ್ಕದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹಾಗೂ ಓವೈಸಿ ಫೋಟೋ ಹಾಕಿ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೂ ಸಾರ್ಥಕ ಆಗುತ್ತದೆ ಎಂದು ಹೇಳಿದರು.