Lok sabha election 2024: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿ ಯಾರಾಗಬಹುದು ಎಂಬ ತೀವ್ರ ಕುತೂಹಲ ಮೂಡಿಸಿದ್ದು, ಕಳೆದ ಎರಡು ದಿನಗಳಿಂದ ಮಂಡ್ಯ ಸಂಸದೆ ಸುಮಲತಾ ಅಥವಾ ಬೆಂಗಳೂರಿನ ಸಂಸದ ಡಿ.ವಿ.ಸದಾನಂದಗೌಡ ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿದ್ದು, ಮೈತ್ರಿಕೂಟ ಹಾಗೂ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಚಿಕ್ಕಬಳ್ಳಾಪುರ (ಮಾ.19) : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿ ಯಾರಾಗಬಹುದು ಎಂಬ ತೀವ್ರ ಕುತೂಹಲ ಮೂಡಿಸಿದ್ದು, ಕಳೆದ ಎರಡು ದಿನಗಳಿಂದ ಮಂಡ್ಯ ಸಂಸದೆ ಸುಮಲತಾ ಅಥವಾ ಬೆಂಗಳೂರಿನ ಸಂಸದ ಡಿ.ವಿ.ಸದಾನಂದಗೌಡ ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿದ್ದು, ಮೈತ್ರಿಕೂಟ ಹಾಗೂ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಡ್ಯ ಟಿಕೆಟ್‌ಗೆ ಸುಮಲತಾ ಪ್ರಯತ್ನ
ನಟ ಹಾಗೂ ರಾಜಕಾರಣಿ ದಿ.ಅಂಬರೀಶ್ ಪತ್ನಿ ಸುಮಲತಾ ರವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಭ್ಯರ್ಥಿಯಾದರೆ ಮೈತ್ರಿಕೂಟದ ನಾಯಕರು, ಕಾರ್ಯಕರ್ತರು ಬೆಂಬಲಿಸಬೇಕಾದ ಅನಿವಾರ್ಯತೆ ಇದೆ. ಆದರೆ ಮಂಡ್ಯದಿಂದಲೇ ಸ್ಪರ್ಧಿಸಬೇಕೆಂಬ ಸುಮಲತಾರ ಆಕಾಂಕ್ಷೆಗೆ ಮೈತ್ರಿ ಕೂಟ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ನಾನೊಬ್ಬನೇ ಅಭ್ಯರ್ಥಿಗಳ ಆಯ್ಕೆಮಾಡಲು ಸಾಧ್ಯವಿಲ್ಲ: ಈಶ್ವರಪ್ಪಗೆ ವಿಜಯೇಂದ್ರ ತಿರುಗೇಟು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರೂಕೂಟದ ಮೂಲಕ ತಮ್ಮ ಸ್ಪರ್ಧೆಗೆ ಅವಕಾಶ ಇಲ್ಲದಿರುವ ಕಾರಣ ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಮುಖಂಡರುಗಳನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಡಾ.ಸುಧಾಕರ್, ಅಲೋಕ್‌ಗೆ ನಿರಾಸೆ?
ಇನ್ನು ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ರ ಪುತ್ರ ಅಲೋಕ್ ವಿಶ್ವನಾಥ್ ಇಬ್ಬರೂ ಸಹ ಟಿಕೆಟ್ ಗಾಗಿ ಶತ ಪ್ರಯತ್ನ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಬ್ಬರನ್ನು ಸಮಾಧಾನಪಡಿಸಿ, ಸುಮಲತಾರಿಗೆ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿದ್ದ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಕ್ಷೇತ್ರಕ್ಕೆ ಸೇರಿದ ಅಲೋಕ್ ವಿಶ್ವನಾಥ್ ರವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕಾರಣ ಇವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆ ಇತ್ತು. ಇಬ್ಬರೂ ಟಿಕೆಟ್‌ಗಾಗಿ ಅವರದೇಯಾದ ಕಾರ್ಯತಂತ್ರಗಳನ್ನು ಬಳಸುತ್ತಿದ್ದರು.
