ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋಲನ್ನು ಅನುಭವಿಸಿದ ಮಧು ಬಂಗಾರಪ್ಪಗೆ ಇದೀಗ ಜೆಡಿಎಸ್ ಮತ್ತೊಂದು ಆಫರ್ ನೀಡುತ್ತಿದೆ.  

ಬೆಂಗಳೂರು : ಉಪಚುನಾವಣೆಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳ ಹೊಂದಾಣಿಕೆಯಾಗಿದ್ದು, ಇನ್ನುಳಿದ 25 ಕ್ಷೇತ್ರಗಳ ಮೈತ್ರಿ ಬಗ್ಗೆ ಶೀಘ್ರ ಕಾಂಗ್ರೆಸ್‌ ಜತೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಮಧು ಬಂಗಾರಪ್ಪ ಅವರೇ ಅಭ್ಯರ್ಥಿಯಾಗಲಿದ್ದಾರೆ. ಶಿವಮೊಗ್ಗದಲ್ಲಿ ಸೋಲನುಭವಿಸಿರಬಹುದು. 

ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಗೆಲುವು ಸಾಧಿಸಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಗೆ ಇದು ಒಳ್ಳೆಯ ವೇದಿಕೆಯಾಗಿದ್ದು, ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಅವರೇ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.