ಡಿಸಿಎಂ ಹುದ್ದೆ ಸಂಬಂಧಿಸಿ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ ಮುಂದೆ ಹೇಳಿದ್ದಾರೆ. ಅದನ್ನು ಪರಿಗಣಿಸೋದು, ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಅವರ ದೃಷ್ಟಿಯಲ್ಲಿ ಆಯಾ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಕೊಟ್ಟರೆ ಉತ್ತಮ. 

ತುಮಕೂರು (ಡಿ.30): ಡಿಸಿಎಂ ಹುದ್ದೆ ಸಂಬಂಧಿಸಿ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ ಮುಂದೆ ಹೇಳಿದ್ದಾರೆ. ಅದನ್ನು ಪರಿಗಣಿಸೋದು, ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅವರ ದೃಷ್ಟಿಯಲ್ಲಿ ಆಯಾ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆ ಕೊಟ್ಟರೆ ಉತ್ತಮ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಕಾಂಗ್ರೆಸ್‌ನತ್ತ ವಾಲಬಹುದು ಎಂಬ ಅಭಿಪ್ರಾಯ ಅವರಲ್ಲಿದೆ‌ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು. ಹೈಕಮಾಂಡ್ ಇದರ ಬಗ್ಗೆ ವಿಶ್ಲೇಷಣೆ ಮಾಡಿ, ಪರಿಶೀಲಿಸಿ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಅನುಕೂಲ ಆಗಬಹುದು ಎಂದು ಇದೇ ವೇಳೆ ಜಾರಕಿಹೊಳಿ ಅವರ ವಾದವನ್ನು ಪರಮೇಶ್ವರ್‌ ಪರೋಕ್ಷವಾಗಿ ಸಮರ್ಥಿಸಿಕೊಂಡರು.

ವರ್ಷಾಚರಣೆಗೆ ಪೊಲೀಸರ ಕಟ್ಟೆಚ್ಚರ: ಹೊಸ ವಾರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಕೆಲವು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. 

ಯತ್ನಾಳ್ ಕೋಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಬ್ಬರ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ!

ಈಗಾಗಲೇ ಪೊಲೀಸ್‌, ಗುಪ್ತದಳ, ಬಿಬಿಎಂಪಿ, ಆರೋಗ್ಯ, ಅಗ್ನಿಶಾಮಕದಳ, ಬಿಎಂಟಿಸಿ, ಅಬಕಾರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆಸುವ ಪ್ರದೇಶಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ನಗರಗಳಲ್ಲೂ ಮುಂಜಾಗ್ರತೆ ವಹಿಸಲು ನಿರ್ದೇಶನ ನೀಡಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನೂ ವಿವರಿಸಲಾಗಿದೆ ಎಂದು ಹೇಳಿದರು.

ಅಸಮಾನತೆಗೆ ಶಿಕ್ಷಣ ಮದ್ದು: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸಮಾನತೆ ದೂರವಾಗಿಲ್ಲ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಶೋಷಿತ ಸಮುದಾಯದ ಪ್ರತಿ ಮನೆಯಿಂದ ಪದವೀಧರರು ಹೊರಬರಬೇಕು. ವೈದ್ಯರು, ಎಂಜಿನಿಯರ್‌ ಸೇರಿದಂತೆ ಐಎಎಸ್‌, ಕೆಎಎಸ್‌ನಂಹ ಹುದ್ದೆಗಳನ್ನು ಪಡೆಯುವ ಗುರಿಯನ್ನಿಟ್ಟುಕೊಂಡು ಮುಂದೆ ಸಾಗಬೇಕು. ಮನೆಯ ಹಿರಿಯರು ಈ ನಿಟ್ಟಿನಲ್ಲಿ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಅಸಮಾನತೆಯನ್ನು ಮೆಟ್ಟಿನಿಂತು ಸಾಧನೆ ಮಾಡಬೇಕು ಎಂದು ಡಾ.ಪರಮೇಶ್ವರ್‌ ಕರೆ ನೀಡಿದರು. ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಆದಿ ದ್ರಾವಿಡ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ವಿಧಾನಸೌಧದಲ್ಲಿ ಧ್ವನಿ ಎತ್ತುವುದಾಗಿ ತಿಳಿಸಿದರು.

ಚಾಮುಂಡಿಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್‌ ವೇ ಬೇಡ: ಸಂಸದ ಪ್ರತಾಪ ಸಿಂಹ

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಬಲ್ಲಾಳ್‌ ಬಾಗ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್‌ ಪೂಂಜ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಮಂಜುನಾಥ ಭಂಡಾರಿ, ಕಾಂಗ್ರೆಸ್‌ ಮುಖಂಡರಾದ ಐವನ್‌ ಡಿಸೋಜ, ಮಿಥುನ್‌ ರೈ, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಭರತ್‌ ಕುಮಾರ್‌ ಎಸ್‌., ಮನೋಜ್‌ ಕೋಡಿಕಲ್‌,ಜಿ.ಪಂ. ಮಾಜಿ ಅಧ್ಯಕ್ಷ ಸೋಮನಾಥ್‌ ಉಪ್ಪಿನಂಗಡಿ, ಜಿಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಬಂಟ್ವಾಳ ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್‌ ಮುಖ್ಯ ಅತಿಥಿಗಳಾಗಿದ್ದರು. ಸಂಘದ ಪದಾಧಿಕಾರಿಗಳು ಇದ್ದರು.