ಸಿದ್ದರಾಮಯ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ: ಆರ್‌.ಅಶೋಕ್‌

ಕೆಂಪಣ್ಣ ಆರೋಪಕ್ಕೆ ಕಾಂಗ್ರೆಸ್‌ನವರು ಏನು ಹೇಳುತ್ತಾರೆ? ಒಂದಿಷ್ಟಾದರೂ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಿ, ಅಧಿಕಾರದಿಂದ ಕೆಳಗಿಳಿಯಲಿ. ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Let the Siddaramaiah government step down Says R Ashok gvd

ದಾವಣಗೆರೆ (ಫೆ.10): ಕೆಂಪಣ್ಣ ಆರೋಪಕ್ಕೆ ಕಾಂಗ್ರೆಸ್‌ನವರು ಏನು ಹೇಳುತ್ತಾರೆ? ಒಂದಿಷ್ಟಾದರೂ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಿ, ಅಧಿಕಾರದಿಂದ ಕೆಳಗಿಳಿಯಲಿ. ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಹರಿಹರ ತಾಲೂಕು ರಾಜನಹಳ್ಳಿಗೆ ಶುಕ್ರವಾರ ವಾಲ್ಮೀಕಿ ಜಾತ್ರೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಕೆಂಪಣ್ಣ ಆರೋಪವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಇದೇ ಗುತ್ತಿಗೆದಾರರ ಸಂಘದ ಕೆಂಪಣ್ಣನನ್ನು ಮುಂದಿಟ್ಟು ಕಾಂಗ್ರೆಸ್ಸಿನವರೇ ಪ್ರಚಾರ ಮಾಡಿದ್ದರು. ಶೇ.40 ಅಂತಾ ಫಲಕ ಹಿಡಿದು, ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಪ್ರಚಾರ ಮಾಡಿದ್ದರು. ಈಗ ಅದೇ ಕೆಂಪಣ್ಣ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದಾರೆ. ಸಿದ್ದರಾಮಯ್ಯನವರೇ ಶೇ.40 ಕಮಿಷನ್ ಎನ್ನುವಂತಾಗಿದೆ ಎಂದು ಲೇವಡಿ ಮಾಡಿದರು.

ದಾಖಲೆಗಳ ತಂದು ಕೊಡಲಿ: ಕಾಂಗ್ರೆಸ್ ಸರ್ಕಾರದ ಶೇ.40 ಕಮಿಷನ್ ದಂಧೆಯ ಕುರಿತಂತೆ ವಿಧಾನಸೌಧದ ಒಳಗೆ ಹಾಗೂ ಹೊರಡಗೆ ನಾವು ಹೋರಾಡುತ್ತೇವೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಕುರಿತು ದಾಖಲೆಗಳ ನೀಡುವುದಾಗಿ ಸ್ವತಃ ಕೆಂಪಣ್ಣ ಕರೆ ಮಾಡಿದ್ದರು. ಕೆಂಪಣ್ಣನವರಿಗೂ ನಾನು ಸಮಯ ಕೊಡುತ್ತೇನೆ. ದಾಖಲೆಗಳನ್ನು ತಂದು ಕೊಡಲಿ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಶೇ.40 ದಂಧೆಯ ವಿರುದ್ಧ ನಮ್ಮ ಹೋರಾಟ ಆರಂಭವಾಗಲಿದ್ದು, ನಾವಂತೂ ಇದನ್ನು ಇಲ್ಲಿಗೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಡಳಿತ ಯಂತ್ರ ಕುಸಿದಿರುವುದಕ್ಕೆ ಸಿದ್ದು ಜನಸ್ಪಂದನ ಕಾರ್ಯಕ್ರಮ ಸಾಕ್ಷಿ: ಆರ್‌.ಅಶೋಕ್ ಕಿಡಿ

ಲೂಟಿ ಮಾಡಲು ಅಧಿಕಾರಿಗಳ ಬಳಕೆ: ಸಿದ್ದರಾಮಯ್ಯ ಸರ್ಕಾರವು ಅಧಿಕಾರಿಗಳ ಲೂಟಿ ಮಾಡಲು ಹಚ್ಚಿ ಬಿಟ್ಟಿದ್ದಾರೆ. ಯಾರು ಕಾಂಗ್ರೆಸ್ ಸರ್ಕಾರಕ್ಕೆ ಹಣವನ್ನು ಕೊಡುತ್ತಾರೋ, ಅಂತಹವರಷ್ಟೇ ಇರಬೇಕು. ವಾರಕ್ಕೆ ಇಂತಿಷ್ಟು, ತಿಂಗಳಿಗೆ ಇಷ್ಟು ಅಂತಾ ಲೂಟಿಗೆ ಕಾಂಗ್ರೆಸ್ ಸರ್ಕಾರದವರು ಇಳಿದಿದ್ದಾರೆ. ಹಾಗಾಗಿ ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿದ್ದಾರೆಂಬ ಚರ್ಚೆ ಕುರಿತ ಪ್ರಶ್ನೆಗೆ ವಿಪಕ್ಷ ನಾಯಕ ಆರ್‌.ಅಶೋಕ ಪ್ರತಿಕ್ರಿಯಿಸಿದರು.

Latest Videos
Follow Us:
Download App:
  • android
  • ios