Asianet Suvarna News Asianet Suvarna News

ಟಿಕೆಟ್‌ಗೆ ಭಿಕ್ಷೆ ಪಾತ್ರೆ ಹಿಡಿದು ತಿರುಗಲ್ಲ, ನಾನು ಸ್ವಾಭಿಮಾನಿ ರಾಜಕಾರಣಿ: ಲಕ್ಷ್ಮಣ ಸವದಿ

ನೀವು ಇನ್ನೊಮ್ಮೆ ಮುಖ್ಯಮಂತ್ರಿ ಆಗಬೇಕು. ಆದರೆ, ನೀವು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಚಾನ್ಸ್‌ ಕಡಿಮೆ. ಆದ್ರ ಪ್ರಧಾನಿ ಆಗಬಹುದು, ಬಹುತೇಕ ರಮೇಶ ಜಾರಕಿಹೊಳಿ ಸಿಎಂ ಆದರೂ ಆಗಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಲಕ್ಷ್ಮಣ ಸವದಿ ಅಸಮಾಧಾನ ಹೊರಹಾಕಿದರು.

Laxman Savadi Slams On Basavaraj Bommai And Ramesh Jarkiholi gvd
Author
First Published Apr 13, 2023, 4:20 AM IST

ಅಥಣಿ (ಏ.13): ನೀವು ಇನ್ನೊಮ್ಮೆ ಮುಖ್ಯಮಂತ್ರಿ ಆಗಬೇಕು. ಆದರೆ, ನೀವು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಚಾನ್ಸ್‌ ಕಡಿಮೆ. ಆದ್ರ ಪ್ರಧಾನಿ ಆಗಬಹುದು, ಬಹುತೇಕ ರಮೇಶ ಜಾರಕಿಹೊಳಿ ಸಿಎಂ ಆದರೂ ಆಗಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಲಕ್ಷ್ಮಣ ಸವದಿ ಅಸಮಾಧಾನ ಹೊರಹಾಕಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವವನು ನಾನಲ್ಲ. ನಾನು ಸ್ವಾಭಿಮಾನಿ ರಾಜಕಾರಣಿ. ಲಜ್ಜೆಗೆಟ್ಟರಾಜಕಾರಣಿ ಅಲ್ಲ. ಅಧಿಕಾರದ ಅಮಲಿನಲ್ಲಿ ನಾನಿಲ್ಲ. ಜಿಲ್ಲೆಯಲ್ಲಿ ಯಾರ ಬೆನ್ನಿಗೆ ಚೂರಿ ಹಾಕಿಲ್ಲ ಎಂದು ಕಿಡಿಕಾರಿದರು.

ಭಾರತೀಯ ಜನತಾ ಪಕ್ಷದ ವರಿಷ್ಠರು ಈ ಬಾರಿ ಅಥಣಿ ವಿಧಾನಭೆ ಮತಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡುತ್ತಾರೆಂಬ ಆತ್ಮವಿಶ್ವಾಸ ಹೊಂದಿದ್ದೆ. ಮೊದಲಿನ ಬಿಜೆಪಿಗೂ ಈಗಿನ ಬಿಜೆಪಿಗೂ ಬಹಳ ವ್ಯತ್ಯಾಸವಿದೆ. ತತ್ವ ಸಿದ್ಧಾಂತಗಳನ್ನ ಗಾಳಿಗೆ ತೂರಿ ಪ್ರಾಮಾಣಿಕ ಮತ್ತು ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ ನಮ್ಮಂತಹ ಕಾರ್ಯಕರ್ತರನ್ನು ಕಡೆಗಣಿಸಿರುವುದರಿಂದ ನನ್ನ ಮನಸ್ಸಿಗೆ ಬಹಳಷ್ಟುಬೇಸರ ತಂದಿದೆ. ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ವಿಧಾನ ಪರಿಷತ್‌ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದರು.

ಬಿಜೆಪಿಗೆ ರಾಜೀನಾಮೆ ನೀಡಲು ಸೊಗಡು ಶಿವಣ್ಣ ತೀರ್ಮಾನ: ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ

ನನ್ನ ಕ್ಷೇತ್ರದ ಜನರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು, ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನವನ್ನು ಮೊದಲು ತ್ಯಜಿಸಿ ಬನ್ನಿ, ಮುಂದಿನ ನಿರ್ಧಾರವನ್ನು ನಾವು ಹೇಳುತ್ತೇವೆ ಎಂದಿದ್ದಾರೆ. ಹೀಗಾಗಿ ರಾಜೀನಾಮೆ ನೀಡಲು ನಿರ್ಧಾರ ಕೈಗೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ನನ್ನಿಂದ ತಪ್ಪಾಗಿದ್ದರೆ ಮಗನೆಂದು ಕ್ಷಮಿಸಿ: ಕಳೆದ 20 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ, ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಮತಕ್ಷೇತ್ರದ ಜನತೆಯ ಆಶೀರ್ವಾದದಿಂದ ಶಾಸಕನಾಗಿ ಸಚಿವನಾಗಿ, ರಾಜ್ಯದ ಉಪಮುಖ್ಯಮಂತ್ರಿಯಾಗಿ ಸೇವಿ ಸಲ್ಲಿಸಲು ಅವಕಾಶ ಕಲ್ಪಿಸಿದ ಮತದಾರರಿಗೆ ಮತ್ತು ಬಿಜೆಪಿ ಪಕ್ಷದ ಎಲ್ಲ ಮುಖಂಡರು ಹಾಗೂ ಸ್ನೇಹಿತರಿಗೆ ಮತ್ತೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ತಪ್ಪು ಮಾಡಿದ್ದರೇ ನನ್ನಿಂದ ಯಾವುದೇ ತಪ್ಪಾಗಿದ್ದರೇ ಮನೆಯ ಮಗನೆಂದು ಕ್ಷಮಿಸಿ ಎಂದು ಮನವಿ ಮಾಡಿದರು.

