ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಪೂರ್ಣ ಸಾಲಮನ್ನಾ: ಕುಮಾರಸ್ವಾಮಿ

ಉತ್ತರ ಕರ್ನಾಟಕದ ಯುವ ಸಮುದಾಯಕ್ಕೆ ಸರ್ಕಾರಿ, ಖಾಸಗಿ ಕೆಲಸ ಪಡೆಯಲು ಹರಸಾಹಸ ಪಡೆಯುತ್ತಿದ್ದು, ಅದನ್ನು ತಪ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ: ಕುಮಾರಸ್ವಾಮಿ

Loan Waiver of Women Unions If JDS Get Power in Karnataka Says HD Kumaraswamy grg

ಇಂಡಿ(ಜ.18):  ರಾಜ್ಯದ ಜನತೆಯ ಆಶೀರ್ವಾದದಿಂದ ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡಲಾಗುತ್ತದೆ. ರಾಜ್ಯದಲ್ಲಿನ 65 ವರ್ಷ ವಯಸ್ಸಿನ ಎಲ್ಲ ಹಿರಿಯರಿಗೆ ಪ್ರತಿ ತಿಂಗಳು .5 ಸಾವಿರ, ಅಂಗವಿಲರು, ವಿಧವೆಯರಿಗೆ ಪ್ರತಿ ತಿಂಗಳು .2,500 ಗಳನ್ನು ನೀಡಲಾತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ವಿಜಯಪುರ ಜಿಲ್ಲೆ, ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡ ಪಂಚರತ್ನ ಯಾತ್ರೆಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಯುವ ಸಮುದಾಯಕ್ಕೆ ಸರ್ಕಾರಿ, ಖಾಸಗಿ ಕೆಲಸ ಪಡೆಯಲು ಹರಸಾಹಸ ಪಡೆಯುತ್ತಿದ್ದು, ಅದನ್ನು ತಪ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಪಕ್ಷಕ್ಕೆ ಸ್ಪಷ್ಟಬಹುಮತ ನೀಡಿದರೆ ವಿಜಯಪುರ ಜಿಲ್ಲೆಯ ಪ್ರತಿ ಜಮೀನಿಗೆ ನೀರು ಒದಗಿಸಲಾಗುತ್ತದೆ. ವಿಜಯಪುರ ಜಿಲ್ಲೆಗೆ ನೀರಾವರಿ ಯೋಜನೆಯಿಂದ ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ವಿಜಯಪುರ ಜಿಲ್ಲೆಗೆ ನೀರಾವರಿ ಯೋಜನೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದರು.

Assembly election: ಜೆಡಿಎಸ್ ಗೆದ್ದರೆ ರೈತ ಚೈತನ್ಯ, ಕೃಷಿ ಬಂಧು ಜಾರಿ: ಕುಮಾರಸ್ವಾಮಿ

ಅಧಿಕಾರ ನೀಡಿದರೆ 5 ವರ್ಷಗಳಲ್ಲಿ ಕ್ರಾಂತಿಕಾರಿ ಬದಲಾವಣೆ

ಜೆಡಿಎಸ್‌ಗೆ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸರ್ಕಾರ ರಚಿಸಲು ಅವಕಾಶ ನೀಡಿದರೆ ಶಿಕ್ಷಣ, ಆರೋಗ್ಯ, ವಸತಿ, ಕೃಷಿ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ 5 ವರ್ಷಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜೆಡಿಎಸ್‌ ವರಿಷ್ಠ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಡಬಲ್‌ ಎಂಜಿನ್‌ ಸರ್ಕಾರದಿಂದ ಏನೂ ಪ್ರಯೋಜನವಿಲ್ಲ. ರೈತರ ಹಣವನ್ನು ಡಬಲ್‌ ಎಂಜಿನ್‌ ಸರ್ಕಾರಗಳು ಲೂಟಿ ಮಾಡುತ್ತಿವೆ. ಜನರ ವಿಮಾ ಹಣವನ್ನು ಲೂಟಿ ಮಾಡಲು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಿವೆ. ಈ ಸರ್ಕಾರಕ್ಕೆ ಅಭಿವೃದ್ಧಿ ಬೇಕಿಲ್ಲ. ರೈತರು ಮತ್ತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.

