ವೀರಶೈವ, ಲಿಂಗಾಯತದಡಿ ಎಲ್ಲಾ ಉಪ ಪಂಗಡಗಳ ಸೇರಿಸೋಣ: ಸಚಿವ ಎಂ.ಬಿ.ಪಾಟೀಲ್
ಎಲ್ಲಾ ಉಪ ಪಂಗಡಗಳನ್ನು ವೀರಶೈವ- ಲಿಂಗಾಯತದಡಿ ಸೇರಿಸಿ ದೊಡ್ಡ ಸಮಾಜ ನಿರ್ಮಿಸಬೇಕು. ಆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೀಸಲಾತಿ ಪಡೆಯಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕರೆ ನೀಡಿದರು.
ಮೈಸೂರು (ಜೂ.10): ಒಕ್ಕಲಿಗ ಸಮಾಜದವರು ಉಪ ಪಂಗಡಗಳನ್ನು ಸೇರಿಸಿಕೊಂಡಂತೆ ನಾವೂ ಎಲ್ಲಾ ಉಪ ಪಂಗಡಗಳನ್ನು ವೀರಶೈವ- ಲಿಂಗಾಯತದಡಿ ಸೇರಿಸಿ ದೊಡ್ಡ ಸಮಾಜ ನಿರ್ಮಿಸಬೇಕು. ಆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೀಸಲಾತಿ ಪಡೆಯಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕರೆ ನೀಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ, ವೀರಶೈವ- ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಆಯೋಜಿಸಿದ್ದ ನಮ್ಮ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ವೀರಶೈವರು ಸಂಪರ್ಕ ಸಾಧಿಸಬೇಕು. ಆಗ ರಾಜಕೀಯ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ಉತ್ತರದಿಂದ ದಕ್ಷಿಣವನ್ನು ಸಂಘಟಿಸಬೇಕು. ನಮ್ಮ ಸಮಾಜದ ಸಂಘಟನೆ ಜೊತೆಗೆ ಉಪ ಪಂಗಡದವರನ್ನು ಒಟ್ಟಾಗಿ ಕರೆದೊಯ್ಯ ಬೇಕು. ಭಿನ್ನಾಭಿಪ್ರಾಯ ಬದಿಗೊತ್ತಿ, ಅಂತರ್ಜಾತಿ ವಿವಾಹದ ಮೂಲಕ ಒಂದಾಗಬೇಕು ಎಂದರು.
ಹಿನ್ನಡೆಗೆ ಯಾರನ್ನೂ ಹೊಣೆ ಮಾಡಲು ಸಾಧ್ಯವಿಲ್ಲ: ಚುನಾವಣೆ ಹಿನ್ನಡೆಗೆ ಯಾರನ್ನೂ ಹೊಣೆ ಮಾಡಲು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎನ್ನುವ ಕುರಿತು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ.
ಮೋದಿ ಪ್ರಮಾಣವಚನ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸಂಭ್ರಮ
ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ಕಂಡುಕೊಳ್ಳಲಿದ್ದೇವೆ ಎಂದರು. ಪ್ರಸ್ತುತ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್‌ಕುಮಾರ್ ಅವರಂತ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ. ಮತ್ತೆ ಚುನಾವಣೆಯೂ ಬರಬಹುದು ಎಂದು ಹೇಳಿದರು.