Lokayukta raid: ಶಾಸಕ ಮಾಡಳ, ಸಿಎಂ ಬೊಮ್ಮಾಯಿ ಇಬ್ಬರೂ ರಾಜಿನಾಮೆ ನೀಡಲಿ; ಕಾಂಗ್ರೆಸ್ ಆಗ್ರಹ
ಭ್ರಷ್ಟಾಚಾರದ ಆರೋಪ ಹೊತ್ತಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೊತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಶಿವಪ್ಪ ನಾಯಕ ವೃತ್ತದಿಂದ ಗೋಪಿ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶಿವಮೊಗ್ಗ (ಮಾ.5) : ಭ್ರಷ್ಟಾಚಾರದ ಆರೋಪ ಹೊತ್ತಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೊತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ಶಿವಪ್ಪ ನಾಯಕ ವೃತ್ತದಿಂದ ಗೋಪಿ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ(MLA Madal Virupakshappa) ಅವರ ಪುತ್ರ ಪ್ರಶಾಂತ್ ಮಾಡಾಳು(Prashant Madalu) ಸೇರಿ ಐವರನ್ನು ಲೋಕಾಯುಕ್ತ(Karnataka Lokayukta) ಅಧಿಕಾರಿಗಳು ಬಂಧಿಸಿದ್ದಾರೆ. ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ, .7.62 ಕೋಟಿ ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆ ಕೂಡಲೇ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಲೋಕಾಯುಕ್ತ ದಾಳಿ ವಿಚಾರ ತನಿಖೆ ನಂತರ ಎಲ್ಲವೂ ಸ್ಪಷ್ಟ: ಗೃಹ ಸಚಿವ ಆರಗ ಜ್ಞಾನೇಂದ್ರ
ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ (Madhu bangarappa)ಮಾತನಾಡಿ, ಬಿಜೆಪಿ ಎಂದರೆ ಭ್ರಷ್ಟಜನತಾ ಪಾರ್ಟಿ(Brashta janata party) ಎಂದು ಸಾಬೀತಾಗಿದೆ. ರಾಜ್ಯದಲ್ಲಿ ಬಿಜೆಪಿ ಬಣ್ಣ ಬಯಲಾಗಿದೆ. ನಾನು ಮುಖ್ಯಮಂತ್ರಿ ರಾಜಿನಾಮೆ ಕೇಳುವುದಿಲ್ಲ. ಅವರು ಏನಿದ್ದರೂ ಕೇವಲ 10 ದಿನವಷ್ಟೆಬಿಜೆಪಿ ಮುಖ್ಯಮಂತ್ರಿಯಾಗಿರುತ್ತಾರೆ. ಬಿಜೆಪಿಯವರ ಭ್ರಷ್ಟಾಚಾರವನ್ನು ರಾಜ್ಯದ ಪ್ರತಿ ಮನೆಗೂ ತಿಳಿಸಬೇಕು. ಬಿಜೆಪಿಯವರು ಪ್ರತಿ ಕ್ಷೇತ್ರದಲ್ಲೂ ಮತದಾರರಿಗೆ ಹಂಚಲು ಕಳ್ಳತನದ ದುಡ್ಡು ಶೇಖರಿಸಿಟ್ಟಿದ್ದು, ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಸಿಕ್ಕಿದ್ದು, ಕೇವಲ ಸ್ಯಾಂಪಲ್ ಅಷ್ಟೆಕಿಡಿಕಾರಿದರು.
