Asianet Suvarna News Asianet Suvarna News

ಕಾಡು ಜನರಿಗೆ ಜಮೀನು ನೀಡಲು ಕಾನೂನು ತಿದ್ದುಪಡಿ: ಸಿಎಂ ಬಸವರಾಜ ಬೊಮ್ಮಾಯಿ

ಕಾಡಿನಲ್ಲಿ ವಾಸಿಸುವ ಎಸ್‌ಟಿ (ಗಿರಿಜನ) ಸಮುದಾಯಗಳಿಗೆ ಪ್ರಾಣಿಗಳ ಹಾವಳಿಯಿದ್ದು, ಕಾಡಂಚಿನಲ್ಲಿ ಜಮೀನು ಒದಗಿಸಿ ಪುನರ್ವಸತಿ ಕಲ್ಪಿಸಲಾಗುವುದು. ಇದಕ್ಕಾಗಿ ಅರಣ್ಯ ಕಾಯ್ದೆ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು.

Legal amendment to give land to wild people CM Basavaraj Bommai sat
Author
First Published Mar 1, 2023, 8:49 PM IST

ಚಾಮರಾಜನಗರ (ಮಾ.01): ಕಾಡಿನ ಮಧ್ಯೆ ವಾಸಿಸುವ ಎಸ್‌ಟಿ (ಗಿರಿಜನ) ಸಮುದಾಯಗಳಿಗೆ ಪ್ರಾಣಿಗಳ ಹಾವಳಿಯಿರುವುದರಿಂದ, ಅವರಿಗೆ ಕಾಡಂಚಿನಲ್ಲಿ ಜಮೀನು ಒದಗಿಸಿ ಪುನರ್ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಡಂಚಿನ ಸಮುದಾಯಗಳ ಬಗ್ಗೆ ಈ ವರ್ಷದ ಆಯವ್ಯಯದಲ್ಲಿ ವಿಶೇಷ ಗಮನ ನೀಡಲಾಗಿದೆ. ಕಾಡಿನ ಮಧ್ಯೆ ವಾಸಿಸುವ ಎಸ್‌ಟಿ (ಗಿರಿಜನ) ಸಮುದಾಯಗಳಿಗೆ ಪ್ರಾಣಿಗಳ ಹಾವಳಿ ಇರುತ್ತದೆ. ಹೀಗಾಗಿ, ಅರಣ್ಯದಲ್ಲಿ ಬದುಕು ನಡೆಸುತ್ತಿರುವ ಜನರಿಗೆ ಜಮೀನುಗಳನ್ನು ಒದಗಿಸಲು ಕಾನೂನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪಂಪನ ಕನಸಿನಂತೆ ಬನವಾಸಿ ಅಭಿವೃದ್ಧಿಗೆ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ

ಕಾಡಂಚಿನ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ (ಪಿಎಚ್‌ಸಿ) ಸಂಖ್ಯೆ ಹೆಚ್ಚಿಸುವ ಬೇಡಿಕೆ ಇದೆ. ಈ ವರ್ಷ ಹೊಸದಾಗಿ 68 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಯ ಈ ಭಾಗದ ಕಾಡಂಚಿನಲ್ಲಿರುವ ಜನರಿಗಾಗಿ ಪಿಹೆಚ್‌ಸಿಗಳನ್ನು ಮಂಜೂರು ಮಾಡಲಾಗುವುದು ಎಂದರು.

ಸ್ವಯಂ ಉದ್ಯೋಗಕ್ಕೆ ಸ್ತ್ರೀಸಾಮರ್ಥ್ಯ: ಸ್ತ್ರೀಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ 2 ಸ್ತ್ರೀಶಕ್ತಿ ಸಂಘಗಳಿಗೆ  5 ಲಕ್ಷದವರೆಗೆ ಅನುದಾನ ನೀಡಿ, ಉತ್ಪಾದನೆಗಳಿಗೆ ಮಾರುಕಟ್ಟೆ ಜೋಡಣೆ ಮಾಡಲಾಗುವುದು. ಅರಣ್ಯ ಉತ್ಪನ್ನಗಳ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಅವಕಾಶವಿದೆ. ಸ್ತ್ರೀಸಾಮರ್ಥ್ಯ ಯೋಜನೆಯಡಿ ಇದೇ ತಿಂಗಳು  ಆರ್ಥಿಕ ನೆರವು, ತರಬೇತಿ ನೀಡಿ ಸ್ವಯಂ ಉದ್ಯೋಗ ಕಲ್ಪಿಸಲಾಗುವುದು .. ಬೇಡರ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.ಮಹಿಳೆಯರಿಗೆ ಹಾಗೂ ಯುವಕರಿಗೆ ಸ್ವಯಂಉದ್ಯೋಗದ ಮೂಲಕ ಸ್ವಾವಲಂಬಿ ಬದುಕು ನೀಡಲಾಗುತ್ತಿದೆ.ಎಂದರು.

