Asianet Suvarna News Asianet Suvarna News

ಯತ್ನಾಳ್‌ ಬಿಜೆಪಿ ಭ್ರಷ್ಟಾಚಾರದ ದಾಖಲೆಯನ್ನು ಕೊಡಲಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಭ್ರಷ್ಟರಿಗೆ ಶಿಕ್ಷೆಯಾಗಬೇಕು ಎಂಬ ಮನಸ್ಥಿತಿ ಇದ್ದರೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರ ತನಿಖಾ ಆಯೋಗಕ್ಕೆ ಸಲ್ಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 

Let Basanagouda Patil Yatnal give BJP corruption record Says CM Siddaramaiah gvd
Author
First Published Dec 29, 2023, 3:30 AM IST

ಬೆಂಗಳೂರು (ಡಿ.29): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಭ್ರಷ್ಟರಿಗೆ ಶಿಕ್ಷೆಯಾಗಬೇಕು ಎಂಬ ಮನಸ್ಥಿತಿ ಇದ್ದರೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರ ತನಿಖಾ ಆಯೋಗಕ್ಕೆ ಸಲ್ಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ಮೊದಲ ಅಲೆ ತಡೆಯುವ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಕ್ರಮ ನಡೆಸಿದೆ. 

ಕೊರೋನಾ ತಡೆ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಯತ್ನಾಳ್‌ ಆರೋಪಿಸಿದ್ದಾರೆ. ಅವರು ಈ ಆರೋಪಕ್ಕೆ ಪೂರಕವಾದ ದಾಖಲೆಗಳನ್ನು ನಿವೃತ್ತ ನ್ಯಾ. ನಾಗಮೋಹನ್‌ ದಾಸ್‌ ಅವರ ತನಿಖಾ ಆಯೋಗಕ್ಕೆ ಸಲ್ಲಿಸಬೇಕು. ಆ ಮೂಲಕ ತಮ್ಮ ಆರೋಪವನ್ನು ಸಾಬೀತು ಮಾಡಬೇಕು ಎಂದರು. ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ನಿಜಕ್ಕೂ ಭ್ರಷ್ಟರಿಗೆ ಶಿಕ್ಷೆಯಾಗಬೇಕು ಎಂಬ ಉದ್ದೇಶವಿದ್ದರೆ, ಆಯೋಗದ ಮುಂದೆ ದಾಖಲೆಗಳನ್ನು ಸಲ್ಲಿಸಲಿ. ನಾವು ಅಕ್ರಮ ಪತ್ತೆಗಾಗಿಯೇ ನಿವೃತ್ತ ನ್ಯಾ. ನಾಗಮೋಹನ್‌ದಾಸ್‌ ಅವರ ತನಿಖಾ ಆಯೋಗ ರಚಿಸಿದ್ದೇವೆ. ಅಲ್ಲಿಗೆ ದಾಖಲೆ ಸಲ್ಲಿಸಿದರೆ, ತನಿಖೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

PSI Scam: ಎಚ್ಡಿಕೆ, ಇತರರಿಗೆ ಯಾಕೆ ನೋಟಿಸ್‌ ನೀಡಿದ್ದಾರೆಂದು ಗೊತ್ತಿಲ್ಲ: ಸಚಿವ ಪರಮೇಶ್ವರ್‌

ಕೊರೋನಾ ಅವಧಿಯಲ್ಲಿ 40 ಸಾವಿರ ಕೋಟಿ ರು. ಭ್ರಷ್ಟಾಚಾರ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರ ಕೊರೋನಾ ಅವಧಿಯಲ್ಲಿ 40 ಸಾವಿರ ಕೋಟಿ ರು. ಭ್ರಷ್ಟಾಚಾರ ಮಾಡಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪವನ್ನು ಅಸ್ತ್ರ ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯದ್ದು 40 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂಬ ನಮ್ಮ ಆರೋಪಕ್ಕೆ ಯತ್ನಾಳ್‌ ಸಾಕ್ಷಿ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ‘ಎಕ್ಸ್‌’ (ಟ್ವೀಟರ್‌) ಖಾತೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ, ಮಾಜಿ ಸಚಿವರು ಹಾಗೂ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ ಅವರು, ಈ ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ತಮ್ಮ ಬಳಿ ದಾಖಲೆಗಳು ಇದ್ದರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ನೇತೃತ್ವದ ತನಿಖಾ ಆಯೋಗಕ್ಕೆ ಒದಗಿಸಬೇಕು. ಹಿಟ್‌ ಅಂಡ್‌ ರನ್‌ ಮಾಡಬಾರದು ಎಂದು ಯತ್ನಾಳ್‌ಗೆ ಕರೆ ನೀಡಿದ್ದಾರೆ. ಕೊರೋನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಿನಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರ ಸರ್ಕಾರ ಸುಮಾರು 4 ಸಾವಿರ ಕೋಟಿ ರು. ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆ ಸಹಿತ ನಾವು ಆರೋಪ ಮಾಡಿದ್ದೆವು. 

ಈಗ ಬಸನಗೌಡ ಪಾಟೀಲ್ ಯತ್ನಾಳ್‌ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ 10 ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಾವು ಆರೋಪ ಮಾಡಿದಾಗ ಹೆದರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ ಎಂದೂ ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಆ್ಯಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. 

ಅದಕ್ಕಾಗಿ ಅವರು ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತನಿಖಾ ಆಯೋಗಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಯತ್ನಾಳ್‌ ಅವರು ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ. ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಕೆಲ ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಗ್ಯಾರಂಟಿಗಳ ಬಗ್ಗೆ ಮಾತನಾಡದ ಕಾಂಗ್ರೆಸ್ ಸರ್ಕಾರ: ನಾರಾಯಣಸ್ವಾಮಿ ವಾಗ್ದಾಳಿ

ತನ್ನನ್ನು ದೇಶದ ‘ಚೌಕಿದಾರ’ ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು ‘ನಾ ಖಾವೂಂಗಾ ನಾ ಖಾನೆ ದೂಂಗಾ’ ಎಂದು ಗುಟುರು ಹಾಕುವ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಭ್ರಷ್ಟಾಚಾರದ ಆರೋಪ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ ಎಂದು ಪ್ರಶ್ನಿಸಿದ್ದಾರೆ.

Follow Us:
Download App:
  • android
  • ios