Asianet Suvarna News Asianet Suvarna News

ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿ ಮಧ್ಯಪ್ರವೇಶಿಸಲಿ: ಸಚಿವ ಭೋಸರಾಜ್

ರಾಜ್ಯದಲ್ಲಿ ಕಳೆದ 30 ವರ್ಷಗಳ ಹಿಂದೆ ಆಗಿದ್ದಂತಹ ಬರದ ಪರಿಸ್ಥಿತಿ ಈಗ ಎದುರಾಗಿದೆ. ಈ ಸಂದರ್ಭದಲ್ಲಿ ಕಾವೇರಿ ನೀರಿನ ಸಮಸ್ಯೆ ಉಲ್ಭಣಗೊಂಡಿದ್ದು, ಟ್ರಿಬ್ಯುನಲ್ ಮತ್ತು ಸುಪ್ರೀಂಕೋರ್ಟಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ.

Let the PM Modi intervene to solve the Cauvery water issue Says Minister NS Boseraju gvd
Author
First Published Sep 25, 2023, 1:01 PM IST

ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು (ಸೆ.25): ರಾಜ್ಯದಲ್ಲಿ ಕಳೆದ 30 ವರ್ಷಗಳ ಹಿಂದೆ ಆಗಿದ್ದಂತಹ ಬರದ ಪರಿಸ್ಥಿತಿ ಈಗ ಎದುರಾಗಿದೆ. ಈ ಸಂದರ್ಭದಲ್ಲಿ ಕಾವೇರಿ ನೀರಿನ ಸಮಸ್ಯೆ ಉಲ್ಭಣಗೊಂಡಿದ್ದು, ಟ್ರಿಬ್ಯುನಲ್ ಮತ್ತು ಸುಪ್ರೀಂಕೋರ್ಟಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಆದ್ದರಿಂದ ಪ್ರಧಾನಿ ಮೋದಿಯವರು ಮಧ್ಯ ಪ್ರವೇಶಿಸಿ ಮೂರು ರಾಜ್ಯಗಳ ಕರೆದು ಸಮಸ್ಯೆ ಬಗೆಹರಿಸಲಿ ಎಂದು ಕೊಡಗು ಉಸ್ತುವಾರಿ, ಸಣ್ಣ ನೀರಾವರಿ, ತಂತ್ರಜ್ನಾನ ಮತ್ತು ವಿಜ್ನಾನ ಇಲಾಖೆ ಖಾತೆ ಸಚಿವ ಭೋಸರಾಜ್ ಒತ್ತಾಯಿಸಿದ್ದಾರೆ. ಮಡಿಕೇರಿ ದಸರಾ ಜನೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. 

ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಸಾಕಷ್ಟು ಮಳೆ ಕೊರತೆಯಾಗಿದೆ. ಇದನ್ನು ನಿಭಾಯಿಸಲು ಸರ್ಕಾರ ಸಾಕಷ್ಟು ಪ್ರಯತ್ನಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಎರಡೆರಡು ಬಾರಿ ಸರ್ವ ಪಕ್ಷಗಳ ಸಭೆ ನಡೆಸಿದ್ದಾರೆ. ಎರಡು ಬಾರಿ ಪ್ರಧಾನಿಯವರಿಗೆ ಪತ್ರ ಬರೆದು ಸರ್ವಪಕ್ಷ ನಿಯೋಗ ಭೇಟಿಗೆ ಮನವಿ ಮಾಡಿದ್ದಾರೆ. ಆದರೆ ಇದುವರೆಗೆ ಪ್ರಧಾನಿಯವರು ಸಮಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್, ಟ್ರಿಬ್ಯುನಲ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಅಂದ ಮೇಲೆ ಕೇಂದ್ರ ಸರ್ಕಾರ, ಪ್ರಧಾನಿಯವರು ಮಧ್ಯಪ್ರವೇಶಿಸಬೇಕು. ಆದರೆ ಪ್ರಧಾನಿಯವರು ಇದುವರೆಗೆ ಅದರ ಬಗ್ಗೆ ಮಾತನಾಡುತ್ತಿಲ್ಲ. ತಮಿಳುನಾಡಿಗೆ ನೀರು ಬಿಡದಂತೆ ನಡೆಸುತ್ತಿರುವ ಪ್ರತಿಭಟನಾಕಾರರು ಲೋಕಸಭಾ, ರಾಜ್ಯಸಭಾ ಸದಸ್ಯರು ರಾಜೀನಾಮೆ ನೀಡಬೇಕು ಎನ್ನುತ್ತಿದ್ದಾರೆ. 

