Asianet Suvarna News Asianet Suvarna News

ಬಿಜೆಪಿ ಡಾ.ಸಿ.ಎನ್.ಮಂಜುನಾಥ್‌ ವಿರುದ್ಧ ಬಿಎಸ್‌ಪಿಯ ಡಾ.ಸಿ.ಎನ್‌ ಮಂಜುನಾಥ್‌ ಸ್ಪರ್ಧೆ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮತ್ತೊಬ್ಬ ಡಾ.ಮಂಜುನಾಥ್‌ ಚುನಾವಣಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ಆದ ನಾನು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದೇನೆ ಎಂದು ಡಾ. ಮಂಜುನಾಥ್ ತಿಳಿಸಿದರು.

Lok Sabha Election 2024 BJP Dr CN Manjunath vs BSP Dr CN Manjunath competition gvd
Author
First Published Mar 28, 2024, 4:38 AM IST

ಚನ್ನರಾಯಪಟ್ಟಣ (ಮಾ.28): ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮತ್ತೊಬ್ಬ ಡಾ.ಮಂಜುನಾಥ್‌ ಚುನಾವಣಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ಆದ ನಾನು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದೇನೆ ಎಂದು ಡಾ. ಮಂಜುನಾಥ್ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ ಮತಗಳೇ ನಿರ್ಣಾಯಕ ಪಾತ್ರ ವಹಿಸಲಿದ್ದು, ಸಮಾಜದಲ್ಲಿ ಶೋಷಣೆಗೊಳಗಾದ ನಮ್ಮ ಸಮುದಾಯವನ್ನು ಎಚ್ಚರಗೊಳಿಸಲು ಮತ್ತು ಸಂಘಟಿಸಲು ಈ ನಿರ್ಧಾರ ಕೈಗೊಂಡಿದ್ದು, ಡಾ.ಬಿ.ಆರ್. ಅಂಬೇಡ್ಕರ್‌ರವರು ನೀಡಿದ ಮತದಾನದ ಹಕ್ಕನ್ನು ಹೇಗೆ ಚಲಾಯಿಸಬೇಕೆಂದು ನಮ್ಮ ದಲಿತರು ತಿಳಿದುಕೊಂಡು ಮತದಾನ ಮಾಡಬೇಕು ಎಂದರು.

ದಾವಣಗೆರೆ ಬಂಡಾಯ ಬಗೆಹರಿಸಿದ ಬಿಎಸ್‌ವೈ: ರವೀಂದ್ರನಾಥ್‌ ನೇತೃತ್ವದಲ್ಲಿ ಚುನಾವಣೆಗೆ ಸರ್ವಸಮ್ಮತಿ

ಮತದಾರರಲ್ಲಿ ಗೊಂದಲ: ಈ ಬಾರಿ ಭಾರತೀಯ ಜನತಾ ಪಾರ್ಟಿ ಲೋಕಸಭಾ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಕಣಕ್ಕಿಳಿದಿದ್ದು, ಅವರಿಗೆ ಸ್ಪರ್ಧೆ ಒಡ್ಡಲು ಅದೇ ಹೆಸರಿನ ಡಾ. ಸಿ.ಎನ್. ಮಂಜುನಾಥ್ ಎಂಬುವರು ಬಹುಜನ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಕುತೂಹಲ ಸಂಗತಿಯೆಂದರೆ ಒಂದೇ ಹೆಸರು ಹಾಗೂ ತಂದೆಯ ಹೆಸರೂ ಕೂಡ ಒಂದೇ ಆಗಿದ್ದು, ಒಂದೇ ಜಿಲ್ಲೆ, ಒಂದೇ ತಾಲೂಕು ಹಾಗೂ ಇಬ್ಬರಿಗೂ ಗೌರವ ಡಾಕ್ಟರೇಟ್ ದೊರೆತಿರುವುದು ಅಚ್ಚರಿಯ ಸಂಗಿತಿಯಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

Follow Us:
Download App:
  • android
  • ios