ನವದೆಹಲಿ(ನ.28): ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಕಂದಾಯ ಸಚಿವ ಆರ್‌.ಅಶೋಕ ಅವರು ಶುಕ್ರವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

"

ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಯ ವ್ಯಾಪ್ತಿಯಲ್ಲಿ ಹಲವು ಭೂಪ್ರದೇಶಗಳು ಒಳಗೊಂಡಿರುವುದರಿಂದ ರಸ್ತೆ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿ ವಾಹನ ದಟ್ಟಣೆ ಮಿತಿ ಮೀರುತ್ತಿದೆ. 

ದಿಲ್ಲಿಯಲ್ಲಿ ಕರ್ನಾಟಕ ರಾಜಕೀಯ ಜೋರು: ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ

ಈಗಾಗಲೇ ಕಂದಾಯ ಇಲಾಖೆಯಿಂದ ರಕ್ಷಣಾ ಇಲಾಖೆಗೆ ಪರ್ಯಾಯ ಜಾಗವನ್ನು ನೀಡಲು ಕ್ರಮ ವಹಿಸಲಾಗಿದ್ದು ರಸ್ತೆ ವಿಸ್ತರಣೆಗೆ ತೊಂದರೆ ಉಂಟಾಗುತ್ತಿರುವ ಜಾಗಗಳನ್ನು ತೆರವು ಮಾಡಿಕೊಡುವಂತೆ ರಕ್ಷಣಾ ಮಂತ್ರಿಗಳಿಗೆ ಮನವಿ ನೀಡಲಾಯಿತು.