ರಾಷ್ಟ್ರಪ್ರಶಸ್ತಿ ವಿಜೇತ ನಟಿ ಹಾಗೂ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಶೋಭನಾ ಭಾನುವಾರ ತಿರುವನಂತಪುರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ತಿರುವನಂತಪುರ (ಏ.15): ರಾಷ್ಟ್ರಪ್ರಶಸ್ತಿ ವಿಜೇತ ನಟಿ ಹಾಗೂ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಶೋಭನಾ ಭಾನುವಾರ ತಿರುವನಂತಪುರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಿರುವನಂತಪುರಂನಲ್ಲಿ ರಾಜೀವ್‌ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ನಾವು ಅವರ ಬೆಂಬಲಕ್ಕೆ ನಿಲ್ಲುತ್ತಿರುವುದು ವಿಶೇಷ ಎಂದರು. ಇಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲಾಗಿದೆ ಎಂದರು.

ಶೋಭನಾ ಅವರ ಬೆಂಬಲಕ್ಕೆ ರಾಜೀವ್‌ ಸಂತೋಷ ವ್ಯಕ್ತಪಡಿಸಿದ್ದು, ‘ಮಣಿಚಿತ್ರತಾಳು’ ಚಿತ್ರದ ನಟಿ ಸ್ಫೂರ್ತಿದಾಯಕ ತಾರೆ ಎಂದು ಶ್ಲಾಘಿಸಿದರು.

ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್