ತಾಕತ್ತಿದ್ದರೆ ಬಿಜೆಪಿ ದೇಶಾದ್ಯಂತ ಗ್ಯಾರಂಟಿ ಜಾರಿಗೆ ತರಲಿ: ಸಿಎಂ ಸಿದ್ದರಾಮಯ್ಯ
ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು: ಸಿಎಂ ಸಿದ್ದರಾಮಯ್ಯ
ಕಲಬುರಗಿ(ಆ.06): ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ಅವರ ಮಾತು ನಂಬಬೇಡಿ ಎಂದರು.
ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು. ಕರ್ನಾಟಕ ಹಿಂದೆ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಆರ್ಥಿಕವಾಗಿ ಸುಭದ್ರವಾಗಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದು ಬಿಜೆಪಿ ಸರ್ಕಾರ ಎಂದರು.
ಶಾಸಕರು VS ಸಚಿವರು: ರಾಯರೆಡ್ಡಿ, ಬಿ.ಆರ್. ಪಾಟೀಲ್ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!