Asianet Suvarna News Asianet Suvarna News

ಇದು ದರಿದ್ರ, ನಾಲಾಯಕ್ ಸರ್ಕಾರ: ಆ‌ರ್. ಅಶೋಕ್ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ತಮ್ಮ ಸಂಪುಟದಲ್ಲಿ ಸಚಿವರ ಮಧ್ಯೆ ಪರಸ್ಪರ ಒಂದು ಸ್ವಲ್ಪವೂ ತಾಳ ಮೇಳವಿಲ್ಲವೇ? ಒಬ್ಬ ಸಚಿವ ಮತ್ತೊಬ್ಬ ಸಚಿವರ ಕರೆ ಸ್ವೀಕರಿಸುವುದಿಲ್ಲವೇ? ನಿಮ್ಮ ಸರ್ಕಾರದಲ್ಲಿ ಏನಾಗುತ್ತಿದೆ ಎಂದು  ಸಾಲು ಸಾಲು ಪ್ರಶ್ನೆ ಕೇಳಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ 

Leader of the Opposition R Ashok slams karnataka congress government grg
Author
First Published Aug 16, 2024, 5:12 AM IST | Last Updated Aug 16, 2024, 5:12 AM IST

ಬೆಂಗಳೂರು(ಆ.16):  ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಶಾಸಕರೂ ಆದ ಕೃಷ್ಣ ಭೈರೇಗೌಡ ಅವರು ಅತ್ಯಂತ ಅಸಹಾಯಕರಾಗಿ ಬಿಬಿಎಂಪಿ ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೊಳ್ಳುತ್ತಿರುವುದನ್ನು ನೋಡಿದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಂತಹ ದರಿದ್ರ ನಾಲಾಯಕ್ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ವ್ಯಂಗ್ಯವಾಡಿದ್ದಾರೆ.

ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರಸ್ತೆಯ ಸರ್ವಿಸ್ ರಸ್ತೆಯ ವಿಡಿಯೋ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಶೋಕ್, ಕೃಷ್ಣ ಭೈರೇಗೌಡರೇ ಆದೇಶ ಮಾಡಿ ಕೆಲಸ ಮಾಡಿಸ ಬೇಕಾದ ಸ್ಥಾನದಲ್ಲಿರುವ ತಾವು ಬಿಬಿಎಂಪಿ ಅಧಿಕಾರಿಗಳಿಗೆ ಇಷ್ಟೊಂದು ಅಸಹಾಯಕರಾಗಿ ಅಂಗಲಾಚುತ್ತಿದ್ದೀರಲ್ಲಾ, ಬೆಂಗಳೂರು ಅಭಿವೃದ್ಧಿ ಸಚಿವರು ತಮ್ಮ ಕೆಲಸ ಮಾಡುತ್ತಿಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಡುತ್ತಿದ್ದೀರೋ ಅಥವಾ ಇದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಬಂಡಾಯದ ಮುನ್ಸೂಚನೆಯೋ ಎಂದು ಪ್ರಶ್ನಿಸಿದ್ದಾರೆ. 

ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್.ಅಶೋಕ್‌

ಮುಂದುವರೆದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ತಮ್ಮ ಸಂಪುಟದಲ್ಲಿ ಸಚಿವರ ಮಧ್ಯೆ ಪರಸ್ಪರ ಒಂದು ಸ್ವಲ್ಪವೂ ತಾಳ ಮೇಳವಿಲ್ಲವೇ? ಒಬ್ಬ ಸಚಿವ ಮತ್ತೊಬ್ಬ ಸಚಿವರ ಕರೆ ಸ್ವೀಕರಿಸುವುದಿಲ್ಲವೇ? ನಿಮ್ಮ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.

Latest Videos
Follow Us:
Download App:
  • android
  • ios