ದುರ್ಬಲ ವರ್ಗದವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಆದ್ಯತೆ : ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ, ಆತ್ಮನಿರ್ಭರ ಯೋಜನೆ, ಆಯುಷ್ಮಾನ್ ಭಾರತ ಯೋಜನೆಗಳು ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಎಸ್ ಸಿ ಎಸ್ ಟಿ ಗಳ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಈ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್, ಮನೆ ನಿರ್ಮಾಣ ಹಾಗೂ ಜಮೀನು ಖರೀದಿಗೆ ಧನಸಹಾಯ, ಅಂಬೇಡ್ಕರ್ ಹಾಗೂ ಕನಕದಾಸ ಹಾಸ್ಟೆಲ್ ನಿರ್ಮಾಣ, ಹೀಗೆ , ದುರ್ಬಲ ವರ್ಗದವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.

ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟರಾ?: ಸಿದ್ದು ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ

ಗೃಹಿಣಿ ಸಶಮಕ್ತಿ ಯೋಜನೆ ಜಾರಿ: ಕೃಷಿ ಕಾರ್ಮಿಕರಾಗಿ ದುಡಿಯುವ ಹೆಣ್ಣುಮಕ್ಕಳಿಗೆ ಗೃಹಿಣಿ ಶಕ್ತಿ ಯೋಜನೆಯ ಮೂಲಕ  ಪ್ರತಿ ತಿಂಗಳು 1000 ರೂ.ಗಳನ್ನು ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್, ಪಿಯುಸಿ ಯಿಂದ ಡಿಗ್ರಿವರೆಗೆ ಉಚಿತ ಶಿಕ್ಷಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ರೂಪಿಸಲಾಗಿದೆ. ರೈತ ವಿಮಾ ಯೋಜನೆ , ರೈತ ವಿದ್ಯಾನಿಧಿ ಯಂತಹ ರೈತಪರ ಯೋಜನೆಗಳನ್ನು ರೂಪಿಸಲಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಧ್ಯೇಯದೊಂದಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

ವಿಜಯಸಂಕಲ್ಪ ಯಾತ್ರೆಯಿಂದ ಆತ್ಮವಿಶ್ವಾಸ : ವಿಜಯಸಂಕಲ್ಪ ಯಾತ್ರೆಯನ್ನು ಮಲೆಮಹದೇಶ್ವರ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಪ್ರಾರಂಭಿಸಿದ್ದಾರೆ.  ಇಲ್ಲಿಂದ ಪ್ರಾರಂಭವಾಗಿರುವ ವಿಜಯಸಂಕಲ್ಪ ಯಾತ್ರೆ ದಾವಣಗೆರೆ ಜಿಲ್ಲೆಯ ಸಂಪೂರ್ಣಗೊಳ್ಳಲಿದೆ. ಜನಸಂಕಲ್ಪ ಯಾತ್ರೆಯಿಂದ ಹೆಚ್ಚಿನ ಪ್ರೇರಣೆ ದೊರೆತಿದ್ದು, ಪಕ್ಷದ ಆತ್ಮವಿಶ್ವಾಸ ಹೆಚ್ಚಿದೆ. ಎಸ್‌ಟಿ ಸಮುದಾಯದವರನ್ನು ಗೌರವಾನ್ವಿತ ರಾಷ್ಟ್ರಪತಿಗಳಾಗಿರುವ ಮೂಲಕ ಈ ಜನಾಂಗದವರಲ್ಲಿ ಆತ್ಮವಿಶ್ವಾಸ ಮೂಡಿದೆ. ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರದಿಂದ ಜನಕಲ್ಯಾಣ ಕಾರ್ಯಕ್ರಮಗಳನ್ನು ಸಾಕಾರಗೊಳಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಹಾಜರಿದ್ದರು.

Follow Us:
Download App:
  • android
  • ios