ಕಾಂಗ್ರೆಸ್‌ಗೆ ಈ ಬಾರಿ ದೇವರೇ ವರ ಕೊಟ್ಟಿದ್ದಾನೆ. ರಾಮರಾಜ್ಯ ಆಗಬೇಕಾದರೆ ಬದಲಾವಣೆ ಅಗತ್ಯ. ಇಂದಿರಾ ಗಾಂಧಿ, ದೇವರಾಜ ಅರಸು, ಎಸ್.ಬಂಗಾರಪ್ಪ ಜನಸಾಮಾನ್ಯರಿಗೆ ಏನು ಕೊಡುಗೆ ನೀಡಿದ್ದರು ಎಂಬುದು ಎಲ್ಲರಿಗೂ ಗೊತ್ತು. ಕಳ್ಳತನ ಮಾಡಿದವರಿಗೆ ಜನ ತಕ್ಕ ಶಿಕ್ಷೆ ಕೊಡುತ್ತಾರೆ. ಬರಿ ಸೋಪ್ ಫ್ಯಾಕ್ಟರಿಯ ಅಧ್ಯಕ್ಷನೇ ಇಷ್ಟೊಂದು ಲೂಟಿ ಮಾಡಿದ್ದಾರೆ ಎಂದರೆ ಇನ್ನು ಮಂತ್ರಿ ಮಹನೀಯರು ಕರ್ನಾಟಕವನ್ನು ಎಷ್ಟೊಂದು ಪ್ರಮಾಣದಲ್ಲಿ ಲೂಟಿ ಮಾಡಿರಬಹುದು? ರಾಜ್ಯ ಹಾಗೂ ದೇಶ ಉಳಿಯಬೇಕಾದರೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಹರಿಹಾಯ್ದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಸರ್ಕಾರವನ್ನು ವಿಸರ್ಜಿಸಿ ಚುನಾವಣೆ ಎದುರಿಸಬೇಕು. ಶಾಸರನ ಪುತ್ರನ ಮನೆಯಲ್ಲಿ ಕೋಟ್ಯಂತರ ರು. ಲಂಚದ ಹಣ ಸಿಕ್ಕರೂ ಭ್ರಷ್ಟಾಚಾರ ನಡೆದಿಲ್ಲ ಎಂಬ ಸಮರ್ಥನೆ ಸರ್ಕಾರ ಮಾಡುತ್ತಿದೆ. ಈ ರೀತಿಯ ಭಂಡ ಸರ್ಕಾರವನ್ನು ನಾವೆಂದು ಕಂಡಿಲ್ಲ. ಮಾಡಾಳು ವಿರೂಪಕ್ಷಾಪ್ಪ ಗೃಹ ಸಚಿವ ಆರಗ ಜೊತೆ ಭ್ರಷ್ಟಾಚಾರ ಮಾಡುವುದು ಹೇಗೆ ಎಂದು ಮಾಹಿತಿ ಪಡೆದುಕೊಂಡಿದ್ದರೆ ಬಹುಶಃ ಸಿಕ್ಕಿ ಬೀಳುತ್ತಿರಲಿಲ್ಲವೇನೋ ಎಂದು ವ್ಯಂಗ್ಯವಾಡಿದರು.
ಗ್ಯಾಸ್ ಹೋಯ್ತು ಸೌದೆ ಬಂತು: ಬಿಜೆಪಿ ಹೋಗುತ್ತೆ, ಕಾಂಗ್ರೆಸ್ ಬರುತ್ತೆ: ಕಾಂಗ್ರೆಸ್ ವಿನೂತನ ಪ್ರತಿಭಟನೆ
ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ…, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಪ್ರಮುಖರಾದ ಕಲಗೋಡು ರತ್ನಾಕರ್, ರವಿಕುಮಾರ್, ಶ್ರೀನಿವಾಸ ಕರಿಯಣ್ಣ, ವೈ.ಎಚ್. ನಾಗರಾಜ್, ಎಸ್.ಪಿ.ದಿನೇಶ್, ರಮೇಶ ಶಂಕರಘಟ್ಟ, ಇಸ್ಮಾಯಿಲ್ ಖಾನ್, ತೀ.ನಾ.ಶ್ರೀನಿವಾಸ್, ರೇಖಾ ರಂಗನಾಥ್, ಚಂದ್ರ ಭೂಪಾಲ…, ಅನಿತಾ ಕುಮಾರಿ, ಜಿ.ಪಲ್ಲವಿ, ನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು ಮತ್ತಿತರರಿದ್ದರು.