ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಅ.26 ರಿಂದ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮದ್ಯ ಬಂದ್?

ಕೋಲಾರ, (ಅ.24):‌ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಅಂದ್ರೆ ಅ.26 ರಿಂದ ನಾಲ್ಕು ದಿನಗಳ ಕಾಲ ಕೋಲಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊಲಾರ ಜಿಲ್ಲಾಧಿಕಾರಿ ಸತ್ಯಭಾಮ ಅವರು ಆದೇಶ ಹೊರಡಿಸಿದ್ದು, ಇಡೀ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಾಲ್ಕು ದಿನಗಳ ಕಾಲ ನಿಷೇಧ ಮಾಡಲಾಗಿದೆ. ಹೊರಗಿನವರು ಜಿಲ್ಲೆಯಲ್ಲಿರುವ ಕುರಿತು ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ, ಬಿಜೆಪಿ ಶಾಸಕಿ ಪತಿ ಉಚ್ಛಾಟನೆ..!

ಇದೇ ಅ. 28 ರಂದು‌ ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ 21 ಸಾವಿರ ಪದವೀಧರ ಮತದಾರರು ಮತದಾನದ ಹಕ್ಕು ಹೊಂದಿದ್ದು, ಮತದಾನ ನಡೆಯುವ ಚಿತ್ರದುರ್ಗ, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮದ್ಯ ಮಾರಾಟ ನಿಷೇಧಿಸಲಾಗಿದೆ.