ಮಣಿಪುರ ಗಲಭೆಯ ನೈತಿಕ ಹೊಣೆ ಹೊತ್ತು ತಕ್ಷಣವೇ ಅಲ್ಲಿನ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಿತ್ತು. ತಕ್ಷಣವೇ ಅಲ್ಲಿನ ಸರ್ಕಾರ ಕಿತ್ತೊಗೆದು ರಾಷ್ಟ್ರಪತಿ ಆಡಳಿತ ಬರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೇಳಿದರು. 

ಹುಬ್ಬಳ್ಳಿ (ಜು.23): ಮಣಿಪುರ ಗಲಭೆಯ ನೈತಿಕ ಹೊಣೆ ಹೊತ್ತು ತಕ್ಷಣವೇ ಅಲ್ಲಿನ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಿತ್ತು. ತಕ್ಷಣವೇ ಅಲ್ಲಿನ ಸರ್ಕಾರ ಕಿತ್ತೊಗೆದು ರಾಷ್ಟ್ರಪತಿ ಆಡಳಿತ ಬರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಣಿಪುರದ ಗಲಭೆಗೆ ಮೂಲಭೂತ ಕಾರಣಗಳನ್ನು ಕೇಂದ್ರ ಸರ್ಕಾರ ಆರಂಭದಲ್ಲಿ ಹುಡುಕಬೇಕಿತ್ತು. ಆರಂಭದಲ್ಲಿಯೇ ಅಲ್ಲಿನ ರಾಜ್ಯ ಸರ್ಕಾರ ಗಲಭೆ ತಡೆಯಲು ವಿಫಲವಾಗಿದೆ. ಇದರಲ್ಲಿ ಮುಖ್ಯಮಂತ್ರಿಯ ವೈಫಲ್ಯಗಳು ಎದ್ದು ಕಾಣುತ್ತಿದೆ. ಇಂತಹ ವೇಳೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕಿತ್ತು. 

ಆದರೆ, ಇದು ಆಗದ ಹಿನ್ನೆಲೆಯಲ್ಲಿ ಈಗ ಅದು ವಿಕೋಪಕ್ಕೆ ಹೋಗಿದೆ. ಅಲ್ಲಿನ ಜನತೆಯೂ ಮುಖ್ಯಮಂತ್ರಿಯ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಈ ಕೂಡಲೇ ಮಣಿಪುರದ ಮುಖ್ಯಮಂತ್ರಿ ಗಲಭೆಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದರು. ಮಹಿಳೆಯರ ನಗ್ನ ಮೆರವಣಿಗೆ ಪೈಶಾಚಿಕ ಕೃತ್ಯ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೇಂದ್ರ ಸರ್ಕಾರ ಬರಿ ಬಾಯಿ ಮಾತಿನಲ್ಲಿ ಕಠಿಣ ಕ್ರಮ ಅನ್ನಬಾರದು, ಇದು ಕಾರ್ಯರೂಪಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಶೀಘ್ರದಲ್ಲಿ ಚಿತ್ರದುರ್ಗ ಮೆಡಿಕಲ್‌ ಕಾಲೇಜು ಶುರು: ಸಚಿವ ಡಿ.ಸುಧಾಕರ್‌

ಕೆಲವರ ಕಪಿಮುಷ್ಠಿಯಲ್ಲಿ ಬಿಜೆಪಿ: ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಕಪಿಮುಷ್ಠಿಯಲ್ಲಿದೆ ಅನ್ನೋದು ನಾನು ಮೊದಲಿಂದ ಹೇಳುತ್ತಾ ಬಂದಿದ್ದೇನೆ. ಅದು ಈಗ ಸಾಬೀತಾಗಿದೆ. ಇದರಿಂದ ಬಿಜೆಪಿ ಇನ್ನೂ ಹೊರಬಂದಿಲ್ಲ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಎನ್ನುವುದು ಸಂಪೂರ್ಣವಾಗಿ ಹೋಗಿದೆ. ಒಂದು ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನಿಲ್ಲದಿರುವುದು ನಾನು ಎಂದಿಗೂ ನೋಡಿಲ್ಲ. ಇದು ಬಿಜೆಪಿ ಲೀಡರ್‌ ಲೇಸ್‌ ಕರ್ನಾಟಕ ಎನ್ನುವುದನ್ನು ತೋರಿಸಿಕೊಟ್ಟಿದೆ. ಇದರಿಂದಾಗಿ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿಜೆಪಿ ಕುಸಿಯುತ್ತಿದೆ, ಕಾಂಗ್ರೆಸ್‌ ಬಲಿಷ್ಠವಾಗುತ್ತಿದೆ. ಇದರಿಂದ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

