ರಾಜ್ಯ ಸರ್ಕಾರ ರೈತರ ಖಾತೆಗೆ ಡಬಲ್ ಬರ ಪರಿಹಾರ ನೀಡಲಿ: ಆರ್.ಅಶೋಕ್
ಬರಗಾಲದಿಂದ ಬಳಲಿದ್ದ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ 3,454 ಕೋಟಿ ರು. ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ನೀಡಿದಂತೆ ಕಾಂಗ್ರೆಸ್ ಸರ್ಕಾರವೂ ಡಬಲ್ ಪರಿಹಾರ ನೀಡಲಿ ಎಂದು ವಿರೋಧ ಪಕದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಬೆಂಗಳೂರು (ಏ.28): ಬರಗಾಲದಿಂದ ಬಳಲಿದ್ದ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ 3,454 ಕೋಟಿ ರು. ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ನೀಡಿದಂತೆ ಕಾಂಗ್ರೆಸ್ ಸರ್ಕಾರವೂ ಡಬಲ್ ಪರಿಹಾರ ನೀಡಲಿ ಎಂದು ವಿರೋಧ ಪಕದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು.
ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ. ಸರ್ಕಾರ ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿ ಓಲೈಕೆ ರಾಜಕಾರಣ ಮಾಡಿದೆ. ಮುಸ್ಲಿಮರು ಹಲ್ಲೆ ಮಾಡಿದರೆ, ಪಾಕಿಸ್ತಾನ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುವುದಿಲ್ಲ. ಹಿಂದುಳಿದ ವರ್ಗಗಳ ಮತ ಕೇಳುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಶ್ರೀನಿವಾಸ ಪ್ರಸಾದ್‌ಗೆ ತೀವ್ರ ಅನಾರೋಗ್ಯ: ಐಸಿಯುನಲ್ಲಿ ಚಿಕಿತ್ಸೆ
ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದೆ: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದೆ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆರೋಪಿಸಿದರು. ರಾಜ್ಯ ಸರ್ಕಾರ ನ್ಯಾಯಾಲಯದ ಮೊರೆ ಹೋದ ಮೇಲೆ 3,454 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದೆ. ಆದರೆ ನಾವು ಕೇಳಿದ್ದು ಸುಮಾರು 18 ಸಾವಿರ ಕೋಟಿ. ಹೀಗಾಗಿ ಈಗ ಭಿಕ್ಷೆ ರೂಪದಲ್ಲಿ ಪರಿಹಾರ ನೀಡಲಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ನ್ಯಾಯಾಲಯದಲ್ಲಿನ ಹೋರಾಟ ಮುಂದುವರಿಸಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
ಕೇಂದ್ರದ ಎನ್.ಡಿ.ಆರ್.ಎಫ್ ಮಾನದಂಡದ ಅಡಿಯಲ್ಲಿ ಪರಿಹಾರ ಕೇಳಲಾಗಿತ್ತು. ಆದರೆ ಕೇಂದ್ರ ಅತಿ ಕಡಿಮೆ ಪ್ರಮಾಣದ ಪರಿಹಾರ ಬಿಡುಗಡೆಗೊಳಿಸಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಬಳಿಕ, ಕೇಂದ್ರ ಬಿಜೆಪಿಯ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯ ರೈತ ಸಂಘ ಚುನಾವಣೆ ವೇಳೆ ಬಿಜೆಪಿ ಮೈತ್ರಿ ಪಕ್ಷ ಸೋಲಿಸಿ, ರೈತರನ್ನು ಉಳಿಸಿ ಎಂಬ ಅಭಿಯಾನ ಹಮ್ಮಿಕೊಂಡಿದೆ. ಇದರ ಅಂಗವಾಗಿ ಮೊದಲನೇ ಹಂತದ ಚುನಾವಣೆ ವೇಳೆ ಸುಮಾರು ಶೇ. 4ರಷ್ಟು ರೈತರ ಮತಗಳು ಮೈತ್ರಿ ಪಕ್ಷ ವಿರುದ್ಧವಾಗಿ ಚಲಾವಣೆ ಆಗಿರುವ ಸಾಧ್ಯತೆ ಇದೆ.
ದೇಶಕ್ಕಾಗಿ ಪ್ರಾಣ ಬಿಟ್ಟ ನನ್ನ ತಂದೆಗೆ ಮೋದಿ ಅಪಮಾನ: ಪ್ರಿಯಾಂಕಾ ಗಾಂಧಿ ಕಿಡಿ
ಇದೇ ರೀತಿ ಎರಡನೇ ಹಂತದಲ್ಲಿಯೂ ಉತ್ತರ ಕರ್ನಾಟಕದಲ್ಲಿಯೂ ರೈತ ಸಂಘ ಅಭಿಯಾನ ಮುಂದುವರಿಸಲಿದೆ ಎಂದು ಅವರು ಹೇಳಿದರು. ಇನ್ನು, ಬರಗಾಲದ ಕಾರಣ ಪಂಪ್ ಸೆಟ್ ಆಧರಿಸಿ ಕೃಷಿ ಮಾಡುವವರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಇದರೊಡನೆ ವಿದ್ಯುತ್ ಸಂಪರ್ಕದ ಶುಲ್ಕ ಸುಮಾರು 28 ಸಾವಿರ ಇದ್ದುದನ್ನು 2.5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಅವರು ಹೇಳಿದರು.