ಲಾಲ್​ಜಿ ಟಂಡನ್ ಮರಣದಿಂದ ಯುಪಿ ಬಿಜೆಪಿ ಮಾಜಿ ಅಧ್ಯಕ್ಷರನ್ನು ಮಧ್ಯಪ್ರದೇಶದ ರಾಜ್ಯಪಾಲರನನ್ನಾಗಿ ನೇಮಕ ಮಾಡಲಾಗಿದೆ. 

ಭೂಪಾಲ್, (ಆ.08)​: ಉತ್ತರ ಪ್ರದೇಶ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಲಕ್ಷ್ಮೀಕಾಂತ್​ ಬಾಜ್​ಪೇಯ್​ ಅವರು ಮಧ್ಯಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕರಾಗಿದ್ದಾರೆ.

ಮಧ್ಯಪ್ರದೇಶದ ರಾಜ್ಯಪಾಲ ಲಾಲ್​ಜಿ ಟಂಡನ್​ (85) ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸ್ಥಾನಕ್ಕೆ ಲಕ್ಷ್ಮೀಕಾಂತ್​ ಬಾಜ್​ಪೇಯ್​ ಅವರನ್ನು ನೇಮಿಸಲಾಗಿದೆ.

ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜೀ ಟಂಡನ್ ನಿಧನ!

69 ವರ್ಷದ ಲಕ್ಷ್ಮೀಕಾಂತ್​ ಬಾಜ್​ಪೇಯ್ ಮೀರತ್​ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.

ಲಾಲ್​ಜಿ ಟಂಡನ್​ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​ ಅವರೇ ಮಧ್ಯಪ್ರದೇಶದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು.