ಬೆಂಗಳೂರು, (ನ.15): ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ರಾಜ್ಯಾಧ್ಯ ಸಿಎಂ ಮೊರೆ ಹೋಗಿದ್ದಾರೆ.

ಹೌದು....ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಜಿ ಮನೋಹರ್ ಅಬ್ಬಿಗೆರೆ ಅವರು ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಪುತ್ರ ಹೇಳಿದ ಒಂದೇ ಮಾತಿಗೆ ಜಾರಿಗೊಳಿಸಿದ ಸಿಎಂ: ಇದೆಲ್ಲ ಬಸವ'ಕಲ್ಯಾಣ'ಕ್ಕಾಗಿ...!

ತಾವು ಬೇರೆ ಎಲ್ಲ ಸಮುದಾಯದ ನಿಗಮ ಮತ್ತು ಪ್ರಾಧಿಕಾರ ರಚನೆ ಮಾಡುತ್ತಿದ್ದೀರಿ. ಆದರೆ ಯಾಕೋ ನಮ್ಮ ಮನವಿಗೆ ನೀವು ಸ್ಪಂದಿಸುತ್ತಿಲ್ಲ. ತಕ್ಷಣವೇ ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಬಸವಕಲ್ಯಾಣ ಉಪಚುನಾವಣೆ ಹಿನ್ನೆಲೆಯಲ್ಲಿ ಮರಾಠ ಮತದಾರರನ್ನು ಓಲೈಸಲು ಬಿಎಸ್‌ವೈ ನೇತೃತ್ವದ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಹೊರಡಿಸಿದೆ.

ಮೊದಲಿನಿಂದ ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ಮಾಡುವಂತೆ ಹಲವು ವರ್ಷಗಳಿಂದ ಮನವಿ ಮಾಡಿದರೂ ಯಾವುದೇ ಪ್ರಯೋಜನೆಯಾಗಿಲ್ಲ. ಆದ್ರೆ, ಏಕಾಏಕಿ ಮರಾಠ ಪ್ರಾಧಿಕಾರ ರಚನೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಮರಾಠ ಪ್ರಾಧಿಕಾರ ರಚಿಸಿರುವುದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕನ್ನಡ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗುತ್ತಿವೆ.