ರಾಜಕೀಯ ಪ್ರೇರಿತವಾಗಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್‌ ದಾಖಲಿ ಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 

ಬೆಳಗಾವಿ(ಸೆ.29):  6 ಸಾವಿರ ಕೋಟಿ ಮೊತ್ತದ ಎಲೆಕ್ಟೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ ನಂತರ ಸಿದ್ದರಾಮಯ್ಯ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಆಗ್ರಹಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುದ್ದಿಗಾರರ ಜೊತೆ ಮಾತನಾಡಿ, ರಾಜಕೀಯ ಪ್ರೇರಿತವಾಗಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್‌ ದಾಖಲಿ ಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ. 

ಬಿಜೆಪಿ ಶುದ್ಧೀಕರಣಕ್ಕೆ ಈಶ್ವರಪ್ಪ ಮನೆಯಲ್ಲಿ ಸಭೆ: ಶಾಸಕ ರಮೇಶ್‌ ಜಾರಕಿಹೊಳಿ

ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.