ಮುಂದಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಾಕಿ ಇರಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ.

ನವದೆಹಲಿ (ಮಾ.27): ಬಿಜೆಪಿ ಮುಂದಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಾಕಿ ಇರಿಸಿಕೊಂಡಿದ್ದ ಚಿತ್ರದುರ್ಗ ಕ್ಷೇತ್ರದಲ್ಲಿ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳ ಅವರಿಗೆ ಈ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಕೇಂದ್ರ ಸಚಿವ ನಾರಾಯಣ ಸ್ವಾಮಿ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವ ಇಂಗಿತ ತೋರದ ಕಾರಣ, ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಬಿಎನ್‌ ಚಂದ್ರಪ್ಪ ಅವರ ವಿರುದ್ಧ ಗೋವಿಂದ ಕಾರಜೋಳ ಸ್ಪರ್ಧೆ ಮಾಡಲಿದ್ದಾರೆ. ವಿಜಯಪುರದಿಂದ ಟಿಕೆಟ್‌ ನಿರೀಕ್ಷೆ ಇಟ್ಟಿದ್ದ ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್‌ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ಕರ್ನಾಟಕದ ಎಲ್ಲಾ 25 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.

ಕೇಂದ್ರ ಸಚಿವ ನಾರಾಯಣಸ್ವಾಮಿ ನಿರಾಸಕ್ತಿಯಿಂದಾಗಿ ಈ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ನೀಡಬೇಕು ಎನ್ನುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ ತಲೆಕೆಡಿಸಿಕೊಂಡಿತ್ತು. ಕೊನೆಗೆ ಅಳೆದು ತೂಗಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ.