Asianet Suvarna News Asianet Suvarna News

ಸಿದ್ದರಾಮಯ್ಯ ಕೊಟ್ಟ ತೆರಿಗೆ ಏಟಿಗೆ ಎಣ್ಣೆ ಅಂಗಡಿ ನೋಡಿದ್ರೆ ಕಿಕ್ ಹೊಡೆಯುತ್ತೆ: ಅಶೋಕ್‌ ವಾಗ್ದಾಳಿ

ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ: ವಿಪಕ್ಷ ನಾಯಕ ಆರ್‌. ಅಶೋಕ್ 
 

Leader of the Opposition R Ashok Slams Karnataka Congress Government grg
Author
First Published Jun 30, 2024, 4:45 AM IST

ಚಿಕ್ಕಬಳ್ಳಾಪುರ(ಜೂ.30):  ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮನೆ ಹಾಳು ಸರ್ಕಾರವಾಗಿದ್ದು, ಜಾತಿ ಜಾತಿಗಳ ನಡುವೆ ಜಗಳ ತಂದಿಟ್ಟು ಜಾತಿಗಳನ್ನು ಒಡೆಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ಆರೋಪಿಸಿದರು.

ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕೊಟ್ಟ ತೆರಿಗೆ ಏಟಿಗೆ ಎಣ್ಣೆ ಅಂಗಡಿ ನೋಡಿದ್ರೆ ಕಿಕ್ ಹೊಡೆಯುತ್ತೆ. ಮುದ್ರಾಂಕ ಶುಲ್ಕ ನಮ್ಮ ಅಧಿಕಾರದಲ್ಲಿ ಶೇ10 ಕಡಿಮೆ ಮಾಡಿದ್ದೆ. ಈಗ ಕಾಂಗ್ರೆಸ್ ಜಾಸ್ತಿ ಮಾಡಿದೆ. ಬಡ ಬಗ್ಗರು ಮನೆ ಸೈಟು ಕೊಳ್ಳದಂತೆ ಮಾಡಿದ್ದಾರೆ. ಟ್ರಾನ್ಸ್‌ಫಾರ್ಮರ್‌ ಹಾಕಿಸಲು ಈಗ 3.5 ಲಕ್ಷ ಆಗಿದೆ. ಹಾಲಿನ ದರವನ್ನು ಹೆಚ್ಚಳ ಮಾಡಿದ್ದಾರೆ. ಆದ್ದರಿಂದ ಇದು ಮನೆಹಾಳು ಸರ್ಕಾರವಾಗಿದೆ. ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತನಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟು ಹಾಕಿರುವುದು ಒಳ್ಳೆಯದಲ್ಲ ಎಂದರು.

Latest Videos
Follow Us:
Download App:
  • android
  • ios