ಬೆಂಗಳೂರು, (ನ.19): ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಈ ಆದೇಶ ನೀಡಿದೆ.

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ದಿನಾಂಕವೂ ಫಿಕ್ಸ್

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, 4 ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ  ಹೈಕೋರ್ಟ್ ಸೂಚಿಸಿದೆ. 

ಇದರೊಂದಿಗೆ ಇತ್ತೀಚೆಗೆ ರಾಜ್ಯ ಸರ್ಕಾರದ ಮೀಸಲಾತಿಯಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದವರಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.

ಗ್ರಾಮ ಪಂಚಾಯತಿ ಎಲೆಕ್ಷನ್‌ಗೆ ಗ್ರೀನ್ ಸಿಗ್ನಲ್: ಆಯೋಗಕ್ಕೆ ಕೋರ್ಟ್ ಮಹತ್ವದ ಸೂಚನೆ....!