ಬೈಕ್ ರ್‍ಯಾಲಿ ನಡೆಸಿದ್ದ ಅಲೋಕ್
ಅಲೋಕ್ ವಿಶ್ವನಾಥ್ ಕೆಲವು ದಿನಗಳ ಹಿಂದೆ ಬೃಹತ್ ಬೈಕ್ ರ್‍ಯಾಲಿ ನಡೆಸಿದರು. ಕಳೆದ ಅಮಾವಾಸ್ಯೆಯ ದಿನ ಚಿಕ್ಕಬಳ್ಳಾಪುರದ ವೀರಾಂಜನೇಯ ಸ್ವಾಮಿ ದೇವಾಲಯಕ್ಕೆ ಅಮಾವಾಸ್ಯೆ ಪೂಜೆಗೆ ಬಂದಿದ್ದರು ಅಲ್ಲಿಯೂ ಸಹ ಇವರು ಚುನಾವಣಾ ಕ್ಷೇತ್ರದ ಆಕಾಂಕ್ಷಿಯಾಗಿ ಬಂದಿದ್ದು, ಬಿಜೆಪಿ ಅನೇಕ ಮಂದಿ ಮುಖಂಡರುಗಳನ್ನು ಭೇಟಿಯಾಗಿದ್ದರು.
ಅಲೋಕ್ ವಿಶ್ವನಾಥ್ ರ ತಂದೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಸಹ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ಮುಖಂಡರುಗಳ ಮತ್ತು ಕಾರ್ಯಕರ್ತರ ಸಭೆಗಳನ್ನು ನಡೆಸಿದ್ದು, ಈ ಸಭೆಗಳಲ್ಲಿ ಡಾ.ಕೆ.ಸುಧಾಕರ್‌ಗಾಗಲಿ, ಅಲೋಕ್ ವಿಶ್ವನಾಥ್ ಗಾಗಲಿ ಪಕ್ಷದ ವರಿಷ್ಠರು ಟಿಕೆಟ್ ನೀಡಬೇಕೇ ಹೊರತು, ಹೊರಗಿನವರನ್ನು ಅಭ್ಯರ್ಥಿಯಾಗಿ ಮಾಡಬಾರದು ಎಂದು ಮನವಿ ಮಾಡಿದ್ದರು.
ಟಿಕೆಟ್‌ಗಾಗಿ ಡಾ.ಸುಧಾಕರ್ ಪ್ರಯತ್ನ
ಮಾಜಿ ಸಚಿವ ಡಾ.ಕೆ.ಸುಧಾಕರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಈಗ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಮತ್ತೆ ಕ್ಷೇತ್ರದಲ್ಲಿ ಹಿಡಿತ ಸಾಧಿಸುವ ಪ್ರಯತ್ನ ನಡೆಸಿದ್ದರು. ಬಿಜೆಪಿ ವರಿಷ್ಠರನ್ನು ಅನೇಕ ಬಾರಿ ಭೇಟಿ ಮಾಡಿ ಟಿಕೆಟ್ ತಮಗೆ ನೀಡಬೇಕು ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಎಂದು ಮನವರಿಕೆ ಮಾಡಿಕೊಟ್ಟಿದ್ದರು.
ಕರ್ನಾಟಕ ಬಿಜೆಪಿ ಒಂದು ವಂಶ, ಒಂದು ಕುಟುಂಬದ ಕಪಿಮುಷ್ಠಿಯಲ್ಲಿದೆ; ಕೆ.ಎಸ್. ಈಶ್ವರಪ್ಪ ಆರೋಪ
ಆದರೆ ಈಗ ಚಿಕ್ಕಬಳ್ಳಾಪುರದಲ್ಲಿ ಈ ಇಬ್ಬರೂ ಆಕಾಂಕ್ಷಿಗಳನ್ನು ಕೈಬಿಟ್ಟು ಸಂಸದೆ ಸುಮಲತಾ ಅಥವಾ ಬಿಜೆಪಿ ತೊರೆದು ಕಾಂಗ್ರೆಸ್‌ನತ್ತ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಹೆಸರು ಕೇಳಿ ಬರುತ್ತಿದೆ. ಈ ನಾಲ್ವರಲ್ಲಿ ಯಾರು ಚಿಕ್ಕಬಳ್ಳಾಪುರದ ಅಭ್ಯರ್ಥಿ ಎಂಬುದು ಜಿಲ್ಲೆಯಲ್ಲಿ ಕುತೂಹಲ ಮೂಡಿಸಿದೆ.
ಕಮಲ ಗೆಲ್ಲುವುದು ಮುಖ್ಯ
ಮತ್ತೊಂದು ವಿಶೇಷ ಎಂದರೆ ಬಿಜೆಪಿಯ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಸಹ ಈ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರೇ ಆದರೂ ಸಹ ನಮಗೆ ಮುಖ್ಯವಾಗಿರುವುದು ಕಮಲ ಕಮಲದ ಗುರುತಿಗೆ ಮತ ನೀಡಬೇಕು ಹಾಗೂ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಹಾಗಾಗಿ ಅಭ್ಯರ್ಥಿಯಲ್ಲಿ ಮುಖ್ಯವಲ್ಲ ಕಮಲವೇ ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.