Asianet Suvarna News Asianet Suvarna News

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

* ಕೊನೆಗೂ ಕರ್ನಾಟಕದ ಮುಂದಿನ ಸಿಎಂ ಹೆಸರು ಫೈನಲ್
* ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ
* ಬಿಜೆಪಿ ಶಾಸಕಾಂಗ ಸಭೆಯಲ್ಲಿ ತೀರ್ಮಾನ

Lingayat leader basavaraj bommai appointed new chief minister of Karnataka rbj
Author
Bengaluru, First Published Jul 27, 2021, 8:08 PM IST
  • Facebook
  • Twitter
  • Whatsapp

ಬೆಂಗಳೂರು, (ಜು.27): ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.

ಕೊನೆಗೂ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಂತಿಮವಾಗಿ ನಿರೀಕ್ಷೆಯಂತೆ ಲಿಂಗಾಯತ ನಾಯಕನಿಗೆ ಮಣೆಹಾಕಿದ್ದು. ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಅಂತಿಮಗೊಳಿಸಿದೆ.

'ಲಿಂಗಾಯತರನ್ನೇ ಸಿಎಂ ಮಾಡ್ಬೇಕು, ಅನ್ಯ ಜಾತಿಯವರಾದ್ರೆ ಸರ್ಕಾರ ಉಳಿಯಲ್ಲ'

ಇಂದು (ಮಂಗಳವಾರ) ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಪಮತದಿಂದ ಬಸವರಾಜ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ.

ಬಿಎಸ್‌ವೈ ಆಪ್ತರಾಗಿರುವ ಬಸವರಾಜ ಬೊಮ್ಮಾಯಿ ಅವರು ನಾಳೆಯೇ ಅಂದ್ರೆ ಜುಲೈ.28ರಂದು ಮಧ್ಯಾಹ್ನ 3.30ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Follow Us:
Download App:
  • android
  • ios