Asianet Suvarna News Asianet Suvarna News

ಸಿದ್ದರಾಮಯ್ಯನವರ ಆಡಳಿತಕ್ಕೂ ಅನುಭವಕ್ಕೂ ಬಹಳ ವ್ಯತ್ಯಾಸವಿದೆ: ಬೊಮ್ಮಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಅನುಭವಕ್ಕೂ, ಅವರ ಆಡಳಿತಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. 
 

Lok Sabha Election 2024 Basavaraj Bommai Slams On CM Siddaramaiah At Haveri gvd
Author
First Published Apr 6, 2024, 1:59 PM IST

ಹಾನಗಲ್ಲ (ಏ.06): ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಅನುಭವಕ್ಕೂ, ಅವರ ಆಡಳಿತಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಡನೆ ಬಹಿರಂಗ ಪ್ರಚಾರ ಸಭೆ ನಡೆಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಒಂದು ಸರ್ಕಾರವಿದೆ ಅಷ್ಟೇ. ಸಿದ್ದರಾಮಣ್ಣನ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಇಲಾಖೆಯಲ್ಲಿಯೂ ಒಂದು ಸಣ್ಣ ಕೆಲಸವೂ ಕೂಡ ಆಗಿಲ್ಲ. 

ಗ್ರಾಮೀಣ ಅಭಿವೃದ್ಧಿಯಲ್ಲಿ ಕೆಲಸ ಆಗಿಲ್ಲ. ಜನರ ಕೆಲಸಗಳನ್ನು ಈ ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ. ಯಾವುದೇ ಇಲಾಖೆಯಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದರು. ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟಿದ್ದ ರು. ೧೧೩೦೦ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ. ಎಸ್‌ಸಿ, ಎಸ್‌ಟಿ ಜನಾಂಗಗಳಿಗೆ ಸಾಲಸೌಲಭ್ಯ ಸಿಗುತ್ತಿಲ್ಲ, ಗಂಗಾ ಕಲ್ಯಾಣ ಬೋರ್ ಸಿಗುತ್ತಿಲ್ಲ. ಇನ್ನು ರೈತರ ಬಗ್ಗೆಯಂತೂ ಈ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಕಾಳಜಿಯೂ ಇಲ್ಲ. ೧೦ ತಿಂಗಳಾದರೂ ರೈತರು ಒಂದು ಕಾಳನ್ನು ಕೂಡ ಬೆಳೆದಿಲ್ಲ. 

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮೂವರು ಸುರೇಶ್, ಐವರು ಮಂಜುನಾಥ್ ಸ್ಪರ್ಧೆ!

ಹಿಂದೆ ಬಿಜೆಪಿ ಸರ್ಕಾರದಲ್ಲಿ ನಾನು ಸಿಎಂ ಆಗಿದ್ದಾಗ, ಒಂದೇ ತಿಂಗಳಿನಲ್ಲಿ ರೈತರಿಗೆ ಬೆಳೆ ಪರಿಹಾರ ಕೊಟ್ಟಿದ್ದೆವು. ೧೭ ಲಕ್ಷ ರೈತರಿಗೆ ಪರಿಹಾರ ಕೊಟ್ಟೆವು. ಆದರೆ, ರೈತರ ಕೆಲಸ ಮಾಡಲು ಈ ಕಾಂಗ್ರೆಸ್ ಸರ್ಕಾರಕ್ಕೆ ಮನಸ್ಸಿಲ್ಲ. ಎಲ್ಲಾ ಜನಗಿರೂ ಸರಿಯಾದ ಗ್ಯಾರೆಂಟಿ ಮುಟ್ಟಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣ ಪ್ರಗತಿಯಲ್ಲಿದೆ ಎಂದು ಬರುತ್ತಲೇ ಇದೆ. ರಾಜ್ಯಕ್ಕೆ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಿಂದ ಕೊಟ್ಟಿದ್ದಾರೆ ಎಂದರು. ಮಾಜಿ ಸಚಿವ ಮನೋಹರ್ ತಹಸೀಲ್ದಾರ್, ಮಾಜಿ ಶಾಸಕ ಶಿವರಾಜ ಸಜ್ಜನರ, ಪದ್ಮನಾಭ ಕುಂದಾಪುರ, ಮಾಲತೇಶ ಸೊಪ್ಪಿನ ಇತರರು ಇದ್ದರು.

