Asianet Suvarna News Asianet Suvarna News

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಗತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ವಿಜಯೇಂದ್ರ ನಾಲ್ಕು ಗೋಡೆ ಮಧ್ಯೆ ಅನೇಕ ವಿಚಾರ ಚರ್ಚೆ ಆಗಿದೆ. ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿರುವುದು ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

lok sabha election 2024 B Y Vijayendra hints candidate change in Mysuru Kodagu constituency gow
Author
First Published Mar 9, 2024, 11:51 AM IST

ಬೆಂಗಳೂರು (ಮಾ.9): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಸರತ್ತು ನಡೆಯುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಗತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ವಿಜಯೇಂದ್ರ ನಾಲ್ಕು ಗೋಡೆ ಮಧ್ಯೆ ಅನೇಕ ವಿಚಾರ ಚರ್ಚೆ ಆಗಿದೆ. ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದಿದ್ದು, ಪರೋಕ್ಷವಾಗಿ ಪ್ರತಾಪ್ ಸಿಂಹ್ ಗೆ ಟಿಕೆಟ್ ಮಿಸ್ ಆಗುವ ಸುಳಿವು ನೀಡಿದರಾ? ಎಂಬ ಅನುಮಾನ ಮೂಡಿದೆ.

ಮಾತ್ರವಲ್ಲ ಮೈಸೂರಿಗೆ ಯದುವೀರ್ ಒಡೆಯರ್ ಸ್ಪರ್ಧೆ ವಿಚಾರವಾಗಿ ವಿಜಯೇಂದ್ರ ಹೇಳಿಕೆ ನೀಡಿದ್ದು, ನಾನು ಊಹಾಪೋಹಾಗಳಿಗೆ ಉತ್ತರ ಕೊಡಲ್ಲ
ನಾಲ್ಕು ಗೋಡೆಗಳ ಮಧ್ಯೆ ನಡೆದ ಚರ್ಚೆ ಬಹಿರಂಗಪಡಿಸಲ್ಲ. ಉತ್ತಮ, ಗೆಲ್ಲುವ ಅಭ್ಯರ್ಥಿ ಹಾಕ್ತೇವೆ ಎಂದು ವಿಜಯೇಂದ್ರ ಅವರು ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು ನಿಧನ

ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ, ಅಪ್ಪಚ್ಚು ರಂಜನ್‌, ಮೈಸೂರು ಮಹರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹೆಸರು ಚರ್ಚೆಯಲ್ಲಿದೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ. ಇದರ ಜೊತೆಗೆ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಕೂಡ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಜೊತೆಗೆ ಪ್ರತಾಪ್‌ ಸಿಂಹಗೆ ಟಿಕೆಟ್‌ ಬೇಡ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸೇರಿ ಹಲವು ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಕಾರಣ ಸ್ಥಳೀಯ ನಾಯಕರ ಬೆಳವಣಿಗೆಗೆ ಸಿಂಹ ಕೊಡುಗಡೆ ಏನೂ ಇಲ್ಲ. ಸ್ಥಳೀಯ ನಾಯಕರ ಜೊತೆಗೆ ಬಹಿರಂಗವಾಗಿ ಕಾದಾಡುತ್ತಾರೆ. ಹೀಗಾಗಿ ಹೊಸಬರಿಗೆ ಟಿಕೆಟ್‌ ಕೊಡಿ ಎಂದು ಬಿಎಸ್‌ವೈ ಹೈಕಮಾಂಡ್‌ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇನ್ನು ಇದೇ ವೇಳೆ ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಸಿಗಲ್ವಾ ಎಂಬ ಪ್ರಶ್ನೆಗೆ ಉತ್ತರ ನೀಡಿರುವ ವಿಜಯೇಂದ್ರ ಅವರು ಆತರ ಏನೂ ಇಲ್ಲ. ಕೇಂದ್ರ ನಾಯಕರು ತೀರ್ಮಾನ ಮಾಡುತ್ತಾರೆ ಎಂದಷ್ಟೇ ಹೇಳಿದರು. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಬಗ್ಗೆ ಡಾ ಮಂಜುನಾಥ್ ಜೊತೆ ಮಾತಾಡಿದ್ದೀರಾ ಎಂಬ ಪ್ರಶ್ನೆಗೆ ಏನು ಮಾತಾಡದೇ ಸೈಲೆಂಟಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ. ಕೈಮುಗಿದು ನಿಂತರು. ಇನ್ನು ಕೆಲವು ಕ್ಷೇತ್ರಗಳಲ್ಲಿ ಹಾಲಿಗಳಿಗೆ ವಿರೋಧ ವಿಚಾರವಾಗಿ ಮಾತನಾಡಿದ ಅವರು ಅಭಿಪ್ರಾಯ ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಅಂತಿಮವಾಗಿರುತ್ತದೆ. ಗೊಂದಲದ ಪ್ರಶ್ನೆ ಇಲ್ಲ. ಯಾರನ್ನೇ ಅಭ್ಯರ್ಥಿ‌ ಮಾಡಿದರೂ ಒಟ್ಟಾಗಿ ಕೆಲಸ ಮಾಡಿ ಗೆಲ್ಲಿಸ್ತೇವೆ.

