ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ವಿಚಾರದಲ್ಲಿ ಸಿಎಂ ಗಟ್ಟಿ ತೀರ್ಮಾನ ತೆಗೆದುಕೊಳ್ಳಲಿ: ಸಿ.ಪಿ.ಯೋಗೇಶ್ವರ್
ಮೆಡಿಕಲ್ ಕಾಲೇಜು ರಾಜೀವ್ ಗಾಂಧಿ ಆರೋಗ್ಯ ವಿವಿಯ ಅವಿಭಾಜ್ಯ ಅಂಗ. ವಿವಿ ಕ್ಯಾಂಪಸ್ ನಲ್ಲಿಯೇ ಮೆಡಿಕಲ್ ಕಾಲೇಜು ಇರಬೇಕೆಂಬ ನಿಯಮವೂ ಇದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಡಿಕೆ ಸಹೋದರರ ಧಮ್ಕಿಗೆ ಮಣಿಯದೆ ಗಟ್ಟಿಯಾದ ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದರು.
ರಾಮನಗರ (ಸೆ.07): ಮೆಡಿಕಲ್ ಕಾಲೇಜು ರಾಜೀವ್ ಗಾಂಧಿ ಆರೋಗ್ಯ ವಿವಿಯ ಅವಿಭಾಜ್ಯ ಅಂಗ. ವಿವಿ ಕ್ಯಾಂಪಸ್ ನಲ್ಲಿಯೇ ಮೆಡಿಕಲ್ ಕಾಲೇಜು ಇರಬೇಕೆಂಬ ನಿಯಮವೂ ಇದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಡಿಕೆ ಸಹೋದರರ ಧಮ್ಕಿಗೆ ಮಣಿಯದೆ ಗಟ್ಟಿಯಾದ ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಸಹೋದರರು ದುರದ್ದೇಶದಿಂದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೆಡಿಕಲ್ ಕಾಲೇಜು ಕನಕಪುರದಲ್ಲಿಯೇ ನಿರ್ಮಾಣವಾಗಲೆಂದು ಹೇಳಿದ್ದಾರೆ. ಒಬ್ಬ ಮುಖ್ಯಮಂತ್ರಿ ಇಷ್ಟೊಂದು ಅಸಹಾಯಕರಾಗಬಾರದು ಎಂದರು.
ಡಿಕೆ ಸಹೋದರರು ಕನಕಪುರಕ್ಕೆ ಮಾತ್ರ ಸೀಮಿತವಲ್ಲ. ಜಿಲ್ಲೆಯ ಜನರು ಅವರಿಗೆ ಆಶೀರ್ವಾದ ಮಾಡಿದ್ದಾರೆ ಎಂಬುದನ್ನು ಮರೆಯಬಾರದು. ರಾಜಕೀಯವಾಗಿ ಬಹಳಷ್ಟು ಬೆಳೆದಿದ್ದಾರೆ. ರಾಮನಗರ ತಾಲೂಕಿಗೆ ಅನ್ಯಾಯ ಮಾಡಿದರೆ ಅದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಅನುಭವಿಸುತ್ತಾರೆ. ಇದನ್ನು ಎಚ್ಚರಿಕೆಯಂತೆ ತೆಗೆದುಕೊಳ್ಳಬೇಕು ಎಂದು ಹೇಳಿದರು. ಬಿಜೆಪಿ ಸರ್ಕಾರ ಇದ್ದಾಗಲೇ ಹಣ ಬಿಡುಗಡೆ, ಟೆಂಡರ್ ಮುಗಿದಿದೆ. ಹಲವಾರು ಗೋಜಲುಗಳು ನಡುವೆ ವಿವಿ ಕಾರ್ಯ ಆರಂಭವಾಗಿದೆ. ಇಂತಹ ಸಂದರ್ಭದಲ್ಲಿ ಅಡತಡೆ ಮಾಡುವ ಅವಶ್ಯಕತೆ ಇರಲಿಲ್ಲ.