ರಾಜು ಕಾಗೆ-ಲಕ್ಷ್ಮಣ ಸವದಿ ಮಾತುಕತೆ: ಕಾಗವಾಡ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಹಾಗೂ ಲಕ್ಷ್ಮಣ ಸವದಿ ಅವರ ಆತ್ಮೀಯ ಸ್ನೇಹಿತ ರಾಜು ಕಾಗೆ ಅಥಣಿಯಲ್ಲಿ ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು ಎನ್ನಲಾಗಿದೆ. ಬಿಜೆಪಿಯಿಂದ ಹೊರಗೆ ಕಾಲಿಟ್ಟಿರುವ ಲಕ್ಷ್ಮಣ ಸವದಿ ಅವರು ಮುಂದೇನು ಮಾಡುತ್ತಾರೆ ಎನ್ನುವ ಕುತೂಹಲ ರಾಜಕೀಯ ವಲಯದಲ್ಲಿ ಜೋರಾಗಿದೆ. ಅವರು ಕಾಂಗ್ರೆಸ್‌ ಜತೆಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ ಅವರ ಜತೆಗೆ ಈಗಾಗಲೇ ಮಾತುಕತೆ ನಡೆದಿದ್ದು, ರಾಜ್ಯದ ಹಿರಿಯ ನಾಯಕರು ಕೂಡಾ ಉತ್ಸಾಹದಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಜಿಲ್ಲೆಯ ಮತ್ತು ಸ್ಥಳೀಯ ಕಾಂಗ್ರೆಸ್‌ನ ಸ್ಥಳೀಯ ನಾಯಕರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.

ಸವದಿ ರಾಜೀನಾಮೆ ಗೊತ್ತಿಲ್ಲ: ರಾಜ್ಯ ರಾಜಕಾರಣದಲ್ಲಿ ಲಕ್ಷ್ಮಣ ಸವದಿ ಹಿರಿಯರು. ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ. ಅವರ ಜತೆ ವರಿಷ್ಠರು ಮಾತುಕತೆ ಮಾಡುತ್ತಾರೆ. ಸವದಿ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಶಾಸಕ ಮಹೇಶ ಕುಮಟಳ್ಳಿ ಎಂದರು. ಬಿಜೆಪಿಯಲ್ಲಿನ ಯಾವುದೇ ವಿಷಯ ನನಗಿಂತ ಅವರಿಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಈ ವಿಷಯದ ಬಗ್ಗೆ ಹೆಚ್ಚಿಗೆ ಹೇಳೋದಿಲ್ಲ. ನಮ್ಮಿಬ್ಬರಲ್ಲಿ ಒಬ್ಬರೂ ಸಾರ್ವತ್ರಿಕ ಚುನಾವಣೆ ಎದುರಿಸ್ತೇವೆ ಎಂದು ಅನೇಕ ಬಾರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನನಗೆ ಚುನಾವಣೆ ಎದುರಿಸುವ ಭಾಗ್ಯ ಸಿಕ್ಕಿದೆ. ಹೀಗಾಗಿ ಬಿಜೆಪಿ ಎಲ್ಲ ಮುಖಂಡರಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ ಕಳ್ಳ ಸಾಗಾಣಿಕೆದಾರರಿಗೆ ಟಿಕೆಟ್: ಎಚ್.ಡಿ.‌ಕುಮಾರಸ್ವಾಮಿ

ಬಿಜೆಪಿಯ ಅನೇಕ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ಅವರಿಗೆ ನನ್ನ ಹೈಕಮಾಂಡ್‌ ಹೇಳಿದ ಹಾಗೆ ಕೇಳುತ್ತೇನೆ ಎಂದು ಹೇಳಿದ್ದೇನೆ. ಜನರ ತೀರ್ಮಾನಕ್ಕೆ ನಾನು ತಲೆ ಬಾಗಲೇಬೇಕಾಗಿದೆ. ನನ್ನ ಮತಕ್ಷೇತ್ರದ ಜನತೆಯನ್ನು ನಾನು ಕಳೆದುಕೊಳ್ಳುವುದಿಲ್ಲ. ಕ್ಷೇತ್ರದ ಜನರೇ ನನ್ನ ಹೈಕಮಾಂಡ್‌. ನನ್ನ ಜನರು ವಿಧಾನ ಪರಿಷತ್‌ ಸ್ಥಾನ ಧಿಕ್ಕರಿಸುವಂತೆ ಸಲಹೆ ನೀಡಿದ್ದಾರೆ. ಬಿಜೆಪಿಯ ಪ್ರಾಥಮಿಕ ಸದಸ್ವತ್ವಕ್ಕೆ ರಾಜೀನಾಮೆ ನೀಡುವಂತೆ ಸಲಹೆ ನೀಡಿದ್ದಾರೆ. ಅದನ್ನು ಪಾಲಿಸುತ್ತೇನೆ. ಗುರುವಾರ ಇದರ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸುತ್ತೇನೆ.
-ಲಕ್ಷ್ಮಣ ಸವದಿ, ಮಾಜಿ ಡಿಸಿಎಂ.

Follow Us:
Download App:
  • android
  • ios