9 ವರ್ಷ ಏನು ಮಾಡಿದರು?: ಏಕರೂಪ ನಾಗರಿಕ ಕಾನೂನು ಚುನಾವಣೆ ಗಿಮಿಕ್‌. ಮೋದಿ ಸರ್ಕಾರ ತನ್ನ ಮೊದಲ ಪ್ರಣಾಳಿಕೆಯಲ್ಲಿಯೇ ಈ ಕಾನೂನು ಘೋಷಣೆ ಮಾಡಿತ್ತು. ಆದರೆ, 9 ವರ್ಷ ಜಾರಿ ಮಾಡದೆ ಈಗ ಚುನಾವಣೆಯ ಸಮಯದಲ್ಲಿ ಜಾರಿ ಮಾಡುತ್ತದೆ ಅಂದರೆ ಏನು ಅರ್ಥ? ಯಾವುದೇ ಚರ್ಚೆ ಆಗದೇ ತರಾತುರಿಯಲ್ಲಿ ಕಾನೂನು ಜಾರಿ ಮಾಡುತ್ತಿರುವುದು ಚುನಾವಣೆ ಉದ್ದೇಶದಿಂದ ಎಂಬುದು ಸ್ಪಷ್ಟವಾಗಿದೆ ಎಂದರು. ನಂದಿನಿ ಹಾಲಿನ ದರ ಏರಿಕೆ ಬಹಳಷ್ಟುದಿನದಿಂದ ಇತ್ತು. 

ಯು.ಟಿ.ಖಾದರ್‌ ಸಭಾ​ಧ್ಯಕ್ಷ ಪೀಠಕ್ಕೆ ಯೋಗ್ಯ​ರ​ಲ್ಲ: ಈಶ್ವ​ರಪ್ಪ

ಈ ಬಗ್ಗೆ ರೈತ ಮತ್ತು ಸರಬರಾಜು ಮಾಡುವವರ ಜೊತೆಗೆ ಚರ್ಚೆ ನಡೆಯುತ್ತಿದೆ. ಎಲ್ಲ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಏನಾದರೂ ಯೋಜನೆ ಜಾರಿ ಮಾಡಬೇಕಾದರೆ ದರ ಏರಿಕೆ ಅನಿವಾರ್ಯವಾಗುತ್ತದೆ ಎಂದರು. ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವಿಚಾರವಾಗಿ ಮಾತನಾಡಿದ ಶೆಟ್ಟರ್‌, ಎಲ್ಲ ಆಕಾಂಕ್ಷಿತರನ್ನು ಸಮಾಧಾನ ಮಾಡಲು ಎಲ್ಲ ಸಮಯದಲ್ಲಿ ಸಾಧ್ಯವಿಲ್ಲ. ಸಣ್ಣ-ಪುಟ್ಟಅಸಮಾಧಾನಗಳಿವೆ. ಅದನ್ನು ಸರಿಪಡಿಸುವ ಶಕ್ತಿ ಕಾಂಗ್ರೆಸ್‌ ನಾಯಕರಿಗಿದ್ದು, ಎಲ್ಲ ಅಸಮಾಧಾನ ಸರಿ ಮಾಡಿಕೊಂಡು ಉತ್ತಮ ಆಡಳಿತ ನೀಡುತ್ತೇವೆ ಎಂದರು.