ಬಿಜೆಪಿಗೆ ಸೋಲನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ: ಮಂಥರ್‌ ಗೌಡ

ಬಿಜೆಪಿಯವರಿಗೆ ತಮ್ಮ ಸೋಲನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್‌ ಗೌಡ ಹೇಳಿದ್ದಾರೆ.‘ಕಾಂಗ್ರೆಸ್‌ನವರ ಡಿಎನ್‌ಎಯಲ್ಲೇ ಸುಳ್ಳು ಮೋಸ ಸೇರಿಕೊಂಡಿದೆ. ಅವರು ಮಹಾನ್‌ ಛತ್ರಿಗಳು’ ಎಂಬ ಮಾಜಿ ಸಚಿವ ಆರ್‌.ಅಶೋಕ್‌ ಹೇಳಿಕೆಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದರು.

Lets leave differences and work together says MLA Manthar gowda at madikeri rav

ಮಡಿಕೇರಿ (ಜು.1) : ಬಿಜೆಪಿಯವರಿಗೆ ತಮ್ಮ ಸೋಲನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್‌ ಗೌಡ ಹೇಳಿದ್ದಾರೆ.

‘ಕಾಂಗ್ರೆಸ್‌ನವರ ಡಿಎನ್‌ಎಯಲ್ಲೇ ಸುಳ್ಳು ಮೋಸ ಸೇರಿಕೊಂಡಿದೆ. ಅವರು ಮಹಾನ್‌ ಛತ್ರಿಗಳು’ ಎಂಬ ಮಾಜಿ ಸಚಿವ ಆರ್‌.ಅಶೋಕ್‌ ಹೇಳಿಕೆಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯವರಿಗೆ ತಮ್ಮ ಸೋಲನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅದರಲ್ಲೂ ಕೊಡಗಿನಲ್ಲಿ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಸೋತಿದೆ. ಎರಡು ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಕೊಂಡಿದ್ದರು. ಈಗ ದೊಡ್ಡ ಮಾರ್ಜಿನ್‌ನಲ್ಲಿ ಸೋತಿರುವುದನ್ನು ಸಹಿಸಲಾಗುತ್ತಿಲ್ಲ. ಹೀಗಾಗಿ ಆರ್‌.ಅಶೋಕ್‌ ಕೊಡಗಿಗೆ ಬಂದು ಈ ರೀತಿ ಮಾತನಾಡಿದ್ದಾರೆ ಎಂದು ಹೇಳಿದರು.

ಕೊಡಗು: ವನ್ಯಜೀವಿ - ಮಾನವ ಸಂಘರ್ಷಕ್ಕೆ ಸಿಕ್ಕೀತೆ ಶಾಶ್ವತ ಪರಿಹಾರ?

ಅಶೋಕ್‌ ಅವರು ಡಿಎನ್‌ಎ ಬಗ್ಗೆ ಮೆಡಿಕಲ್‌ ಓದಿದ್ದಾರಾ ಎಂದು ಪ್ರಶ್ನಿಸಿದ ಶಾಸಕ ಮಂಥರ್‌ ಗೌಡ, ಅದರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. 2013ರಲ್ಲೂ ನೀಡಿದ್ದ ಭರವಸೆಗಳನ್ನು ಶೇ.90ರಷ್ಟುಈಡೇರಿಸಿದ್ದೆವು. ಈಗ ನಮ್ಮ ಸರ್ಕಾರಕ್ಕೆ ಇನ್ನಷ್ಟುಬಹುಮತ ಇದೆ. ಎಲ್ಲ ಆಶ್ವಾಸನೆಗಳನ್ನು ಈಡೇರಿಸುತ್ತೇವೆ. ಆ ವಿಶ್ವಾಸ ಸಿಎಂ, ಡಿಸಿಎಂ, ಸಚಿವರ ಮೇಲೆ ಇದೆ, ನಾವು ನೀಡಿರುವ ಭರವಸೆಗಳನ್ನು ಯಾವ ಕಾರಣಕ್ಕೂ ತಪ್ಪಿಸಲ್ಲ ಎಂದು ಆರ್‌. ಅಶೋಕ್‌ಗೆ ಟಾಂಗ್‌ ಕೊಟ್ಟರು.

ಭಿನ್ನಮತ ಬಿಟ್ಟು ಜನಪರ ಕೆಲಸ ಮಾಡೋಣ: ಶಾಸಕ ಮಂಥರ್‌ ಗೌಡ

ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡ ಕ್ಷೇತ್ರದ ನೂತನ ಶಾಸಕ ಡಾ.ಮಂತರ್‌ ಗೌಡ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಪೇಟ ತೊಡಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್‌ ಹಾಗೂ ಪೌರಾಯುಕ್ತ ವಿಜಯ ಅವರು ನಗರದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು. ಸಭೆಯಲ್ಲಿದ್ದ ಸದಸ್ಯರುಗಳು ಕೂಡ ಹೂಗುಚ್ಛ ನೀಡಿ ಅಭಿನಂದಿಸಿದರು.

Karnataka assembly election results: ನ್ಯಾಯವಾದಿ, ವೈದ್ಯರು ಕೊಡಗಿನ ನೂತನ ಶಾಸಕರು

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಮಂತರ್‌ ಗೌಡ, ಭಿನ್ನಮತಗಳನ್ನು ಬದಿಗೊತ್ತಿ ಎಲ್ಲರೂ ಒಗ್ಗಟ್ಟಿನಿಂದ ಜನಪರವಾಗಿ ನಗರದ ಅಭಿವೃದ್ಧಿಗೆ ಶ್ರಮಿಸೋಣ. ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳೋಣ ಎಂದರು. ಸಭೆಯಲ್ಲಿ ವಾಗ್ವಾದ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ, ಬದಲಿಗೆ ನೈಜಾಂಶವನ್ನು ಅರಿತು ಸಮಸ್ಯೆಯನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡವುದಾಗಿ ಭರವಸೆ ನೀಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್‌, ಪೌರಾಯುಕ್ತ ವಿಜಯ, ಆಡಳಿತಾರೂಢ ಬಿಜೆಪಿ, ವಿಪಕ್ಷ ಎಸ್‌ಡಿಪಿಐ ಹಾಗೂ ಕಾಂಗ್ರೆಸ್‌ ಪಕ್ಷದ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios