ಲೋಕಸಭಾ ಚುನಾವಣೆ: ಶಿಕಾರಿಪುರದಲ್ಲಿ ರಾಘವೇಂದ್ರ ಪರ ವಿಜಯೇಂದ್ರ ಭರ್ಜರಿ ಪ್ರಚಾರ!
ಶಿವಮೊಗ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಗೆ ಬರುವ ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಹಿರಿಯ ಸಹೋದರ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಪರ ಭಾನುವಾರ ಭರ್ಜರಿ ಪ್ರಚಾರ ನಡೆಸಿದರು.
ಶಿಕಾರಿಪುರ (ಏ.08): ಶಿವಮೊಗ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಗೆ ಬರುವ ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಹಿರಿಯ ಸಹೋದರ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಪರ ಭಾನುವಾರ ಭರ್ಜರಿ ಪ್ರಚಾರ ನಡೆಸಿದರು. ಎರಡು ದಿನಗಳ ಕಾಲ ಪ್ರಚಾರಕ್ಕಾಗಿ ಆಗಮಿಸಿರುವ ವಿಜಯೇಂದ್ರ, ಸೋಮವಾರವೂ ಶಿಕಾರಿಪುರ ಕ್ಷೇತ್ರ ವ್ಯಾಪ್ತಿಯಲ್ಲಿ ರಾಘವೇಂದ್ರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ತವರು ಕ್ಷೇತ್ರ ಶಿಕಾರಿಪುರದಲ್ಲಿ ರಾಘವೇಂದ್ರಗೆ ಹೆಚ್ಚಿನ ಲೀಡ್ ಕೊಡಿಸಲು ಪಣ ತೊಟ್ಟಿರುವ ಅವರು, ಭಾನುವಾರ ಶಿಕಾರಿಪುರ ತಾಲೂಕಿನ ಕಾಗಿನೆಲ್ಲಿ, ಹಿತ್ತಲ, ಈಸೂರು ,ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಅವರು ಪ್ರಚಾರ ನಡೆಸಿ, ಬಿಜೆಪಿ ಪರ ಮತಯಾಚಿಸಿದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ಮೀರಿ ಬಿಜೆಪಿ ಪರ ಒಲವು ಕಾಣಿಸುತ್ತಿದೆ. ಮೋದಿ ಜನಪ್ರಿಯತೆ ದಿನೇ ದಿನೆ ಹೆಚ್ಚಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ನಿದ್ದೆಗೆಡಿಸಿದೆ. ಮನೆ, ಮನೆಯಲ್ಲಿ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ.
ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕು ಎಂದು ಹರಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲೂ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್‌ಗೆ ರಾಜ್ಯದಲ್ಲಿ ಒಂದು ಸ್ಥಾನವೂ ಬರುವುದಿಲ್ಲ. ರಾಘವೇಂದ್ರ ಮಾಡಿರುವ ಅಭಿವೃದ್ಧಿ ಬಗ್ಗೆ ಕ್ಷೇತ್ರದ ಜನ ಮಾತನಾಡುತ್ತಿದ್ದಾರೆ. ರಾಘವೇಂದ್ರ ಈ ಬಾರಿ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದರು. ಮುಂಬರುವ ದಿನಗಳಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಪ್ರಚಾರಕ್ಕೆ ಬರಲಿದ್ದಾರೆ ಎಂದು ಇದೇ ವೇಳೆ ಅವರು ತಿಳಿಸಿದರು.
Lok Sabha Election 2024: ಕಲಬುರಗಿ: ಮಾವಂದಿರ ಪ್ರಭಾವದಲ್ಲಿ ಅಳಿಯಂದಿರ ಹವಾ!
ಎಸ್‌ಟಿಎಸ್‌ಗೆ ವಿನಾಶಕಾಲೇ ವಿಪರೀತ ಬುದ್ಧಿ: ವಿನಾಶಕಾಲೇ ವಿಪರೀತ ಬುದ್ಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಹರಿಹಾಯ್ದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಶೇಖರ್ ಅವರು ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜಕೀಯ ಜೀವನದಲ್ಲಿ ಬಹಳ ದೊಡ್ಡ ತಪ್ಪು ಮಾಡಿದ್ದಾರೆ. ಮುಂದೆ ಅವರೇ ಅನುಭವಿಸುತ್ತಾರೆ ಎಂದರು. ಇದರ ಬಗ್ಗೆ ಮುಂದೆ ನೋಡುತ್ತೀರಿ. ರಾಜಕೀಯವಾಗಿ ತಪ್ಪು ನಿರ್ಧಾರ ಮಾಡಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಥವರು ದೇಶದಲ್ಲಿ ಇದ್ದಾಗ ಸೋಮಶೇಖರ್ ತಪ್ಪು ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.