ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೋವಿಂದ ಕಾರಜೋಳ ಗೆದ್ದಾಗಿದೆ. ಈ ಬಾರಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನುಡಿದರು.

ಚಿತ್ರದುರ್ಗ (ಏ.21): ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೋವಿಂದ ಕಾರಜೋಳ ಗೆದ್ದಾಗಿದೆ. ಈ ಬಾರಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನುಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಭರಮಸಾಗರದಲ್ಇ ನಡೆದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಭೆಯಲ್ಲಿ ಮಾತನಾಡಿದರು. ಇದೇ ವೇಳೆ 'ಪ್ರಧಾನಿ ಮೋದಿ ದೇಶಕ್ಕೆ ಅಂಟಿದ ಶನಿ' ಎಂಬ ಹೇಳಿಕೆ ಪ್ರಸ್ತಾಪಿಸಿ ತಿರುಗೇಟು ನೀಡಿದ ಬಿಎಸ್‌ವೈ, ರಮೇಶ್ ಕುಮಾರ ಅವರಂಥವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಚುನಾವಣೆ ಫಲಿತಾಂಶವೇ ಅವರಿಗೆ ಉತ್ತರ ಕೊಡುತ್ತದೆ. ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದನ್ನ ಅವರು ನೋಡಲಿದ್ದಾರೆ ಟಾಂಗ್ ನೀಡಿದರು.

ಏ.23ಕ್ಕೆ ಚಿತ್ರದುರ್ಗ, ಬೆಂಗಳೂರಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ಬಿಎಸ್‌ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಕಾರಜೋಳ ಪರ ಭರ್ಜರಿಯಾಗಿ ಮತಯಾಚನೆ ನಡೆಸಿದರು. ಭರಮಸಾಗರ ಭಾಗದಲ್ಲಿ ಲಿಂಗಾಯತ ಮತಗಳು ನಿರ್ಣಾಯಕವಾಗಿವೆ. ಈ ಹಿನ್ನೆಲೆ ಲಿಂಗಾಯತ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಇಂದು ಅಖಾಡಕ್ಕೆ ಇಳಿದ ಬಿಎಸ್‌ವೈ. ಈ ವೇಳೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕ ಎಸ್ ಕೆ ಬಸವರಾಜನ್ ಸೇರಿ ಗಣ್ಯರು ಉಪಸ್ಥಿತರಿದ್ದರು.