40% ಕಮಿಷನ್ ತನಿಖೆ ನನ್ನಿಂದಲೇ ಆರಂಭವಾಗಲಿ: ಸಿಎಂ ಸಿದ್ದುಗೆ ಕೋಟಾ ಶ್ರೀನಿವಾಸ ಪೂಜಾರಿ ಸವಾಲು!

ಬಿಜೆಪಿ ಸರ್ಕಾರದ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ‌ ಹೊಸ ಸವಾಲು ಹಾಕಿದ್ದಾರೆ. ಕಮಿಷನ್ ಆರೋಪದ ತನಿಖೆ ಮೊದಲು ನನ್ನಿಂದಲೇ ಶುರುವಾಗಲಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. 

Let the 40 Percent commission probe begin with me Kota Srinivas Poojary Challenges CM Siddaramaiah gvd

ಮಂಗಳೂರು (ಮೇ.24): ಬಿಜೆಪಿ ಸರ್ಕಾರದ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ‌ ಹೊಸ ಸವಾಲು ಹಾಕಿದ್ದಾರೆ. ಕಮಿಷನ್ ಆರೋಪದ ತನಿಖೆ ಮೊದಲು ನನ್ನಿಂದಲೇ ಶುರುವಾಗಲಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆಶಿ 40% ಕಮಿಷನ್ ತನಿಖೆ ಮಾಡ್ತೀವಿ ಅಂದಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡ್ತೇನೆ. ಸಮಾಜ ಕಲ್ಯಾಣ, ಹಿಂದುಳಿದ ಇಲಾಖೆ ಮಂತ್ರಿಯಾಗಿದ್ದ ನನ್ನಿಂದಲೇ ತನಿಖೆ ಪ್ರಾರಂಭವಾಗಲಿ. ಇಡೀ ತನಿಖೆ ಮಾಡಲಿ, ಯಾವ ತನಿಖೆಯಲ್ಲಿ ಏನಾಗುತ್ತೆ ನೋಡೋಣ. ವ್ಯಕ್ತಿಗತ ದ್ವೇಷಕ್ಕೆ ಅವಕಾಶ ಕೊಡಬಾರದು,  ಆದರೂ ತನಿಖೆ ಮಾಡಲಿ ಎಂದಿದ್ದಾರೆ.

'ಕೇಸರಿ ಶಾಲು ರಾಜ್ಯದಲ್ಲಿ ನಿಷೇಧವಾಗಿಲ್ಲ': ಡಿಕೆಶಿ ಪೊಲೀಸರಿಗೆ ನಿನ್ನೆ ಕೇಸರಿ ಶಾಲಿನ ಆರೋಪ ಮಾಡಿದ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳ ಮೇಲೆ ಹರಿಹಾಯ್ದು ಡಿಸಿಎಂ ಡಿಕೆಶಿ ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ.‌ ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನ ಪುನರ್ ಪರಿಶೀಲನೆ ಮಾಡಬೇಕು. 

82 ಅಡಿಗೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ: ಮುಂಗಾರು ತಡವಾದ್ರೆ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ!

ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸೋ ವಾತಾವರಣ ಕಂಡು ಬರ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರಲ್ಲ, ಅದನ್ನ ಪುನರ್ ಪರಿಶೀಲಿಸಲಿ ಎಂದಿದ್ದಾರೆ. ಸಾಮಾನ್ಯವಾಗಿ ಹಿಂದುತ್ವದ ವಿಚಾರ ಇಟ್ಟುಕೊಂಡು ಅವರ ಗುರಿ ಇದೆ ಅನ್ನೋದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದುಗಳಿಗೆ ಕಠಿಣ ದಿನವಾಗಲಿದೆ. 

ಸಿಎಂ ಆದ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜಾ!

ಯಾರನ್ನಾದರೂ ಓಲೈಕೆ ಮಾಡಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡೋದಾಗಲೀ, ನೈತಿಕ ಪೊಲೀಸ್ ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ಆಗುತ್ತೆ ಅಂತ ನಮಗೆ ಅನಿಸುತ್ತದೆ. ಮುಂದಿನ ದಿನಗಳಲ್ಲಿ ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ವಿರೋಧಿಸುವ ಕಾರ್ಯತಂತ್ರ ರೂಪುಗೊಂಡಿದೆ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡ್ತೇವೆ ಎಂದಿದ್ದಾರೆ.

Latest Videos
Follow Us:
Download App:
  • android
  • ios