ನಮ್ಮ ಸರ್ಕಾರದ ಅವಧಿಯಲ್ಲಿ ಮೇಲಿನ ಶೇ.40 ಕಮಿಷನ್‌ ಆರೋಪವನ್ನು ಕಾಂಗ್ರೆಸ್‌ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಬೆಂಗಳೂರು (ಮೇ.23): ನಮ್ಮ ಸರ್ಕಾರದ ಅವಧಿಯಲ್ಲಿ ಮೇಲಿನ ಶೇ.40 ಕಮಿಷನ್‌ ಆರೋಪವನ್ನು ಕಾಂಗ್ರೆಸ್‌ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ‘ಬಿಜೆಪಿ ಅವಧಿಯ ಹಗರಣಗಳ ತನಿಖೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್‌ಗೆ ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ದಯವಿಟ್ಟು ಎಲ್ಲ ತನಿಖೆ ಮಾಡಲಿ. ನಮ್ಮ ಕಾಲದ ಮತ್ತು ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ’ ಎಂದೂ ಅವರು ಒತ್ತಾಯಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.40 ಕಮಿಷನ್‌ ಆರೋಪವನ್ನು ಕಾಂಗ್ರೆಸ್‌ನವರು ನಮ್ಮ ಮೇಲೆ ಹೊರಿಸಿದ್ದಾರೆ. 

ಇದನ್ನು ಅವರು ಪುರಾವೆ ಸಮೇತ ತೋರಿಸಬೇಕು. ನಾವು ಶೇ.40 ಕಮಿಷನ್‌ ತೆಗೆದುಕೊಂಡಿದ್ದೇವೆ ಎಂಬುದನ್ನು ದಾಖಲೆ ಸಹಿತ ತೋರಿಸಲಿ. ಈ ಸಂಬಂಧ ನಾನು ಕೂಡ ಆಗ್ರಹ ಮಾಡುತ್ತೇನೆ ಎಂದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಸಂಘದ ಪದಾಧಿಕಾರಿಗಳು ಶೇ.40 ಕಮಿಷನ್‌ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. ಅಷ್ಟುಕಮಿಷನ್‌ ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ ಶೇ.40ಕ್ಕಿಂತ ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ ಶೇ.40 ಇತ್ತು ಅಂತ ಆಗುತ್ತದೆ. 

ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಜಟಾಪಟಿ!

ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್‌ ಹಾಕಿದರೆ, ಶೇ.40 ಕಮಿಷನ್‌ ಈಗಲೂ ಇದೆ ಅಂತ ಆಗುತ್ತದೆ ಎಂದು ತೀಕ್ಷ$್ಣವಾಗಿ ಹೇಳಿದರು. ಕೆಂಪಣ್ಣ ಅವರು ಇದುವರೆಗೆ ಶೇ.40 ಕಮಿಷನ್‌ ಆರೋಪಕ್ಕೆ ದಾಖಲೆ ನಮಗೂ ಕೊಡಲಿಲ್ಲ. ನ್ಯಾಯಾಲಯಕ್ಕೂ ಕೊಡಲಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಕಾಂಗ್ರೆಸ್‌ನವರು ಅದರ ಲಾಭ ತೆಗೆದುಕೊಂಡಿದ್ದಾರೆ. ನಮ್ಮ ಕಾಲದ, ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ. ಅದರ ಜೊತೆಗೆ ಪಿಎಸ್‌ಐ ಪ್ರಕರಣವನ್ನೂ ತನಿಖೆ ಮಾಡಲಿ. ಎಲ್ಲ ಪ್ರಕರಣಗಳ ಸತ್ಯ ಹೊರಗೆ ಬರಲಿ. ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ ಎಂದರು.

ಯುವತಿಯ ಸಾವಿಗೆ ಬಿಬಿಎಂಪಿ ನಿರ್ಲಕ್ಷ್ಯ ಕಾರಣ: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆಯೋದಕ್ಕೆ ಅವಕಾಶ ಕೊಟ್ಟಂತಾಗಿದೆ. ಘಟನೆ ನಡೆದ ಕೂಡಲೇ ಧಾವಿಸಿ ರಕ್ಷಣೆ ಮಾಡುವ ಕೆಲಸ ಬಿಬಿಎಂಪಿಯವರು ಮಾಡಲಿಲ್ಲ ಎಂದರು.

ಸ್ಥಳೀಯ ಸಮ​ಸ್ಯೆ​ಗಳ ಪರಿ​ಹಾ​ರಕ್ಕೆ ಹೆಚ್ಚಿನ ನಿಗಾ: ಶಾಸಕ ವಿಜ​ಯೇಂದ್ರ ಭರ​ವ​ಸೆ

ನಾವು ಬೆಂಗಳೂರಿನಲ್ಲಿ ಎಸ್‌ಡಿಆರ್‌ಎಫ್‌ ತಂಡಗಳನ್ನು ರಚಿಸಿದ್ದೇವೆ. ಈ ತಂಡಗಳಿಗೆ ಚಾಲನೆ ಕೊಟ್ಟು ಕೆಲಸಕ್ಕೆ ಹಚ್ಚುವ ಕೆಲಸ ಆಗಬೇಕು. ಇನ್ನೂ ಐದು ದಿನ ಮಳೆ ಆಗಲಿದೆ ಎಂಬ ಮುನ್ಸೂಚನೆ ಇದೆ. ವ್ಯವಸ್ಥಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ನಗರದಲ್ಲಿ ಸಿಕ್ಕಾಪಟ್ಟೆಮರಗಳು ಬಿದ್ದಿವೆ. ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಆಗಿಲ್ಲ. ಮುಂದಿನ ಐದು ದಿನ ಹೀಗೆಯೇ ಬಿಟ್ಟರೆ ಬೆಂಗಳೂರು ಬಹಳ ಅಸ್ತವ್ಯಸ್ತ ಆಗಲಿದೆ. ಪರಿಹಾರ ಕ್ರಮಗಳನ್ನು ಆದ್ಯತೆಯಿಂದ ಮುಖ್ಯಮಂತ್ರಿ ಮಾಡಬೇಕಿದೆ. ಬಿಬಿಎಂಪಿ ಅಧಿಕಾರಿಗಳು ಕೆಲಸ ಮಾಡೋರು ಮಾಡುತ್ತಾರೆ, ಮಾಡದಿರೋರು ಮಾಡಲ್ಲ. ಪ್ಲಾನ್‌ ಪ್ರಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.