ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನ ಬಿಟ್ಟು, ಮೈಸೂರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ
ಬೆಂಗಳೂರು(ಸೆ.27): ಮದ್ದೂರು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ರಾಜ್ಯಾದ್ಯಂತ ಸುಮಾರು 1.50 ಲಕ್ಷ ಸದಸ್ಯತ್ವದ ನೋಂದಣಿ ಗುರಿ ಹೊಂದಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಹೇಳಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಮಡೇನಹಳ್ಳಿ, ಕೆ.ಶೆಟ್ಟಿಹಳ್ಳಿ, ಮುತ್ತನಹಳ್ಳಿ, ಕೊಕ್ಕರೆ ಬೆಳ್ಳೂರು ಹಾಗೂ ಗ್ರಾಮಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ಸೆ.2 ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ ಎಂದರು.
ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಪ್ರಸ್ತುತ 25 ಸಾವಿರ ನೋಂದಣಿ ಮಾಡಲಾಗಿದೆ. ಮಂಡ್ಯ, ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಕೊಡಗು. ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಪರಿಶೀಲನಾ ಜವಾಬ್ದಾರಿ ಉಸ್ತುವಾರಿಯನ್ನು ಪಕ್ಷದ ನಾಯಕರು ನನಗೆ ನೀಡಿದ್ದಾರೆ ಎಂದು ಹೇಳಿದರು.
ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಇಂದೇ ಎಫ್‌ಐಆರ್, ಎಲ್ಲರ ಚಿತ್ತ ಮೈಸೂರಿನತ್ತ..!
ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸದಸ್ಯರ ನೋಂದಣಿ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದರು. ಜಿಲ್ಲಾಧ್ಯಕ್ಷ ಡಾ.ಇಂದ್ರೇಶ, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಜಿಪಂ ಮಾಜಿ ಸದಸ್ಯ ಕೃಷ್ಣಗೌಡ, ಮುಖಂಡರಾದ ವಿವೇಕ್, ಮಲ್ಲಿ ಕಾರ್ಜುನ್, ಎಂ.ಸಿ.ಸಿದ್ದು, ಕೆಂಪ ಬೋರಯ್ಯ, ತ್ರಿವೇಣಿ, ಮಮತಾರಾಂ, ಶಿವಕುಮಾರ್, ಗಜ್ಜಲಗೆರೆ ಕಟ್ಟಿ, ದ್ಯಾವಯ್ಯ, ಮಧು ಇದ್ದರು.
ಭಂಡತನ ಬಿಟ್ಟು ಸಿಎಂ ರಾಜೀನಾಮೆ ನೀಡಲಿ
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನ ಬಿಟ್ಟು, ಮೈಸೂರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಆಗ್ರಹಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದ ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ ಎಂದರು.
ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ವಿರುದ್ದ ಎಫ್‌ಐಆರ್ ದಾಖಲಿಸಿ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಸ್ಥಾನದಲ್ಲಿ ಇದ್ದಾಗ ಯಾವುದೇ ಅಧಿಕಾ ರಿಗಳು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಹೇಗೆ ಸಾಧ್ಯ? ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ. ಅವರಿಗೆ ಈ ನೆಲದ ಕಾನೂನಿನ ಮೇಲೆ ಮೇಲೆ ಗೌರವ ಇದ್ದರೆ ತಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಿ ಎಂದು ಸವಾಲು ಹಾಕಿದರು.
ಸಿಎಂ ಸಿದ್ದು ನಾವು ಮತ್ತು ನಮ್ಮ ಪಕ್ಷ ಶುದ್ಧ ಹಸ್ತವಾಗಿದೆ ಎಂದು ಬೊಗಳೆ ಬಿಟ್ಟುಕೊಂಡು ಈ ಹಿಂದೆ ಗಣಿ ಹಗರಣ ಕುರಿತು ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಇಂತವರು ಈಗ ಮುಡಾ ಹಗರಣದಲ್ಲಿ ಸಿಲುಕಿ ತಮ್ಮ ಮುಖಕ್ಕೆ ತಾವೇ ಮಸಿ ಬಳಿದುಕೊಂಡಿದ್ದಾರೆ. ಇಂತವರು ಸಾರ್ವಜನಿಕ ಜೀವನದಲ್ಲಿ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಲೇವಡಿ ಮಾಡಿದರು.
ಜಮೀರ್ ಹೇಳಿಕೆ ನ್ಯಾಯಾಂಗ ನಿಂದನೆ
ಮದ್ದೂರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ತೀರ್ಪು ಎಂದು ವಸತಿ ಸಚಿವ ಜಮೀರ್‌ಹೇಳಿಕೆಯಿಂದ ನ್ಯಾಯಾಂಗ ನಿಂದನೆಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಅಕ್ರೋಶ ವ್ಯಕ್ತಪಡಿಸಿದರು. ಅಪಮಾನ ಮಾಡಿದಂತಾಗಿದೆ ಎಂದರು. ನ್ಯಾಯಾಲಯದ ಬಗ್ಗೆ ಮಾತನಾಡುವಾಗ ಜಮೀರ್‌ಗೆ ಮಾತಿನ ಮೇಲೆ ನಿಗಾ ಇರಬೇಕು. ಸಂವಿಧಾನಕ್ಕೆ ಅಪಮಾನ ಮಾಡಿದರೆ ನಾವು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸ್ವಯಂಪ್ರೇರಿತ ತನಿಖಾ ಅಧಿಕಾರಕ್ಕೆ ರಾಜ್ಯದ ಕತ್ತರಿ: ಸಿಬಿಐ ಮೇಲೆಯೇ ಸಿದ್ದರಾಮಯ್ಯ ದಾಳಿ..!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ. ಮುಡಾ ಹಗರಣದಲ್ಲಿ ಹೈಕೋರ್ಟ್, ರಾಜ್ಯ ಪಾಲರ ಕ್ರಮವನ್ನು ಎತ್ತಿ ಹಿಡಿದು ತನಿಖೆಗೆ ಆದೇಶಿಸಿದೆ. ಆದರೆ, ಸಚಿವ ಜಮೀರ್ ಅಹ್ಮದ್ ನ್ಯಾಯಾಲಯದ ತೀರ್ಪು ರಾಜಕೀಯ ಪ್ರೇರಿತ ವಾಗಿದೆ ಎಂದು ಟೀಕಿಸಿರುವುದು ಸಂವಿಧಾನಕ್ಕೆ ತೀರ್ಪು ನಿಮಗೆ ಸಮಂಜಸವಾಗದಿದ್ದಲ್ಲಿ, ಸಮಾಧಾನ ತರದಿದ್ದಲ್ಲಿ ನೀವು ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಅದನ್ನು ಹೊರತುಪಡಿಸಿ ಹೀಗೆ ತೀರ್ಪಿನ ಮೇಲೆ ಅನುಮಾನ ರೀತಿ ಮಾತನಾಡಿದರೆ ಅದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಕಿಡಿಕಾರಿದರು.
ದೇಶದ ಸಂವಿ ಧಾನ ಮತ್ತು ಕಾನೂನಿನ ಬಗ್ಗೆ ಆ ಪಕ್ಷದ ನಾಯಕರಿಗೆ ಕಿಂಚಿತ್ತಾದರೂ ಗೌರವವಿದ್ದರೆ ನೈತಿಕ ಹೊಣೆ ಹೊತ್ತು ಸಿಎಂ ಅವರ ರಾಜೀನಾಮ ಪಡೆಯಲಿ ಎಂದು ಆಗ್ರಹಿಸಿದರು.