ಮೈಸೂರು ಮಾಜಿ ಕಾರ್ಪೊರೇಟರ್ ಸಹೋದರನ ಕೊಚ್ಚಿ ಹತ್ಯೆ

ಲೋಕಸಭೆ ಚುನಾವಣೆ ಅಭ್ಯರ್ಥಿಗಳಿಗಳಿಗೆ ಸಂಬಂಧಿಸಿ ಹೈಕಮಾಂಡ್‌ ಬಿಡುಗಡೆ ಮಾಡಲಿರುವ 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆಯಂತೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿ ಎಲ್ಲಾ 28 ಕ್ಷೇತ್ರಗಳಿಗೂ ಒಂದೇ ಬಾರಿ ಟಿಕೆಟ್‌ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ಜೊತೆಗೆ  ಈ ಬಾರಿ ಸುಮಾರು 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಇದೆ ಎಂದು ಸುದ್ದಿ ಇದೆ.  ಈಗಾಗಲೇ ರಾಜ್ಯದಿಂದ ಶಾರ್ಟ್ ಲಿಸ್ಟ್  ಮಾಡಿ ಬಿಜೆಪಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಸುಮಾರು 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್‌ ತಪ್ಪಲಿದೆ ಎಂದು ಸುದ್ದಿಯಾಗಿದೆ.

ಇನ್ನು ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಶೋಭ ಕರಂದ್ಲಾಜೆ ಅವರಿಗೆ ಟಿಕೆಟ್‌ ಮಿಸ್‌ ಆಗಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಶೋಭಾ ಸ್ವಪಕ್ಷೀಯರಿಂದಲೇ ಈ ಹುನ್ನಾರ ಎಂದು ಕಿಡಿಕಾರಿದ್ದಾರೆ.

ಇನ್ನು ಒಂದೆಡೆ ಮೈಸೂರು ರಾಜಮನೆತನದ ಯದುವೀರ್ ಅವರನ್ನು ಕೊಡಗು ಮೈಸೂರು ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ನಡೆಸುತ್ತಿದ್ದರೆ, ಅತ್ತ ನಿವೃತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿ  ಕೊಡಗಿನಲ್ಲಿ ಪ್ರಚಾರ ಆರಂಭಿಸಿದ್ದಾರೆ. ನಿಮ್ಮ ಭಾಸ್ಕರ್ ರಾವ್ ಎಂಬ ಹೆಸರಿನಲ್ಲಿ ಪ್ರಚಾರ ಪತ್ರ ವಿತರಿಸುತ್ತಿದ್ದು, ಪರಿಚಯಸ್ಥರನ್ನು ಭೇಟಿಯಾಗಿ ಸಪೋರ್ಟ್ ಕೇಳುತ್ತಿದ್ದಾರೆ.

Follow Us:
Download App:
  • android
  • ios