ರೈತರು ಸಾಲದಿಂದ ಆತ್ಮಹತ್ಯೆ ಮಾಡಿಕೊಳ್ಳಬಾರದು. ನಿಮಗಾಗಿ ನಾನಿದ್ದೇನೆ. ಶಿಕ್ಷಣ, ಆರೋಗ್ಯ, ವಸತಿ ಇತ್ಯಾದಿಗಳಿವೆ. ಸಾಲ ಮಾಡಿದ ರೈತರು ಹೆದರಬೇಕಿಲ್ಲ ಎಂದು ಹೇಳಿದರು. ನಿಮ್ಮ ಕಷ್ಟಬಗೆಹರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ನಿಮ್ಮ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಎಲ್ಲ ಸೌಲಭ್ಯ ಕಲ್ಪಿಸಿಕೊಡುತ್ತೇನೆ. ನಿನ್ನೆ ಒಂದೇ ದಿನ ಬೋನ್‌ ಮ್ಯಾರೋ ಕಾಯಿಲೆಗೆ ಚಿಕಿತ್ಸೆ ಕೊಡಿಸಿ ಎಂದು ನನ್ನ ಬಿಡದಿ ತೋಟಕ್ಕೆ ಬಂದಿದ್ದರು. ಈ ಚಿಕಿತ್ಸೆಗೆ 35 ಲಕ್ಷ ಖರ್ಚಾಗುತ್ತದೆ. ಇದನ್ನು ಭರಿಸಲು ಬಡವರಿಗೆ ಕಷ್ಟವಾಗುತ್ತದೆ. ನಾನು ಅಧಿಕಾರಕ್ಕೆ ಬಂದರೆ ಇಂಥವರಿಗೆ ಉಚಿತ ಚಿಕಿತ್ಸೆ ಕೊಡಿಸುತ್ತೇನೆ ಎಂದು ತಿಳಿಸಿದರು.

ದ್ರಾಕ್ಷಿ ಮತ್ತಿತರ ಬೆಳೆಗಳ ರಕ್ಷಣೆಗೆ ಕೋಲ್ಡ್‌ ಸ್ಟೋರೇಜ್‌ ನಿರ್ಮಾಣ ಮಾಡುತ್ತೇನೆ. ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಕೋಲ್ಡ್‌ ಸ್ಟೋರೇಜ್‌ ನಿರ್ಮಿಸಿ ಕೊಡಲಾಗುವುದು. ರೈತ ಚೈತನ್ಯ ಹಾಗೂ ತೆಲಂಗಾಣ ಮಾದರಿಯ ರೈತ ಬಂಧು ಯೋಜನೆ ಜಾರಿ ಮಾಡುತ್ತೇನೆ. ರೈತರಿಗೆ ದಿನದ 24 ಗಂಟೆ ನಿರಂತರ ಉಚಿತ ವಿದ್ಯುತ್‌ ನೀಡುತ್ತೇನೆ. ಐದು ವರ್ಷಗಳ ಪೂರ್ಣಾವಧಿ ಅಧಿಕಾರ ನೀಡಿದರೆ ಎಲ್ಲ ಸೌಲಭ್ಯ ಕಲ್ಪಿಸುತ್ತೇನೆ ಎಂದರು.

ಕೋಲಾರದಲ್ಲಿ ಸಿದ್ದರಾಮಯ್ಯ ಹರಕೆಯ ಕುರಿ: ಟಗರಿಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ಎಚ್‌.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗ ರಾಜ್ಯದಲ್ಲಿ ನೀರಾವರಿಗೆ .18000 ಕೋಟಿ ಅನುದಾನ ನೀಡಿದ್ದರು. ಈ ಅನುದಾನದಿಂದ ಕೃಷ್ಣಾ ನದಿ ನೀರು ಬಳಕೆ ಸಾಧ್ಯವಾಗಿದೆ. ಮಹಿಳಾ ಸ್ವ ಸಹಾಯ ಸಂಘಗಳಲ್ಲಿ ಮಹಿಳೆಯರು ಮಾಡಿರುವ ಎಲ್ಲ ಸಾಲಮನ್ನಾ ಮಾಡುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗಾಗಿ ಮಹಿಳೆಯರ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದರು. ಅದೇ ರೀತಿ 60 ವಷÜರ್‍ ಮೇಲ್ಪಟ್ಟಹಿರಿಯ ನಾಗರಿಕರಿಗೆ ಪಿಂಚಣಿಯನ್ನು . 6000 ಮಾಡಲಾಗುವುದು ಎಂದು ತಿಳಿಸಿದರು.

ಪಂಚರತ್ನ ಯೋಜನೆಗಳು ಎಲ್ಲರಿಗೂ ಅನುಕೂಲವಾಗಲಿವೆ. ಈ ಯೋಜನೆಗಳು ಧರ್ಮಾತೀತ, ಜಾತ್ಯತೀತವಾಗಿವೆ. ಈ ಯೋಜನೆಗಳು ಪ್ರತಿಯೊಬ್ಬರಿಗೂ ಸಲ್ಲುವ ಕಾರ್ಯಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Latest Videos
Follow Us:
Download App:
  • android
  • ios