ನಾನು ಸಂಸತ್‌ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ. ಈ ವೇಳೆ, ಆ.15ರ ನಂತರ ಶಾಸಕಾಂಗ ನಾಯಕನ ಆಯ್ಕೆ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್‌ ನಾಯಕರು ತಿಳಿಸಿದ್ದಾರೆ ಎಂದ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಆ.11): ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನದ ಕುರಿತು ಆ.15ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್‌ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಸಂಸತ್‌ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ. ಈ ವೇಳೆ, ಆ.15ರ ನಂತರ ಶಾಸಕಾಂಗ ನಾಯಕನ ಆಯ್ಕೆ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್‌ ನಾಯಕರು ತಿಳಿಸಿದ್ದಾರೆ’ ಎಂದರು.

ಬಿಜೆಪಿ ಮೇಲೆ ಶೇ.40 ಕಮಿಷನ್‌ ಆರೋಪಿಸಿದ್ದ ಕಾಂಗ್ರೆಸ್‌, ಈಗ ಶೇ.65 ಕಮಿಷನ್ ವಸೂಲಿ ಮಾಡ್ತಿದೆ: ಬೊಮ್ಮಾಯಿ ಆರೋಪ

‘ಲೋಕಸಭೆ ಚುನಾವಣೆ ಸಿದ್ಧತೆ, ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ಧ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಬೃಹತ್‌ ಹೋರಾಟ ರೂಪಿಸಲಾಗುವುದು’ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ಫಲಿತಾಂಶ ಮೇನಲ್ಲೇ ಪ್ರಕಟವಾದರೂ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ್ನು ಅರ್ಥಾತ್‌ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ವಿಷಯವು ಕಾಂಗ್ರೆಸ್‌ನ ತೀವ್ರ ಟೀಕೆಗೆ ಕಾರಣವಾಗಿದೆ. ಇದು ಬಿಜೆಪಿಗರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಸರ್ಕಾರದ ವಿರುದ್ಧ ಬೃಹತ್‌ ಹೋರಾಟ

ಆ.15ರ ನಂತರ ಶಾಸಕಾಂಗ ನಾಯಕನ ಆಯ್ಕೆ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್‌ ನಾಯಕರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಶೀಘ್ರ ಬೃಹತ್‌ ಹೋರಾಟ ರೂಪಿಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.