ಜೆಡಿಎಸ್‌ನವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಮಧು ಬಂಗಾರಪ್ಪ

ರಾಜ್ಯದಲ್ಲಿ ಬಿಜೆಪಿಯ 25 ಸಂಸದರಿದ್ದಾರೆ. ಅವರು ಪ್ರಧಾನಿಯವರ ಬಳಿ ಬಾಯಿ ಬಿಚ್ಚಬೇಕು. ಅವರಿಗೆ ರಾಜ್ಯದ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಬೇಕು. ಆದರೆ ಬಿಜೆಪಿಯವರೇ ತಾವು ಪ್ರತಿಭಟನೆ ಮಾಡುತ್ತಿದ್ದಾರೆ. ವಿರೋಧ ಪಕ್ಷದಲ್ಲಿರುವ ಬಿಜೆಪಿ ಜವಾಬ್ದಾರಿಯಿಂದ ಪ್ರಧಾನಿಯವರೊಂದಿಗೆ ಮಾತುಕತೆಗೆ ಮುಂದಾಗಬೇಕು. ರಾಜ್ಯದ ಪರಿಸ್ಥಿತಿಯನ್ನು ಪ್ರಧಾನಿಯವರಿಗೆ ಮನವರಿಕೆ ಮಾಡಬೇಕು. ಹಿಂದೆಯೂ ರಾಜ್ಯಕ್ಕೆ ಅನ್ಯಾಯವಾದಾಗ ಇಂದಿರಾಗಾಂಧಿಯವರು ಮೂರು ರಾಜ್ಯಗಳನ್ನು ಕರೆಸಿ ಸರಿಪಡಿಸಿದ ಉದಾಹರಣೆ ಇವೆ. ಹೀಗಾಗಿ ಇದರಲ್ಲಿ ರಾಜಕೀಯ ಮಾಡದೆ ಅನ್ಯಾಯ ಸರಿಪಡಿಸಲು ರಾಜ್ಯ ಸರ್ಕಾರ ಎಲ್ಲರ ಸಹಕಾರ ಕೇಳುತ್ತಿದೆ ಎಂದು ಮಡಿಕೇರಿಯಲ್ಲಿ ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಭೋಸರಾಜ್ ಹೇಳಿದ್ದಾರೆ. 

I N D I A ಮೈತ್ರಿಗೆ ಅನುಕೂಲ ಆಗಲೆಂದು ತಮಿಳುನಾಡಿಗೆ ನೀರು ಬಿಡಲಾಗುತ್ತದೆ. ರಾಜ್ಯದಲ್ಲಿರುವ ಬರದ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟಿಗೆ ಸರ್ಕಾರ ಸರಿಯಾಗಿ ಮನವರಿಕೆ ಮಾಡಿಕೊಡುವುದರಲ್ಲಿ ಸೋತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ತಮಿಳುನಾಡಿನಲ್ಲಿ ಆಡಳಿತ ಇರುವುದು ಡಿಎಂಕೆ ಹೊರತ್ತು ಕಾಂಗ್ರೆಸ್ ಪಕ್ಷ ಅಲ್ಲ. ಕೇಂದ್ರದಲ್ಲಿ ನಿಮ್ಮದೆ ಪಾರ್ಟಿ ಇದೆಯಲ್ಲ, ರಾಜ್ಯದ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿದರು. ಚುನಾವಣೆ ಸಂದರ್ಭದಲ್ಲಿ ರಾಜ್ಯಕ್ಕೆ ಪ್ರಧಾನಿಯವರು 26 ಬಾರಿ ಬಂದು ಹೋದರು. 

Mangaluru: ಮೀನುಗಾರಿಕಾ ಬಂದರಿನಲ್ಲಿ 'Eid' ಬ್ಯಾನರ್ ವಿವಾದ: ವ್ಯಾಪಾರ ಬಹಿಷ್ಕಾರದ ಎಚ್ಚರಿಕೆ!

ಆದರೆ ರಾಜ್ಯದ ಪರಿಸ್ಥಿತಿಯನ್ನು ಅವರಿಗೆ ಬಿಜೆಪಿ ಮನವರಿಕೆ ಮಾಡಿಕೊಡಲಾಗುತ್ತಿಲ್ಲ ಏಕೆ. ಎಷ್ಟು ಭಾರಿ ಕೇಳಿದರು ಪ್ರಧಾನಿಯವರು ಸರ್ವಪಕ್ಷ ಸಭೆ ಮಾತುಕತೆಗೆ ಸಮಯ ನೀಡುತ್ತಿಲ್ಲ. ಎಲ್ಲದಕ್ಕೂ ಉತ್ತರ ಅವರಲ್ಲಿಯೇ ಇರುತ್ತದೆ. ಆದರೆ ರಾಜಕೀಯವಾಗಿ ಮಾತನಾಡುವುದನ್ನು ಬಿಡಿ ಬದಲಾಗಿ, ಎಲ್ಲರೂ ಒಂದಾಗಿ ಈ ಸಮಸ್ಯೆಯನ್ನು ಎದುರಿಸಬೇಕು. ಅದಕ್ಕೆ ಪ್ರಧಾನಿಯವರು ಮಧ್ಯ ಪ್ರವೇಶಿಸಬೇಕು. ಮೂರು ರಾಜ್ಯಗಳ ಕರೆದು ಸುಪ್ರೀಂ ಕೋರ್ಟ್ ಹೊರಗೆ ಈ ಸಮಸ್ಯೆ ಬಗೆಹರಿಸಬೇಕು ಎಂದು ಮಡಿಕೇರಿಯಲ್ಲಿ ಸಚಿವ ಭೋಸರಾಜ್ ಆಗ್ರಹಿಸಿದರು. 

Follow Us:
Download App:
  • android
  • ios