ಬಡತನದ ವಿರುದ್ಧ ಸಮರ ಸಾರಿರುವ ಪ್ರಧಾನಿ ಮೋದಿ: ಬಡತನದ ವಿರುದ್ಧ ಸಮರ ಸಾರಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ದಿನದ ೧೮ ಗಂಟೆ ದೇಶಕ್ಕಾಗಿ ಕೆಲಸ ಮಾಡುತ್ತಾರೆ. ಆರೋಗ್ಯ ಭಾರತದ ಕನಸು ನನಸಾಗಿಸಲು ಪಣತೊಟ್ಟು ಯಶಸ್ಸಿನತ್ತ ದಾಪುಗಾಲು ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಲೋಕಸಭಾ ಚುನಾವಣಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾನಗಲ್ಲಿನ ಸಾವಿತ್ರಮ್ಮ ಉದಾಸಿ ಕಲ್ಯಾಣ ಮಂಟಪದ ಬಯಲಿನಲ್ಲಿ ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ೧೧ ಸಾವಿರ ಕೋಟಿ ದಲಿತರ ಅಭಿವೃದ್ಧಿ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿರುವ ಕಾಂಗ್ರೆಸ್ ಸಿದ್ದರಾಮಯ್ಯ ಸರಕಾರ ದಲಿತ ಅಭಿವೃದ್ಧಿ ಬಗೆಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ. 

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕೋಟ ಶ್ರೀನಿವಾಸ ಪೂಜಾರಿಗೆ ಸಮನ್ಸ್

ಗ್ಯಾರಂಟಿಗಳು ಕೇವಲ ಘೋಷಣೆಗಳು. ನಮ್ಮ ಸರಕಾರ ರೈತರ ಮಕ್ಕಳಿಗೆ ನೀಡುತ್ತಿದ್ದ ಅನುದಾನವನ್ನು ನಿಲ್ಲಿಸಿದ ಕಾಂಗ್ರೆಸ್ ರೈತರ ಪರವಾಗಿಲ್ಲ. ಯುವ ನಿಧಿ ಗ್ಯಾರಂಟಿ ಘೋಷಿಸಿದ ಈ ರಾಜ್ಯದ ಕಾಂಗ್ರೆಸ್ ಸರಕಾರ ಎಷ್ಟು ಹಣ ನೀಡಿದೆ? ಎಲ್ಲದಕ್ಕೂ ನಾಳೆ ಬಾ ಎಂದು ಹೇಳುವ, ಖಾಲಿ ಖಜಾನೆ ಸರಕಾರ ಎಂದು ವ್ಯಂಗ್ಯವಾಡಿದರು. ಬಿಜೆಪಿ ನಾಯಕ ಬಿ.ಎಸ್. ಅಕ್ಕಿವಳ್ಳಿ ಮಾತನಾಡಿ, ಬಿಜೆಪಿ ೪೦೦ಕ್ಕೂ ಅಧಿಕ ಸ್ಥಾನಗಳಲ್ಲಿ ಈ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಾಗಿ ಎಲ್ಲ ಸಮೀಕ್ಷೆಗಳು ವರದಿ ನೀಡಿವೆ. ಇಡೀ ಭಾರತದಲ್ಲಿ ಕೇವಲ ೩೮ ಸ್ಥಾನಗಳನ್ನು ಗೆಲ್ಲಲು ಕೂಡ ಕಾಂಗ್ರೆಸ್ ಸಮರ್ಥವಿಲ್ಲ ಎಂದರು.

Follow Us:
Download App:
  • android
  • ios