ಬಿ.ಎಲ್.ಸಂತೋಷ್ 4 ಶಾಸಕರನ್ನು ಕರೆಸಿಕೊಳ್ಳಲಿ ನೋಡೋಣ: ಸಚಿವ ಶಿವರಾಜ ತಂಗಡಗಿ
ಬೆಂಗಳೂರು - ಕನಕಪುರ ಹೆದ್ದಾರಿಯಲ್ಲಿ ದಯಾನಂದ ಸಾಗರ್ ಮೆಡಿಕಲ್ ಕಾಲೇಜು ಇದೆ. ಹೀಗಿರುವಾಗ ಅಲ್ಲಿಗೆ ಮತ್ತೊಂದು ಮೆಡಿಕಲ್ ಕಾಲೇಜು ಕೊಂಡೊಯ್ಯುವುದರಲ್ಲಿ ಅರ್ಥವಿಲ್ಲ. ಜಿಲ್ಲಾ ಕೇಂದ್ರದಲ್ಲಿ ಇರಬೇಕಾದ ಮೆಡಿಕಲ್ ಕಾಲೇಜನ್ನು ಯಾವ ಉದ್ದೇಶದಿಂದ ವರ್ಗಾವಣೆ ಮಾಡುತ್ತಿದ್ದಾರೊ ಗೊತ್ತಿಲ್ಲ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೇಕಿದ್ದರೆ ಕನಕಪುರಕ್ಕೆ ಮೆಡಿಕಲ್ ಕಾಲೇಜನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಳ್ಳಲಿ ಅಥವಾ ಖಾಸಗಿಯಾಗಿ ಸ್ಥಾಪನೆ ಮಾಡಲಿ ನಮ್ಮ ಅಭ್ಯಂತರ ಇಲ್ಲ. ಕನಕಪುರ ನಮ್ಮ ಜಿಲ್ಲೆಯಲ್ಲಿದೆ.
ಆದರೆ, ನಾಲ್ಕು ತಾಲೂಕುಗಳಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿಯೇ ಮೆಡಿಕಲ್ ಕಾಲೇಜು ಇರಬೇಕು. ಪಕ್ಷಾತೀತವಾಗಿ ಎಲ್ಲ ಜನರ ಒಕ್ಕೋರಲಿನ ಒತ್ತಾಯವೂ ಆಗಿದೆ. ರಾಮನಗರ ಜನರು ಪಕ್ಷಾತೀತವಾಗಿ ನಡೆಸುತ್ತಿರುವ ಪ್ರತಿಭಟನೆ ಕಾವು ಹೆಚ್ಚಿದ ಮೇಲೆ ರಾಜ್ಯ ಸರ್ಕಾರ ಎಚ್ಚೆತ್ತು ಕೊಳ್ಳುತ್ತದೆ ಎಂದು ಭಾವಿಸಿದ್ದೇನೆ ಎಂದು ಯೋಗೇಶ್ವರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಗೌಡ, ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಮುಖಂಡರಾದ ಗೌತಮ್ ಗೌಡ, ಪ್ರಸಾದ್ ಗೌಡ, ಮುರಳೀಧರ್ , ಲಿಂಗೇಶ್ ಕುಮಾರ್ ಇದ್ದರು.
ಸಂಸತ್ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಗತ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ಬಿಜೆಪಿ - ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳು ನಡೆಯುತ್ತಿವೆ.
ಈ ಬಗ್ಗೆ ಜೆಡಿಎಸ್ ವರಿಷ್ಠರಾದ ದೇವೇಗೌಡ ಮತ್ತುಕುಮಾರಸ್ವಾಮಿ ಅವರಲ್ಲಿಯೂ ವೈಯಕ್ತಿಕವಾಗಿ ಮನವಿ ಮಾಡುತ್ತೇನೆ ಎಂದರು. ಮೋದಿರವರು ಮತ್ತೆ ಪ್ರಧಾನಿಯಾಗಿ ಚುಕ್ಕಾಣಿ ಹಿಡಿಯಲು ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕಿದೆ. ನಾನು ಮತ್ತು ಕುಮಾರಸ್ವಾಮಿರವರು 25-30 ವರ್ಷಗಳಿಂದ ರಾಜಕೀಯವಾಗಿ ವಿರೋಧಿಗಳಾಗಿದ್ದೇವು. ನಮ್ಮ ನಡುವೆ ಯಾವುದೇ ರೀತಿಯ ಒಳಒಪ್ಪಂದ ನಡೆದಿರಲಿಲ್ಲ. ಬದಲಾದ ಪರಿಸ್ಥಿತಿಯಲ್ಲಿ ಹೊಂದಾಣಿಕೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಇಲ್ಲೇ ಇರಲಿದೆ: ಶಾಸಕ ಇಕ್ಬಾಲ್ ಹುಸೇನ್
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನೂರಕ್ಕೆ ನೂರು ಈ ಬಾರಿ ಬಿಜೆಪಿ ಗೆಲುವು ಸಾಸಲಿದೆ. ಯೋಗೇಶ್ವರ್, ಅಶ್ವತ್ಥ ನಾರಯಾಣ ಅಥವಾ ಅಶ್ವತ್ಥ ನಾರಯಾಣಗೌಡ ಪೈಕಿ ಯಾರು ಬೇಕಾದರು ಸ್ಪರ್ಧೆ ಮಾಡಬಹುದು. ಇಲ್ಲಿ ವ್ಯಕ್ತಿಗಳು ಗೌಣ. ಪಕ್ಷದ ಸಿದ್ಧಾಂತ ಇಟ್ಟುಕೊಂಡು ಚುನಾವಣೆಗೆ ಹೋಗಿ ಗೆಲುವು ಸಾಸುತ್ತೇವೆ ಎಂದು ಹೇಳಿದರು.